ಮಾದಕ ವಸ್ತು ಸೇವನೆ ಆರೋಗ್ಯಕ್ಕೆ ಹಾನಿಕರ

ದೇಶದಲ್ಲಿ ಹಲವು ಕಾನೂನುಗಳಿದ್ದರೂ ಮಾದಕ ವಸ್ತುಗಳ ಮಾರಾಟ-ಸಾಗಣೆಯಲ್ಲಿ ಹೆಚ್ಚಳ

Team Udayavani, Jun 27, 2019, 11:20 AM IST

27-June-12

ಯಾದಗಿರಿ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನಾಚರಣೆ ಜಾಗೃತಿ ಜಾಥಾಕ್ಕೆ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಧಿಧೀಶ ರಾಚನ್ನ ಕೆ.ತಾಳಿಕೋಟಿ ಚಾಲನೆ ನೀಡಿದರು.

ಯಾದಗಿರಿ: ಮಾದಕ ವಸ್ತುಗಳ ಸೇವನೆಯು ಮನುಷ್ಯನ ಆರೋಗ್ಯಕ್ಕೆ ಹಾನಿಕರವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ಹೇಳಿದರು.

ನಗರದ ಚರ್ಚ್‌ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಶಿಕ್ಷಣ, ಸಮಾಜ ಕಲ್ಯಾಣ, ಪೊಲೀಸ್‌ ಇಲಾಖೆ, ಕಾರಾಗೃಹ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಣಿಕೆ ವಿರೋದಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ 130 ಕೋಟಿ ಜನಸಂಖ್ಯೆಯಲ್ಲಿ 8ರಿಂದ 11 ವರ್ಷದೊಳಗಿನ ಮಕ್ಕಳು ಮಾದಕ ವಸ್ತುಗಳ ಸೇವನೆಯ ಚಟಕ್ಕೆ ಬಲಿಯಾಗುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ದೇಶದ ಆರೋಗ್ಯ ಮತ್ತು ಆರ್ಥಿಕ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ದೇಶದ ಕೆಲವೆಡೆ ಗಾಂಜಾ ಬೆಳೆಯುತ್ತಿರುವುದು ಕಂಡುಬರುತ್ತಿದೆ. ಇದು ಭಾರತ ಸಂವಿಧಾನದ 41, 47ನೇ ವಿಯ ಪ್ರಕಾರ ಅಪರಾಧವಾಗಿದೆ ಎಂದರು.

ದೇಶದಲ್ಲಿ ಹಲವು ಕಾನೂನುಗಳಿದ್ದರೂ ಮಾದಕ ವಸ್ತುಗಳ ಮಾರಾಟ, ಸಾಗಣೆ ಹೆಚ್ಚಾಗಿದೆ. ಇದರಿಂದ ಬೀದಿ ಮಕ್ಕಳು, ಶಾಲಾ-ಕಾಲೇಜು, ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚುತ್ತಿದೆ. ಇದರ ದುಷ್ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಾದಕ ವಸ್ತುಗಳ ಸೇವನೆ ಯಾರೂ ಮಾಡಬಾರದು. ಆರೋಗ್ಯಯುತ ದೇಶದ ನಿರ್ಮಾಣದಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ. ಇದು ಜವಾಬ್ದಾರಿಯೂ ಕೂಡ ಆಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ನಾಟಕ, ಪ್ರಬಂಧ ಸ್ಪರ್ಧೆಯಂತಹ ಚಟುವಟಿಕೆಗಳ ಮೂಲಕ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಮಾದಕ ವಸ್ತುಗಳ ಸೇವನೆಯ ಚಟಕ್ಕೆ ಬಲಿಯಾದವರನ್ನು ಗುರುತಿಸಿ ವ್ಯಸನ ಮುಕ್ತ ಕೇಂದ್ರಗಳ ಮೂಲಕ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ, ಮಾದಕ ವಸ್ತುಗಳ ಸೇವನೆ ಮಾಡುವ ವ್ಯಕ್ತಿಯು ಸ್ವ ಇಚ್ಛೆಯಿಂದ ನಿರ್ಧಾರ ಕೈಗೊಂಡಾಗ ವ್ಯಸನ ಮುಕ್ತನಾಗಲು ಸಾಧ್ಯವಾಗುತ್ತದೆ. ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು, ಸದೃಢ ದೇಶ ನಿರ್ಮಾಣದಲ್ಲಿ ಭಾಗಿಯಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿಗ ಡಾ| ಭಗವಂತ ಅನವಾರ ಮಾತನಾಡಿ, 1989ರಿಂದ ಪ್ರತಿವರ್ಷ ಜೂನ್‌ 26 ಅನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನವನ್ನು ಒಂದೊಂದು ಘೋಷಣೆಯೊಂದಿಗೆ ಆಚರಿಸಲಾಗುತ್ತದೆ. ಪ್ರಸಕ್ತ ವರ್ಷ ‘ನ್ಯಾಯಕ್ಕಾಗಿ ಆರೋಗ್ಯ, ಆರೋಗ್ಯಕ್ಕಾಗಿ ನ್ಯಾಯ’ ಎಂಬ ಘೋಷಣೆಯೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಇತ್ತೀಚೆಗೆ ವಿದ್ಯುನ್ಮಾನ ಉಪಕರಣಗಳ ಅತಿಯಾದ ಬಳಕೆಯೂ ವ್ಯಸನವಾಗಿ ಪರಿಣಮಿಸಿದೆ. ದೇಶದಲ್ಲಿ 7 ಕೋಟಿ ಜನ ಮಾದಕ ವಸ್ತುಗಳ ಸೇವನೆಯ ಚಟಕ್ಕೆ ಬಲಿಯಾಗಿದ್ದಾರೆ. ಪಂಜಾಬಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿದೆ. ಗುಣಮುಖವಾಗದ ಕೆಲವು ಗಂಭೀರ ಕಾಯಿಲೆಗಳಿಗೆ ಒಳಗಾದವರು ಮಾದಕವಸ್ತುಗಳ ಸೇವನೆ ಮಾಡುತ್ತಾರೆ. ಇದರ ನಿಯಂತ್ರಣಕ್ಕೆ ದೊಡ್ಡ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಮಾಡಬೇಕಿದೆ ಎಂದು ತಿಳಿಸಿದರು.

ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ| ಉಮೇಶ ಮಾತನಾಡಿ, ಮಾದಕ ವಸ್ತು ವ್ಯಸನ ಎಂದರೆ ಒಂದು ರೀತಿಯ ಮಾನಸಿಕ ಕಾಯಿಲೆ, ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ, ದೈಹಿಕ, ಸಾಮಾಜಿಕ, ಆರ್ಥಿಕ, ಬೌದ್ಧಿಕ, ನೈತಿಕವಾಗಿ ವ್ಯಕ್ತಿಯ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಹೇಳಿದರು.

ಮನೋಚೈತನ್ಯ ಕಾರ್ಯಕ್ರಮದಡಿಯಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ 1ನೇ ಮಂಗಳವಾರ ಶಹಾಪುರ, 2ನೇ ಮಂಗಳವಾರ ಸುರಪುರ, 3ನೇ ಮಂಗಳವಾರ ಗುರುಮಠಕಲ್, 4ನೇ ಮಂಗಳವಾರ ಹುಣಸಗಿ, 1ನೇ ಶುಕ್ರವಾರ ವಡಗೇರಾ ಹಾಗೂ ಪ್ರತಿದಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸರಾವ್‌ ಕುಲಕರ್ಣಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಶಾರದಾ ಆಯುರ್ವೇದಿಕ್‌ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಜಯಕುಮಾರ ಸ್ವಾಗತಿಸಿದರು. ಹಿರಿಯ ಆರೋಗ್ಯ ಸಹಾಯಕರಾದ ಮಹಿಪಾಲರಡ್ಡಿ ನಿರೂಪಿಸಿದರು. ಶರಣಬಸವ ಹೊಸಮನಿ ವಂದಿಸಿದರು.

ಜಾಗೃತಿ ಜಾಥಾ: ಕಾರ್ಯಕ್ರಮಕ್ಕೂ ಮೊದಲು ನಗರದ ಹಳೆ ಪ್ರವಾಸಿ ಮಂದಿರದಿಂದ ಚರ್ಚ್‌ ಸಭಾಂಗಣದವರೆಗೆ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಗೌರವಾನ್ವಿತ ರಾಚಪ್ಪ ಕೆ. ತಾಳಿಕೋಟಿ ಚಾಲನೆ ನೀಡಿದರು.

ಜಿಪಂ ಸಿಇಒ ಕವಿತಾ ಎಸ್‌.ಮನ್ನಿಕೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಹಬೀಬ್‌ ಉಸ್ಮಾನ್‌ ಪಟೇಲ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ| ಸೂರ್ಯಪ್ರಕಾಶ ಎಂ.ಕಂದಕೂರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

suicide (2)

Manipal: ಬಾವಿಗೆ ಬಿದ್ದು ಕಾರ್ಮಿಕ ಸಾ*ವು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

suicide (2)

Manipal: ಬಾವಿಗೆ ಬಿದ್ದು ಕಾರ್ಮಿಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.