ಆರೋಗ್ಯ ವೃದ್ಧಿಗೆ ಕ್ರೀಡೆಗಳು ಸಹಕಾರಿ: ಕಂದಕೂರ
ದಿಟ್ಟ ನಿರ್ಧಾರ ಕೈಗೊಳ್ಳುವ ಕಲೆ ಕ್ರೀಡೆಗಿದೆ
Team Udayavani, Aug 31, 2019, 3:06 PM IST
ಯಾದಗಿರಿ: ಗುರುಮಠಕಲ್ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಮುಕ್ತ ಕಬಡ್ಡಿ ಸ್ಪರ್ಧೆಯಲ್ಲಿ ಜೆಡಿಎಸ್ ರಾಜ್ಯ ಯುವ ಮಹಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಅಂಕಣಕ್ಕಿಳಿದರು.
ಯಾದಗಿರಿ: ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಆಯೋಜಿಸಲಾಗುವ ಕ್ರೀಡಾಕೂಟಗಳಿಂದ ಯುವಕರಲ್ಲಿ ಐಕ್ಯತೆ ಜೊತೆಗೆ ಪರಸ್ಪರ ಸಹಬಾಳ್ವೆ ಮೂಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ಮಹಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಹೇಳಿದರು.
ಗುರುಮಠಕಲ್ ನಗರದ ಶ್ರೀ ಆಂಜನೇಯ ದೇವಸ್ಥಾನ ಜಾತ್ರೆ ನಿಮಿತ್ತ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಸಾಧನ ಕ್ರೀಡೆ. ಸೋಲು-ಗೆಲುವು, ನೋವು ನಲಿವುಗಳ ನಡುವೆಯೂ ಪರಸ್ಪರ ಸಹಕಾರದಿಂದ ಕ್ರೀಡೆ ಸಹಾಯಕವಾಗಿದೆ. ಸಮಯ ಪರಿಪಾಲನೆ ಜೊತೆಗೆ ಸಮರ್ಪಕ ದಿಟ್ಟ ನಿರ್ಧಾರ ಕೈಗೊಳ್ಳುವ ಕಲೆ ಕ್ರೀಡೆಯಿಂದ ಕರಗತವಾಗುತ್ತದೆ ಎಂದರು.
ಇತ್ತೀಚಿನ ದಿನಮಾನಗಳಲ್ಲಿ ಕಬಡ್ಡಿಯಂತಹ ಪಕ್ಕಾ ದೇಶಿ ಕ್ರೀಡೆ ಆಡುವುದು ತೀರಾ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಆಟಗಳಿಂದ ಮಾನಸಿಕ ಮತ್ತು ದೈಹಿಕ ಸದೃಢತೆ ಹೊಂದಬಹುದು ಎಂದರು.
ದಿವ್ಯ ಸಾನ್ನಿಧ್ಯ ವಹಿಸಿದ್ದ ಅರಕೇರಾ ಸಿದ್ಧಾರೂಢ ಮಠದ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಜೆಡಿಎಸ್ ಬ್ಲಾಕ್ ಅಧ್ಯಕ್ಷ ಶರಣು ಅವುಂಟಿ, ವೈದ್ಯಾಧಿಕಾರಿ ಶಿವಪ್ರಸಾದ ಮೈತ್ರಿ, ನರಸಿರೆಡ್ಡಿ ಗಡ್ಡೆಸೂಗೂರ್, ಆಂಜನೇಯ ದೇವಸ್ಥಾನ ಕಮಿಟಿ ಅಧ್ಯಕ್ಷ ಯಂಕಪ್ಪ ಮನ್ನೆ, ಅಶೋಕ ಸಂಜನೋಳ್ ಇದ್ದರು.
ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಆಯೋಜಿಸಲಾಗುವ ಕ್ರೀಡಾಕೂಟಗಳಿಂದ ಯುವಕರಲ್ಲಿ ಐಕ್ಯತೆ ಜೊತೆಗೆ ಪರಸ್ಪರ ಸಹಬಾಳ್ವೆ ಮೂಡುತ್ತಿದೆ ಎಂದು ಜೆಡಿಎಸ್ ರಾಜ್ಯ ಯುವ ಮಹಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಹೇಳಿದರು.
ಗುರುಮಠಕಲ್ ನಗರದ ಶ್ರೀ ಆಂಜನೇಯ ದೇವಸ್ಥಾನ ಜಾತ್ರೆ ನಿಮಿತ್ತ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಸಾಧನ ಕ್ರೀಡೆ. ಸೋಲು-ಗೆಲುವು, ನೋವು ನಲಿವುಗಳ ನಡುವೆಯೂ ಪರಸ್ಪರ ಸಹಕಾರದಿಂದ ಕ್ರೀಡೆ ಸಹಾಯಕವಾಗಿದೆ. ಸಮಯ ಪರಿಪಾಲನೆ ಜೊತೆಗೆ ಸಮರ್ಪಕ ದಿಟ್ಟ ನಿರ್ಧಾರ ಕೈಗೊಳ್ಳುವ ಕಲೆ ಕ್ರೀಡೆಯಿಂದ ಕರಗತವಾಗುತ್ತದೆ ಎಂದರು.
ಇತ್ತೀಚಿನ ದಿನಮಾನಗಳಲ್ಲಿ ಕಬಡ್ಡಿಯಂತಹ ಪಕ್ಕಾ ದೇಶಿ ಕ್ರೀಡೆ ಆಡುವುದು ತೀರಾ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಆಟಗಳಿಂದ ಮಾನಸಿಕ ಮತ್ತು ದೈಹಿಕ ಸದೃಢತೆ ಹೊಂದಬಹುದು ಎಂದರು.
ದಿವ್ಯ ಸಾನ್ನಿಧ್ಯ ವಹಿಸಿದ್ದ ಅರಕೇರಾ ಸಿದ್ಧಾರೂಢ ಮಠದ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಜೆಡಿಎಸ್ ಬ್ಲಾಕ್ ಅಧ್ಯಕ್ಷ ಶರಣು ಅವುಂಟಿ, ವೈದ್ಯಾಧಿಕಾರಿ ಶಿವಪ್ರಸಾದ ಮೈತ್ರಿ, ನರಸಿರೆಡ್ಡಿ ಗಡ್ಡೆಸೂಗೂರ್, ಆಂಜನೇಯ ದೇವಸ್ಥಾನ ಕಮಿಟಿ ಅಧ್ಯಕ್ಷ ಯಂಕಪ್ಪ ಮನ್ನೆ, ಅಶೋಕ ಸಂಜನೋಳ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.