ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ
ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ: ಸ್ವಾಮೀಜಿ
Team Udayavani, Sep 16, 2019, 6:51 PM IST
ಯಾದಗಿರಿ: ತಾಲೂಕಿನ ಹೆಡಗಿಮದ್ರಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಜ್ಯೋತಿ ಬೆಳಗಿ ಗಣ್ಯರು ಉದ್ಘಾಟಿಸಿದರು.
ಯಾದಗಿರಿ: ಗ್ರಾಮೀಣ ಭಾಗದಲ್ಲಿ ಅಡಗಿರುವ ಮಕ್ಕಳಲ್ಲಿನ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಎಂದು ಹೆಡಗಿಮದ್ರಾ ಶಾಂತ ಶಿವಯೋಗಿ ಮಠದ ಪೀಠಾಧಿಪತಿ ಪೂಜ್ಯ ಶಾಂತಮಲ್ಲಿಕಾರ್ಜುನ ಪಂಡಿತರಾಧ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಹೆಡಗಿಮದ್ರಾ ಎಸ್.ಎಸ್. ವಿದ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಹೆಡಗಿಮದ್ರಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳನ್ನು ಶಾಲೆಗಳತ್ತ ಸೆಳೆಯುವುದರ ಜೊತೆಗೆ ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿವುದು ಮುಖ್ಯವಾಗಿದ್ದು, ಇದರಲ್ಲಿ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ ಮಾತನಾಡಿ, ಮಕ್ಕಳಲ್ಲಿನ ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮ ಸರ್ಕಾರ ಆಯೋಜನೆ ಮಾಡಿದ್ದು, ಇದರ ಸದ್ಭಳಕೆಯಾಗಿ ಗ್ರಾಮೀಣ ಮಟ್ಟದ ಪ್ರತಿಭೆಗಳನ್ನು ಹೊರ ತರಬೇಕಾಗಿದೆ ಎಂದು ಹೇಳಿದರು.
ಕ್ಷೇತ್ರ ಸಮನ್ವಯ ಅಧಿಕಾರಿ ಮಲ್ಲಿಕಾರ್ಜುನ ಪೂಜಾರಿ ಮಾತನಾಡಿದರು. ಸ್ಥಳೀಯ ಕಸ್ಲರ್ ಸಿ.ಆರ್.ಪಿ ಸಾಬಯ್ಯ ತಾಂಡೂರಕರ್ ಪ್ರಾಸ್ತಾವಿಕ ಮಾತನಾಡಿದರು. ಯರಗೋಳ ಜಿಲ್ಲಾ ಪಂಚಾಯಿತಿ ಸದಸ್ಯೆ ಅನಿತಾಬಾಯಿ ರಾಠೊಡ ಭಾಗವಹಿಸಿದ್ದರು. ಯರಗೋಳ ವಲಯದ ಶಿಕ್ಷಣ ಸಂಯೋಜಕ ಶ್ರೀನಿವಾಸ ಕರ್ಲಿ, ಕೊಂಕಲ್ ವಲಯದ ಇ.ಸಿ.ಒ. ಮರೆಪ್ಪ ಮ್ಯಾಗೇರಿ, ಶರಣಗೌಡ, ಯರಗೋಳ ವಲಯದ ಬಿ.ಆರ್.ಪಿ. ಶ್ರೀಕಾಂತ, ಅಲ್ಲಿಪೂರ ಸಿ.ಆರ್.ಪಿ. ಮಲ್ಲಪ್ಪ ಮ್ಯಾಗೇರಿ, ಹನುಮ ನಾಯಕ ಮತ್ತು ಶಿಕ್ಷಕರಾದ ಶರಣಪ್ಪ ಮುಂಬಾ, ಸಿದ್ಲಿಂಗರೆಡ್ಡಿ, ಚಂದ್ರಮಪ್ಪ ಕ್ಯಾತೆ, ಮಲ್ಲಯ್ಯ ಮೊಗ್ಗ, ವಿಶ್ವನಾಥರೆಡ್ಡಿ, ಮಲ್ಲಿಕಾರ್ಜುನ ಕುರಕುಂದಿ, ರವಿ, ರಮೇಶ ಇದ್ದರು. ವಿವಿಧ ಶಾಲೆ ಮಕ್ಕಳು, ಶಿಕ್ಷಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.