ಸಂಸ್ಕೃತಿ ಉಳಿಸಿ-ಬೆಳೆಸಿ: ಸ್ವಾಮೀಜಿ
Team Udayavani, Nov 4, 2019, 3:17 PM IST
ಯಾದಗಿರಿ: ರಾಜ್ಯದಲ್ಲಿ ಹಲವು ಭಾಷಿಕರು ನೆಲೆಸಿದ್ದಾರೆ. ಆದರೆ ನಾಡಿನ ಭಾಷೆ ಮೇಲೆ ಕೂಡ ಗೌರವ ಹೊಂದಿರಬೇಕು. ಅದರಂತೆ ಎಲ್ಲರೂ ಕನ್ನಡ ಭಾಷೆ ಕಡ್ಡಾಯವಾಗಿ ಕಲಿಯಬೇಕು ಎಂದು ಹೆಡಗಿಮದ್ರಾ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ನಗರದ ಗಂಜ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ
ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕರವೇ ಹಲವು ಸಮಾಜಪರ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಅದರಲ್ಲಿ ಪರಿಸರ ದಿನಾಚರಣೆ, ರಕ್ತದಾನ, ಉಚಿತ ಆರೋಗ್ಯ ಶಿಬಿರದಂತಹ ಕಾರ್ಯಕ್ರಮ ಆಯೋಜಿಸುವುದು ಶ್ಲಾಘನೀಯವಾಗಿದೆ ಎಂದು ತಿಳಿಸಿದರು.
ಜೆಡಿಎಸ್ ರಾಜ್ಯ ಯುವ ಮಹಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲೆಯಲ್ಲಿ ಹಲವು ಹೋರಾಟಗಳನ್ನು ರೂಪಿಸುತ್ತಾ ಉತ್ತಮ ಕೆಲಸ ಮಾಡುತ್ತಿದೆ. ಜನಪ್ರತಿನಿಧಿಗಳಿಗೆ ಸಮಸ್ಯೆಗಳ ಕುರಿತು ಪ್ರಶ್ನಿಸುವ ಧೈರ್ಯ ಹೊಂದಿರುವಂತಹ ಬಲಿಷ್ಠ ಸಂಘಟನೆಯಾಗಿದೆ ಎಂದು ಶ್ಲಾಘಿಸಿದರು.
ನಗರಸಭೆ ಸದಸ್ಯೆ ಲಲಿತಾ ಅನಪುರ ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಹಲವು ಸಮಸ್ಯೆಗಳ ಕುರಿತು ಸಾಕಷ್ಟು ಬಾರಿ ಹೋರಾಟ ಮಾಡಿ ಆ ಸಮಸ್ಯೆಗಳಿಗೆ ಮುಕ್ತಿ ದೊರಕಿಸಿಕೊಟ್ಟಿದೆ ಎಂದು ಹೇಳಿದರು.
ನಗರಸಭೆ ಮಾಜಿ ಅಧ್ಯಕ್ಷೆ ನಾಗರತ್ನಾ ಅನಪುರ, ಗ್ರಾಮೀಣ ಠಾಣೆ ಪಿಎಸ್‌ಐ ವೀರಣ್ಣ ಮಗಿ ಮಾತನಾಡಿದರು. ಜಿಲ್ಲಾಧ್ಯಕ್ಷ ಟಿ.ಎನ್. ಭೀಮು ನಾಯಕ ಅಧ್ಯಕ್ಷತೆ ವಹಿಸಿದ್ದರು. ಕರವೇ ತಾಲೂಕು ಘಟಕದ ಅಧ್ಯಕ್ಷ ಮಲ್ಲು ಮಾಳಿಕೇರಿ ನೇತೃತ್ವ ವಹಿಸಿದ್ದರು. ಇದಕ್ಕೂ ಮುನ್ನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಯಲ್ಲಪ್ಪ ಮಾಳಿಕೇರಿ, ವೀರಣ್ಣ ಮಗಿ,
ಹಣಮಂತ ನಾಯಕ, ಲಕ್ಷ್ಮೀಕಾಂತ ಪಾಟೀಲ ಅವರನ್ನು ಸನ್ಮಾನಿಸಲಾಯಿತು.
ಮಹಾವೀರ ಲಿಂಗೇರಿ, ಭೀಮಾಶಂಕರ ಹತ್ತಿಕುಣಿ, ವಿಶ್ವರಾಧ್ಯ ದಿಮ್ಮೆ, ಚೌಡಯ್ಯ, ತೇಜು ರಾಠೊಡ, ಸಿದ್ದು ನಾಯಕ ಹತ್ತಿಕುಣಿ, ಅಬ್ದುಲ್ ಚಿಗಾನೂರ, ರಾಜು ಪಗಲಾಪೂರ, ಶಿವುಕುಮಾರ ಕೊಂಕಲ್, ಸಾಹೇಬಗೌಡ ನಾಯಕ, ಭೀಮು ಬಸವಂತಪೂರ, ಮಲ್ಲು ಕನ್ನಡಿ, ಭೀಮು ಮಡ್ಡಿ, ದೀಪಕ ಒಡೆಯರ್, ರಿಯಾಜ್ ಪಟೇಲ್, ಪವನ ಲಿಂಗೇರಿ, ಮಲ್ಲು ಗೋಸಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.