ಕೌಳೂರು ಗ್ರಾಮ ಪಂಚಾಯಿತಿಗೆ ಮುತ್ತಿಗೆ

ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರು ಒದಗಿಸಲು ಆಗ್ರಹ •ಖಾಲಿ ಕೊಡಗಳ ಪ್ರದರ್ಶನ

Team Udayavani, Jun 2, 2019, 11:09 AM IST

2-June-10

ಯಾದಗಿರಿ: ತಾಲೂಕಿನ ಕೌಳೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತ ಜನರು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿದರು.

ಯಾದಗಿರಿ: ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಮಲ್ಲು ಮಾಳಿಕೇರಿ ನೇತೃತ್ವದಲ್ಲಿ ಕೌಳೂರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟಿಸಲಾಯಿತು.

ತಾಲೂಕಿನ ಕೌಳೂರು ಗ್ರಾಮದಲ್ಲಿ ಜನರಿಗೆ ಕುಡಿಯುವ ನೀರು ಸಿಗುತ್ತಿಲ್ಲ, 3 ಕಿಲೋ ಮೀಟರ್‌ ದೂರದಿಂದ ನೀರು ತರುವ ಅನಿವಾರ್ಯತೆ ಎದುರಾಗಿದೆ. ಪಕ್ಕದಲ್ಲಿಯೇ ಭೀಮಾನದಿ ಹರಿದರೂ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಗೊಂಡಿದ್ದು, ಇದಕ್ಕೆ ಅಧಿಕಾರಿಗಳ ನಿಷ್ಕಾಳಜಿ ಎದ್ದು ಕಾಣುತ್ತದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಸ್ಥಳೀಯ ನೀರಿನ ಮೂಲಗಳನ್ನು ಉಪಯೋಗಿಸಿಕೊಂಡು ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಬೇಕೆಂದು ಒತ್ತಾಯಿಸಿ ಹಲವು ಬಾರಿ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳುತ್ತಿಲ್ಲ. ಗ್ರಾಮಕ್ಕೆ ಸರಬರಾಜು ಮಾಡುವ ಕುಡಿಯುವ ನೀರಿನ ಯೋಜನೆ ಪೈಪ್‌ಲೈನ್‌ನಿಂದ ಪ್ರಭಾವಿಗಳು ಅಕ್ರಮ ಸರಬರಾಜು ಪೈಪ್‌ಲೈನ್‌ ಅಳವಡಿಸಿಕೊಂಡಿದ್ದರೂ ಯಾರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಈ ವೇಳೆ ಮಾತನಾಡಿದ ತಾಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ, ಪ್ರತಿಭಟನೆ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಮೇಲಧಿಕಾರಿಗಳ ಸಮ್ಮುಖದಲ್ಲಿ ಗ್ರಾಪಂ ಪಿಡಿಒ ವಿರುದ್ಧ ಆರೋಪ ಮತ್ತು ಪ್ರತ್ಯಾರೋಪ ಮಾಡುತ್ತ ಪಿಡಿಒ, ಕಾರ್ಯದರ್ಶಿ, ಪಂಪ್‌ ಆಪರೇಟರ್‌ ಹಾಗೂ ಸಿಬ್ಬಂದಿಗಳು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿರುತ್ತಾರೆ. ಸರ್ಕಾರಿ ಯೋಜನೆಗಳ ದುರುಪಯೋಗ ಪಡಿಸಿಕೊಳ್ಳುತ್ತಾ ಆರೋಪ ಪ್ರತ್ಯಾರೋಪದಲ್ಲಿ ಕಾಲ ಕಳೆಯುವ ಇವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಕಾರ್ಯನಿರ್ವಾಹಕ ಅಧಿಕಾರಿ ಪರವಾಗಿ ಆಗಮಿಸಿದ ಎಡಿ ನರೇಗಾ ಚಂದ್ರಶೇಖರ ಪವಾರ ಎರಡು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ, ಸಾಹೇಬಗೌಡ ನಾಯಕ, ಸೈದಪ್ಪ ಗೌಡಗೇರಾ, ರಾಜು ಗೌಡಗೇರಾ, ವೆಂಕಟೇಶ ಕೌಳೂರು, ವೆಂಕಟರಡ್ಡಿ ಕೌಳೂರು, ಮಂಜು ರಾಂಪೂರಹಳ್ಳಿ, ಭೀಮಣ್ಣ ಶೆಟ್ಟಿಗೇರಾ, ಚಂದ್ರಾಮ ಗೌಡಗೇರಾ ಸೇರಿದಂತೆ ಗ್ರಾಮಸ್ಥರು, ಹಲವು ಕಾರ್ಯಕರ್ತರಿದ್ದರು.

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.