ಕುಷ್ಠ ರೋಗ ಪತ್ತೆಗೆ 847 ತಂಡ ರಚನೆ
ಶಾಲಾ-ಕಾಲೇಜುಗಳಲ್ಲಿ ಸ್ಪರ್ಶ ಕುಷ್ಠರೋಗ ಕುರಿತು ಜಾಗೃತಿ ಮೂಡಿಸಿ: ಕೂರ್ಮಾರಾವ್
Team Udayavani, Oct 17, 2019, 1:14 PM IST
ಯಾದಗಿರಿ: ಸ್ಪರ್ಶ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಂಗವಾಗಿ ಜಿಲ್ಲಾದ್ಯಂತ ನ. 11ರಿಂದ 28ರವರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಯಶಸ್ವಿಗೊಳಿಸುವ ಮೂಲಕ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಬೇಕು ಎಂದು ಜಿಲ್ಲಾ ಧಿಕಾರಿ ಎಂ. ಕೂರ್ಮಾರಾವ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು. ಶಾಲಾ-ಕಾಲೇಜುಗಳಲ್ಲಿ ಸ್ಪರ್ಶ ಕುಷ್ಠರೋಗ ಕುರಿತು ಜಾಗೃತಿ ಮೂಡಿಸಬೇಕು. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಂದೋಲನ ಅವ ಧಿಯಲ್ಲಿ ಮನೆ ಮನೆಗೆ ಭೇಟಿ ನೀಡಿ, ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ರೋಗಿಗಳನ್ನು ಪತ್ತೆಹಚ್ಚಿ ಅವರಿಗೆ ಚಿಕಿತ್ಸೆ ಕೊಡಿಸಬೇಕು ಎಂದು ನಿರ್ದೇಶಿಸಿದರು.
ನವೆಂಬರ್ 10ರಂದು ಪೂರ್ವಭಾವಿಯಾಗಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಬಗ್ಗೆ ಪ್ರತಿಯೊಂದು ತಂಡದವರು ತಮ್ಮ ತಮ್ಮ ಗ್ರಾಮದಲ್ಲಿ ಸಮುದಾಯದ ಸಭೆ ನಡೆಸಬೇಕು. ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ತರಬೇತಿಯನ್ನು ನಡೆಸಲು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಭಗವಂತ ಅನವಾರ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 43 ಜನ ಕುಷ್ಠರೋಗದ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 27 ಜನ ಗುಣಮುಖ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2,32,605 ಮನೆಗಳಿದ್ದು, ಕುಷ್ಠರೋಗ ಪತ್ತೆಗಾಗಿ ಒಟ್ಟು 847 ತಂಡಗಳನ್ನು ರಚಿಸಲಾಗಿದೆ. ಪ್ರತಿಯೊಂದು ತಂಡದಲ್ಲಿ ಒಬ್ಬ ಆಶಾ ಕಾರ್ಯಕರ್ತೆ, ಮತ್ತೂಬ್ಬರು ವಾಲೆಂಟ್ರಿ ಇರುತ್ತಾರೆ. ಪ್ರತಿ 5 ತಂಡಕ್ಕೆ ಒಬ್ಬರು ಮೇಲ್ವಿಚಾರಕರಂತೆ ಒಟ್ಟು 168 ಮೇಲ್ವಿಚಾರಕರು ಇರುವರೆಂದು ತಿಳಿಸಿದರು.
ಆಂದೋಲನ ಅಂಗವಾಗಿ ಕುಷ್ಠರೋಗದ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರವನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಯಾದಗಿರಿ ಡಿವೈಎಸ್‌ಪಿ ಯು. ಶರಣಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ನಾರಾಯಣಪ್ಪ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ|ಸೂರ್ಯಪ್ರಕಾಶ ಎಂ. ಕಂದಕೂರ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ, ಜಿಲ್ಲಾ ಸಮನ್ವಯ ಸಮಿತಿ ಸದಸ್ಯ ರಾಯಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.