ಯಾದಗಿರಿ: ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಸ್ಥಳ ಹುಡುಕಾಟ
Team Udayavani, Dec 2, 2019, 10:55 AM IST
ಅನೀಲ ಬಸೂದೆ
ಯಾದಗಿರಿ: ಉತ್ತರ ಕರ್ನಾಟಕದ ಮೊದಲ ಸರ್ಕಾರಿ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕಾಗಿ ಜಿಲ್ಲೆಯಲ್ಲಿ ಸ್ಥಳ ಹುಡುಕಾಟ ನಡೆದಿದೆ. ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ 2011ರಿಂದಲೇ ಸ್ಥಳ ಹುಡುಕಾಟ ನಡೆದಿದ್ದು, ಆಗಿನ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ ನಗರದ ಹೊರ ವಲಯದಲ್ಲಿ ಭೀಮಾ ನದಿ ಸಮೀಪ ಸ್ಥಳ ಗುರುತಿಸಿದ್ದರು. ಆದರೆ ಇದು ಸರ್ಕಾರದ ಇನಾಮು ಜಮೀನಾಗಿದ್ದರಿಂದ ಅದನ್ನು ಉಪಯೋಗಿಸಲು ಬರಲ್ಲ ಎಂಬುದನ್ನು ಮನಗಂಡು ಬೇರೆ ಸ್ಥಳಕ್ಕಾಗಿ ಹುಡುಕಾಟ ಆರಂಭಿಸಲಾಗಿತ್ತು. ಈಗಿನ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಪ್ರಕೃತಿ ಚಿಕಿತ್ಸಾ ಕೇಂದ್ರದ ಬಗ್ಗೆ ಹೆಚ್ಚು ಆಸಕ್ತಿ ವಹಿಸಿದ್ದು, ಆರೋಗ್ಯ ಇಲಾಖೆ ಆಯುಕ್ತರನ್ನು ಸ್ವತಃ ಭೇಟಿಯಾಗಿರುವ ಬಗ್ಗೆ ಮಾಹಿತಿಯಿದೆ.
ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಈ ವಿಷಯಕ್ಕೆ ಆದ್ಯತೆ ನೀಡಿದ್ದು, ತಮ್ಮದೇ ಸರ್ಕಾರ ಇರುವುದರಿಂದ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಪ್ತರಾಗಿರುವುದರಿಂದ ಪ್ರಕೃತಿ ಚಿಕಿತ್ಸಾ ಕೇಂದ್ರ ಘೋಷಣೆ ಮಾಡಿಸಲು ಉತ್ಸುಕರಾಗಿದ್ದಾರೆ. ಶಹಾಪುರ ತಾಲೂಕಿನ ರಾಜ್ಯ ಹೆದ್ದಾರಿ ಬಳಿಯ ಮನಗನಾಳ ಹತ್ತಿರ ಸ್ಥಳ ಪರಿಶೀಲನೆ ನಡೆಯುತ್ತಿದ್ದು, 19.13 ಎಕರೆ ಸ್ಥಳ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಕೇವಲ 9 ಎಕರೆ ಮಾತ್ರ ಬಳಸಬಹುದು ಎಂಬುದನ್ನು ಕಂದಾಯ ಇಲಾಖೆ ಮೂಲಗಳು ಹೇಳುತ್ತಿವೆ.
ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಹಲವು ರೋಗಗಳಿಗೆ ಗಿಡಮೂಲಿಕೆ, ಯೋಗ, ಪಂಚಕರ್ಮ ಚಿಕಿತ್ಸೆ ನೀಡುವುದರಿಂದ ಇಲ್ಲಿ ವ್ಯಾಯಾಮ, ಯೋಗ, ಕ್ರಿಯಾ ಕೇಂದ್ರ, ಸೈಕಲ್ ಟ್ರ್ಯಾಕ್, ವಾಯು ವಿಹಾರ, ಗಿಡ ಮೂಲಿಕೆಗಳ ಉದ್ಯಾನ, ಮಸಾಜ್ ಕೇಂದ್ರ, ಗ್ರಂಥಾಲಯ, ಈಜುಗೊಳ ಹೀಗೆ ಅನೇಕ ವ್ಯವಸ್ಥೆಗಳು ಮಾಡುವುದು ಕಡ್ಡಾಯ ಆಗಿರುವುದರಿಂದ ಸುಮಾರು 15 ಎಕರೆ ಸ್ಥಳವಾದರೆ ಅನುಕೂಲವಾಗಲಿದೆ ಎನ್ನುತ್ತಾರೆ ಅಧಿಕಾರಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.