ಯಾದಗಿರಿಗಿಲ್ಲ ಸಚಿವ ಸ್ಥಾನದ ಗರಿ
Team Udayavani, Aug 21, 2019, 11:27 AM IST
ಯಾದಗಿರಿ: ಬೆಂಗಳೂರಿನ ಖಾಸಗಿ ಹೋಟೆಲ್ವೊಂದರಲ್ಲಿ ಸಭೆ ನಡೆಸಿ ಬೆಂಬಲಿಗರನ್ನು ಸಮಾಧಾನ ಪಡಿಸಿದ ಸುರಪುರ ಶಾಸಕ ರಾಜುಗೌಡ.
ಯಾದಗಿರಿ: ಹಿಂದುಳಿದ ಜಿಲ್ಲೆಗೆ ಸಚಿವ ಸ್ಥಾನ ನೀಡುವ ನಿಟ್ಟಿನಲ್ಲಿ ಅನ್ಯಾಯವಾಗುತ್ತಲೇ ಬಂದಿದ್ದು, ಈ ಸಲವೂ ಜಿಲ್ಲೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರಿದ್ದರೂ ಸಚಿವ ಸ್ಥಾನ ಸಿಗಲೇ ಇಲ್ಲ.
ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಯಾದಗಿರಿ ಮತ್ತು ಸುರಪುರ ಕ್ಷೇತ್ರ ಬಿಜೆಪಿ ತೆಕ್ಕೆಯಲ್ಲಿದೆ. ಶಹಾಪುರ ಕಾಂಗ್ರೆಸ್, ಗುರುಮಠಕಲ್ ಜೆಡಿಎಸ್ ವಶದಲ್ಲಿದೆ. ಸುರಪುರ ಕ್ಷೇತ್ರವನ್ನು ಸತತ 3 ಬಾರಿ ಪ್ರತಿನಿಧಿಸಿದ್ದ ರಾಜುಗೌಡ ಅವರಿಗೆ ಯಡಿಯೂರಪ್ಪ ಸಂಪುಟದಲ್ಲಿ ಎಸ್‌ಟಿ ಕೋಟಾದಲ್ಲಿ ಮಂತ್ರಿಗಿರಿ ಪಕ್ಕಾ ಎಂದೇ ಬೆಂಬಲಿಗರು ಭಾವಿಸಿದ್ದರು.
ಕಾರ್ಯಕರ್ತರು ಕನಸು ಕಂಡಿದ್ದರು. ತಮ್ಮ ಶಾಸಕರೇ ಮಂತ್ರಿಯಾಗುತ್ತಾರೆ ಎನ್ನುವ ಭರವಸೆ ಇಟ್ಟಿದ್ದರು. ಕಾರ್ಯಕರ್ತರು ಕೆಲ ವಾರಗಳಿಂದ ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದರು. ಆದರೀಗ ಸಂಭ್ರಮಿಸಲು ಹೋದ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.
ಇನ್ನು ಯಡಿಯೂರಪ್ಪನವರ ಆಪ್ತ, ಯಾದಗಿರಿಯಿಂದ ಪ್ರಥಮ ಬಾರಿಗೆ ಆಯ್ಕೆಯಾಗಿದ್ದ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಮಂತ್ರಿಯಾಗುವ ನಿರೀಕ್ಷೆ ಇರಲಿಲ್ಲ. ಪಕ್ಷದಲ್ಲಿ ಸಾಕಷ್ಟು ಹಿರಿಯರು ಇದ್ದಾರೆ. ತಾನು ಪ್ರಥಮ ಬಾರಿಗೆ ಆರಿಸಿ ಬಂದಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಹೇಳುತ್ತಲೇ ಬಂದಿದ್ದರು. ಸಂಪುಟ ರಚನೆಗೂ ಮುನ್ನ ಮುದ್ನಾಳ ಅವರ ಬೆಂಬಲಿಗರ ನಿಯೋಗ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿತ್ತು.
ಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ಭರವಸೆಯಲ್ಲಿದ್ದ ಶಾಸಕ ರಾಜುಗೌಡರಿಗೆ ನಿರಾಸೆಯಾಗಿದೆ. ಮೂರು ಬಾರಿ ಆರಿಸಿ ಬಂದಿದ್ದು, ಈ ಬಾರಿ ಮಂತ್ರಿ ಸ್ಥಾನ ಸಿಗಲಿದೆ ಎಂದು ನಂಬಿದ್ದ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನವಾಗಿದೆ. ಮಂತ್ರಿ ಸ್ಥಾನ ಕೈತಪ್ಪಿರುವ ಕುರಿತು ಸಂಪರ್ಕಿಸಿದರೆ ಶಾಸಕ ರಾಜುಗೌಡ ಸಂಪರ್ಕಕ್ಕೆ ಸಿಗಲಿಲ್ಲ.
•ವೆಂಕಟರೆಡ್ಡಿ ಗೌಡ ಮುದ್ನಾಳ,
ಯಾದಗಿರಿ ಶಾಸಕ
ಉತ್ತರ ಕರ್ನಾಟಕ ಮತ್ತು ಹೈದ್ರಾಬಾದ್ ಕರ್ನಾಟಕ ಭಾಗವನ್ನು ಸಂಪುಟ ರಚನೆಯಲ್ಲಿ ಕಡೆಗಣಿಸಲಾಗಿದೆ. ಹೈಕ ಭಾಗಕ್ಕೆ ಕೇವಲ ಒಂದು ಸಚಿವ ಸ್ಥಾನ ನೀಡಿದ್ದು, ಇದರಲ್ಲಿ ರಾಜಕೀಯ ಅಸಮಾನತೆ ಕಾಣುತ್ತಿದೆ. ಇದು ಸರಿಯಾದ ನಡೆಯಲ್ಲ.
•ಡಾ| ಶರಣು ಗದ್ದುಗೆ,
ಕರವೇ ಉತ್ತರ ಕರ್ನಾಟಕ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್ ರಾಡಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.