ಯಾದಗಿರಿ ಬಂದ್‌ ಯಶಸ್ವಿಗೊಳಿಸಿ

ಮೆಡಿಕಲ್ ಕಾಲೇಜು ನಗರಕ್ಕೆ ಅಗತ್ಯವಿಲ್ಲ ಎಂಬ ಹೇಳಿಕೆಗೆ ಖಂಡನೆ

Team Udayavani, Jul 8, 2019, 11:25 AM IST

08-July-11

ಯಾದಗಿರಿ: ವಿವಿಧ ಸಂಘಟನೆಗಳ ಮುಖಂಡರ ಜತೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಸಭೆ ನಡೆಸಿದರು.

ಯಾದಗಿರಿ: ನಮ್ಮ ಭಾಗಕ್ಕೆ ರಾಜ್ಯ ಸರ್ಕಾರದಿಂದ ಆಗುತ್ತಿರುವ ಧೋರಣೆ ಎಲ್ಲರೂ ಖಂಡಿಸಿ ಯಾದಗಿರಿ ಬಂದ್‌ ಯಶಸ್ವಿಗೊಳಿಸುವಂತೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಕರೆ ನೀಡಿದರು.

ಶಾಸಕರ ಕಚೇರಿಯಲ್ಲಿ ಕರೆದ ವಿವಿಧ ಸಂಘ-ಸಂಸ್ಥೆಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಭಾಗಕ್ಕೆ ನಿರಂತರ ಅನ್ಯಾಯ ಮಾಡುತ್ತಾ ಬರುತ್ತಿರುವವರ ಸಾಲಿಗೆ ಸೇರಿರುವ ಹಾಲಿ ಮುಖ್ಯಮಂತ್ರಿ ಇಲ್ಲಿ ಮೆಡಿಕಲ್ ಕಾಲೇಜು ಅಗತ್ಯವಿಲ್ಲ ಎಂದು ಹೇಳಿ ಈ ಭಾಗದ ಜನರ ಸ್ವಾಭಿಮಾನ ಕೆಣಕಿದ್ದಾರೆ.

ಆದ್ದರಿಂದ ಇದಕ್ಕೆ ತಕ್ಕ ಉತ್ತರ ನೀಡಲು ಬಂದ್‌ ಯಶಸ್ವಿಗೊಳಿಸುವ ಮೂಲಕ ಅವರ ಕಣ್ಣು ತೆರೆಸುವ ನಿಟ್ಟಿನಲ್ಲಿ ಹೋರಾಟ ನಡೆಸಬೇಕಿದೆ. ಶಾಂತಿಯುತ ಹೋರಾಟ ನಡೆಸಿ ಯಾದಗಿರಿಗೆ ಕಾಲೇಜು ಮತ್ತು ಬೇಕಾದ ಅನುದಾನ ತರಲು ಹಂತ ಹಂತವಾಗಿ ಉಗ್ರ ಹೋರಾಟ ನಡೆಸಲು ಸಿದ್ಧ ಎಂದು ಅವರು ತಿಳಿಸಿದರು.

ಬುಧವಾರ ಜುಲೈ 10ರಂದು ಮೈಲಾಪೂರ ಬೇಸ್‌ನಿಂದ ಗಾಂಧಿ ವೃತ್ತದ ಮಾರ್ಗವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು, ಇದರಲ್ಲಿ ಜಿಲ್ಲೆಯ ಪ್ರತಿಯೊಬ್ಬರೂ ಭಾಗವಹಿಸಿ ನಮ್ಮ ಹಕ್ಕು ಪಡೆಯಲು ಭಾಗಿಯಾಗಬೇಕೆಂದು ಮನವಿ ಮಾಡಿದರು.

ಈಗಾಗಲೇ ವಾಣಿಜ್ಯೋದ್ಯಮಿಗಳು, ವ್ಯಾಪಾರಸ್ಥರು ಬೆಂಬಲ ಸೂಚಿಸಿದ್ದು, ಇನ್ನುಳಿದಂತೆ ವಿವಿಧ ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಕಾಲೇಜು ವಿದ್ಯಾರ್ಥಿಗಳು ಪ್ರತಿಯೊಬ್ಬ ಸಾರ್ವಜನಿಕರು ಹೋರಾಟದಲ್ಲಿ ಭಾಗಿಯಾಗುವ ಮೂಲಕ ಅನ್ಯಾಯ ಖಂಡಿಸಿ ಹೋರಾಟಕ್ಕೆ ಧುಮುಕಬೇಕೆಂದು ಮನವಿ ಮಾಡಿದರು.

ವೀರ ಕನ್ನಡಿಗರ ಪ್ರತಿಷ್ಠಾನ ಅಧ್ಯಕ್ಷ ಕೃಷ್ಣಮೂರ್ತಿ ಕುಲಕರ್ಣಿ, ವೀರಭಾರತಿ ಪ್ರತಿಷ್ಠಾನ ಅಧ್ಯಕ್ಷ ವೈಜನಾಥ ಹಿರೇಮಠ, ಕರ್ನಾಟಕ ರಣಧೀರ ಪಡೆಯ ಜಿಲ್ಲಾಧ್ಯಕ್ಷ ಡಿ. ಬಾಸ್ಕರ್‌ ಅಲ್ಲಿಪುರ, ನಮ್ಮ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರವಿ ರಾಠೊಡ ಮುದ್ನಾಳ, ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಂದ್ರಶೇಖರ ದಾಸನಕೇರಿ, ಜಯ ಕರ್ನಾಟಕ ಸಂಘಟನೆಯ ಮಲ್ಲಿಕಾರ್ಜುನ ಜಲ್ಲಪ್ಪನೋರ್‌, ಶಂಕರನಾಗ ಆಟೋ ಚಾಲಕರ ಸಂಘದ ಮಲ್ಲಿಕಾರ್ಜುನ ಸಾಂಗ್ಲಿಯಾನ, ಬೆಂಜಮಿನ್‌ ಶಿವನೂರು, ವಿದ್ಯಾರ್ಥಿ ಮುಖಂಡ ಪವನಕುಮಾರ, ರೈತ ಸಂಘದ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಇದ್ದರು.

ಟಾಪ್ ನ್ಯೂಸ್

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.