ಶ್ರಮಯೋಗಿ ಪಿಂಚಣಿ ಪಡೆಯಲು ಹೆಸರು ನೋಂದಾಯಿಸಿ
Team Udayavani, Jan 1, 2020, 5:06 PM IST
ಯಾದಗಿರಿ: ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತ ಸರ್ಕಾರ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್ ಪಿಂಚಣಿ ಯೋಜನೆ ಜಾರಿಗೆ ತಂದಿದ್ದು, ಕಾರ್ಮಿಕರು ಈ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡು ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ್ ಹೇಳಿದರು.
ಜಿಲ್ಲೆಯ ಮುದ್ನಾಳ ಗ್ರಾಮದಲ್ಲಿ ಕಾರ್ಮಿಕ ಇಲಾಖೆ, ಕೇಂದ್ರೀಯ ಸರ್ಕಾರಿ ಬೀಡಿ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ. ಎಸ್.ವೈ.ಎಂ) ಯೋಜನೆಯಡಿ ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಮಾಹಿತಿ ನೀಡುವ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಅವರ ಮೂಲಕ ಅಸಂಘಟಿತ ವಲಯದಲ್ಲಿ ಬರುವ ಇತರೆ ಕಾರ್ಮಿಕರನ್ನು ಈ ಯೋಜನೆಯಡಿ ಪಿಂಚಣಿ ಪಡೆಯುವಂತೆ ತಿಳಿವಳಿಕೆ ಮೂಡಿಸುವ ಉದ್ದೇಶದಿಂದ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಾದ್ಯಂತ ಇಲ್ಲಿಯವರೆಗೆ 1,641ಕ್ಕಿಂತ ಹೆಚ್ಚಿನ ಫಲಾನುಭವಿಗಳು ಈ ಯೋಜನೆಯಡಿ ನೋಂದಣಿಯಾಗಿರುತ್ತಾರೆ. ಗ್ರಾಮೀಣ ಪ್ರದೇಶದಲ್ಲಿ ವಿವಿಧ ಕಾರ್ಮಿಕರಿಗೆ ಸೌಲಭ್ಯ ನೀಡಲು ಹೆಚ್ಚಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಕಾರ್ಮಿಕ ನಿರೀಕ್ಷಕ ಶಿವಶಂಕರ ಬಿ. ತಳವಾರ ಮಾತನಾಡಿ, ದೇಶದ
ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ದೈನಂದಿ
ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿ ಇತರೆ ವಿವಿಧ ವಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಅವರ ವೃದ್ಧಾಪ್ಯ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಕೂಡಲೇ ಸಂಬಂಧಿಸಿದ ವಲಯಗಳ ಕಾರ್ಮಿಕರು ತಪ್ಪದೇ ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.
ಕೇಂದ್ರಿಯ ಬೀಡಿ ಆಸ್ಪತ್ರೆ ಆರೋಗ್ಯಾಧಿಕಾರಿ ಡಾ| ಕೆ. ವಿಕ್ರಾಂತ
ಮತ್ತು ವೆಂಕಟೇಶ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಾರದಾ ಸಜ್ಜನ ಮತ್ತು ಪ್ರಿಯಾ ಸಜ್ಜನ, ಅಂಗನವಾಡಿ ಮೇಲ್ವಿಚಾರಕಿ ಶರಣಮ್ಮ, ಮುದ್ನಾಳ ಗ್ರಾಮದ ಅಂಗನವಾಡಿ ಮೇಲ್ವಿಚಾರಕಿ ರುಸೀಯಾ ಖಾಸಿಂ, ಕಾರ್ಮಿಕ ಇಲಾಖೆ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್, ಕಾರ್ಮಿಕ ಇಲಾಖೆ ವಿವಿಧ ವಲಯಗಳ ಕಾರ್ಮಿಕರು ಇದ್ದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.