ಕಾಮಗಾರಿ ಮುಗಿಸಲು ತಾಕೀತು
ಪ್ರವಾಹದಿಂದ ಹಾಳಾದ ರಸ್ತೆ-ಬ್ರಿಡ್ಜ್ ಗಳ ದುರಸ್ತಿಗೆ ನಿರ್ದೇಶನ
Team Udayavani, Dec 22, 2019, 3:11 PM IST
ಯಾದಗಿರಿ: ಜಿಲ್ಲೆಯ ಕೃಷ್ಣಾ ಮತ್ತು ಭೀಮಾ ನದಿಗಳ ಪ್ರವಾಹದಿಂದ ಉಂಟಾದ ರಸ್ತೆ ಮತ್ತು ಬ್ರಿಡ್ಜ್ಗಳ ದುರಸ್ತಿ ತ್ವರಿತವಾಗಿ ಕೈಗೊಳ್ಳಲು ಅಲ್ಪಾವ ಧಿ ಟೆಂಡರ್ ಕರೆದು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ನೈಸರ್ಗಿಕ ವಿಕೋಪದಿಂದ ಹಾನಿಗೊಳಗಾದ ಕಾಮಗಾರಿಗಳಿಗಾಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಅಂದಾಜು 29 ಕೋಟಿ ರೂ. ಗಳ ಅನುದಾನ ಹಂಚಿಕೆಯಾಗಿದ್ದು, ಇದರಲ್ಲಿ ಒಟ್ಟು 220 ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಅದರಂತೆ ಲೋಕೋಪಯೋಗಿ ಇಲಾಖೆಗೆ 9.60 ಕೋಟಿ ರೂ.ಗಳ ಅನುದಾನ ಹಂಚಿಕೆಯಾಗಿದ್ದು, 17 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಲ್ಲಿ 5 ರಿಂದ 50 ಲಕ್ಷ ರೂ. ವರೆಗಿನ ಕಾಮಗಾರಿಗಳಿಗೆ ಅಲ್ಪಾವಧಿ ಟೆಂಡರ್ ಕರೆದು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ತಾಕೀತು ಮಾಡಿದರು.
ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮಾತನಾಡಿ, ಆಗಸ್ಟ್ ಮಾಹೆಯಲ್ಲಿ ಪ್ರವಾಹದಿಂದ ಹಾನಿಯಾದ ಗ್ರೂಪ್ ಸಿ ಯ ಎಲ್ಲಾ 88 ಮನೆಗಳ ಮಾಲೀಕರಿಗೆ ಸರ್ಕಾರದ ನಿರ್ದೇಶನದಂತೆ ಪರಿಹಾರ
ಹಣ ನೀಡಲಾಗಿದೆ. ಉಳಿದ ಬಿ ಗ್ರೂಪ್‌ನ 12 ಮನೆಗಳಲ್ಲಿ 3 ಮನೆಗಳ ಮಾಲೀಕರು ಮಾತ್ರ ಮನೆ ನಿರ್ಮಿಸಿಕೊಳ್ಳಲು ಮುಂದೆ ಬಂದಿದ್ದಾರೆ. ಸುರಪುರ ತಾಲೂಕಿನ ಹೇಮನೂರ ಮತ್ತು ತಿಂಥಣಿ ಗ್ರಾಮಗಳ 2 ಶಾಲೆಗಳಿಗೆ ಹಾನಿಯಾಗಿದೆ. ಈ ಶಾಲೆಗಳ ದುರಸ್ತಿಗೆ ನೈಸರ್ಗಿಕ ಪ್ರಕೃತಿ ವಿಕೋಪದ ನಿ ಧಿಯಿಂದ ತಲಾ 1 ಲಕ್ಷ ರೂ.ಗಳಂತೆ ಅನುದಾನ ನೀಡಲಾಗಿದ್ದು, ದುರಸ್ತಿ ಕಾಮಗಾರಿ ಪ್ರಗತಿಯಲ್ಲಿರುವ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಮಾತನಾಡಿ, ನರೇಗಾ ಯೋಜನೆಯಡಿ ಚೆಕ್ ಡ್ಯಾಂ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.
ಕುಡಿಯುವ ನೀರಿಗೆ ಆದ್ಯತೆ: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಕುಡಿಯುವ ನೀರು ಪೂರೈಸುವುದಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ
ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ಹೆಚ್ಚಿನ ಶುದ್ಧ ಕುಡಿಯುವ ನೀರಿನ ಘಟಕಗಳು ಮತ್ತು ಬಹುಗ್ರಾಮ
ಕುಡಿಯುವ ನೀರು ಸರಬರಾಜು ಯೋಜನೆಗಳ ಕುರಿತಂತೆ ಸಾಕಷ್ಟು ದೂರುಗಳಿರುವುದಾಗಿ ಸಭೆಯಲ್ಲಿ ಪ್ರಸ್ತಾಪಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಸಂಬಂಧಪಟ್ಟ ಇಂಜಿನಿಯರ್‌ಗಳಿಂದ ಕಾರಣ ಕೇಳಿದರು.
ಜಿಲ್ಲೆಯಲ್ಲಿ 422 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 241 ಚಾಲ್ತಿಯಲ್ಲಿವೆ. 145 ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ. ಇನ್ನು ಜಿಲ್ಲೆಯಲ್ಲಿರುವ 9 ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳಲ್ಲಿ 4 ಚಾಲ್ತಿಯಲ್ಲಿಲ್ಲ ಎಂದು ಸಂಬಂಧಿಸಿದಇಂಜಿನಿಯರ್ ಉತ್ತರಿಸಿದರು.
ಯರಗೋಳ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ 2016ರಲ್ಲಿ ನೀರು ಸರಬರಾಜು ಮಾಡಲಾಗಿತ್ತು. ಆದರೆ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಯುಕ್ತ ಸದರಿ ಪೈಪ್‌ಲೈನ್ ಸ್ಥಳಾಂತರವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪ್ರಗತಿಯಲ್ಲಿದೆ. ಇದರಿಂದಾಗಿ ನೀರು ಸರಬರಾಜು ಸ್ಥಗಿತಗೊಂಡಿರುತ್ತದೆ ಎಂದು ಸಭೆಗೆ ವರದಿ ನೀಡಿದರು. ಆಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಾತನಾಡಿ, ಪೈಪ್‌ಲೈನ್ ಸ್ಥಳಾಂತರಿಸುವ ಮೊದಲು ಹೊಸ ಪೈಪ್‌ಲೈನ್ ಹಾಕಬೇಕಿತ್ತು ಎಂಬುದಾಗಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ
ತೆಗೆದುಕೊಂಡರು.
ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ್ ಯಾದವ್, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಋಷಿಕೇಶ ಭಗವಾನ್
ಸೋನಾವಣೆ, ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯದ ಅಪರ ಆಯುಕ್ತ ನಳಿನ್ ಅತುಲ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
MUST WATCH
ಹೊಸ ಸೇರ್ಪಡೆ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.