ರೈಲ್ವೆ ಇಲಾಖೆ ವಿಚಾರಣೆ ಮುಕ್ತಾಯ; ಆಯೋಗಕ್ಕೆ ವರದಿ

Team Udayavani, May 20, 2019, 12:53 PM IST

20-May-15

ಯಾದಗಿರಿ: ನಗರ ರೈಲ್ವೆ ನಿಲ್ದಾಣ ಆವರಣದಲ್ಲಿ ಮ್ಯಾನುವೆಲ್ ಸ್ಕ್ಯಾವೆಂಜಿಂಗ್‌ ಕಾಯ್ದೆ ಉಲ್ಲಂಘನೆಯಾಗಿರುವ ಕುರಿತು ಇಲಾಖಾ ವಿಚಾರಣೆಗೆ ನೇಮಕವಾಗಿದ್ದ ಅಧಿಕಾರಿಗಳ ತಂಡದ ವರದಿ.

ಯಾದಗಿರಿ: ನಗರ ರೈಲ್ವೆ ನಿಲ್ದಾಣದಲ್ಲಿ ಶೌಚಾಲಯ ಮಲದ ಗುಂಡಿಗಿಳಿದು ಕಾರ್ಮಿಕನೊಬ್ಬ ಪೈಪ್‌ಲೈನ್‌ ಸ್ವಚ್ಛಗೊಳಿಸಿರುವ ಅಮಾನವೀಯ ವರದಿಯನ್ನು ಮಾರ್ಚ್‌ 27ರಂದು ಉದಯವಾಣಿ ಪ್ರಕಟಿಸಿದ ಹಿನ್ನೆಲೆ ವರದಿ ಪ್ರಕಟವಾದ ದಿನವೇ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗವು ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿತ್ತು. ಇದೀಗ ರೈಲ್ವೆ ಅಧಿಕಾರಿಗಳು ಇಲಾಖೆ ವಿಚಾರಣೆ ನಡೆಸಿ ವರದಿಯನ್ನು ಆಯೋಗಕ್ಕೆ ರವಾನಿಸಿರುವ ಮಾಹಿತಿ ಲಭ್ಯವಾಗಿದೆ.

ಘಟನೆ ಕುರಿತು ಗುಂತಕಲ್ ವಿಭಾಗದ ಉನ್ನತ ಅಧಿಕಾರಿಗಳಿಗೆ ಆಯೋಗ ನೋಟಿಸ್‌ ನೀಡಿದ ಹಿನ್ನೆಲೆ ಗುಂತಕಲ್ ಡಿಆರ್‌ಎಂ ಕಾರ್ಯಾಲಯ ರಾಯಚೂರಿನ ಎಡಿಇಎನ್‌ ಜಿ. ಸುದರ್ಶನಮ್‌ ಅಧ್ಯಕ್ಷತೆಯಲ್ಲಿ ಎಡಿಎಂಒ ಕೆ. ಅನೀಲಕುಮಾರ ಹಾಗೂ ಎಡಿಎಸ್‌ಟಿ ಡಿ. ಜನಾರ್ಧನ ಅವರನ್ನೊಳಗೊಂಡ ತನಿಖಾ ತಂಡ ರಚಿಸಿತ್ತು.

ಏಪ್ರಿಲ್ 3ರಂದು ಬೆಳಗ್ಗೆ 10:00 ಗಂಟೆಗೆ ರಾಯಚೂರಿನ ಸಹಾಯಕ ವಿಭಾಗೀಯ ಇಂಜಿನಿಯರ್‌ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ನೊಟೀಸ್‌ ನೀಡಿದ್ದರು. ಘಟನೆ ನಡೆದ ವೇಳೆ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿಯೇ ಇದ್ದ ರಾಯಚೂರಿನ ಆರೋಗ್ಯ ನಿರೀಕ್ಷಕ ಮಿದುನ್‌ ಮತ್ತು ಮಲದ ಗುಂಡಿಗಿಳಿದ ಕಾರ್ಮಿಕ ಖಾದರವಲಿ ಅವರನ್ನು ವಿಚಾರಣೆ ನಡೆಸಿದ್ದಾರೆ.

ಕಾರ್ಮಿಕ ಯಾವುದೇ ಸುರಕ್ಷತೆ ಅಳವಡಿಸಿಕೊಳ್ಳದೇ ಮಲದ ಗುಂಡಿಗಿಳಿದು ಪೈಪ್‌ಲೈನ್‌ ಜಾಮ್‌ ಆಗಿರುವುದನ್ನು ಸ್ವಚ್ಛಗೊಳಿಸುತ್ತಿರುವ ಕುರಿತು ಚಿತ್ರ ಸಮೇತ ವರದಿಯಾಗಿದ್ದರೂ ಅಧಿಕಾರಿಗಳ ವರದಿಯಲ್ಲಿ ಮಾತ್ರ ಚರಂಡಿಯಲ್ಲಿನ ಸ್ನಾನದ ನಿರುಪಯುಕ್ತ ನೀರು ಸ್ವಚ್ಛಗೊಳಿಸಲಾಗಿದೆ ಎಂದು ಉಲ್ಲೇಖೀಸಿದ್ದು, ಮ್ಯಾನುವೆಲ್ ಸ್ಕಾ ್ಯವೆಂಜಿಂಗ್‌ ಕಾಯ್ದೆ 2013 ಉಲ್ಲಂಘನೆಯಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಘಟನೆ ಸಾಕ್ಷ್ಯ ಸಂಗ್ರಹಿಸಿದ ಆಯೋಗದ ಸದಸ್ಯ: ರೈಲ್ವೆ ನಿಲ್ದಾಣ ಆವರಣದಲ್ಲಿ ಮಲದ ಗುಂಡಿಗಿಳಿದು ಕಾರ್ಮಿಕ ಕೇವಲ ಒಳ ಉಡುಪಿನಲ್ಲಿ ಸ್ವಚ್ಛಗೊಳಿಸಿರುವ ಅಮಾನವೀಯ ವರದಿ ಪ್ರಕಟವಾಗುತ್ತಿದ್ದಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಘಟನೆಯ ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

ಘಟನೆ ಕುರಿತು ಗಂಭೀರವಾಗಿ ಪರಿಗಣಿಸಿರುವ ಸಫಾಯಿ ಕರ್ಮಚಾರಿ ಆಯೋಗ ರೈಲ್ವೆ ಅಧಿಕಾರಿಗಳು ನೀಡಿರುವ ವರದಿ ಆಧಾರದಲ್ಲಿಯೇ ಪ್ರಕರಣವನ್ನು ಮುಕ್ತಾಯಗೊಳಿಸುತ್ತದೆಯೋ ಇಲ್ಲವೇ ಆಯೋಗದಿಂದ ಪ್ರತ್ಯೇಕ ವಿಚಾರಣೆ ನಡೆಸುತ್ತದೋ ಎನ್ನುವುದನ್ನು ಕಾಯ್ದು ನೋಡಬೇಕಿದೆ.

ಆಯೋಗದಿಂದ ಗುಂತಕಲ್ ವಿಭಾಗದ ಉನ್ನತ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿ ಸಲಾಗಿತ್ತು. ಚರಂಡಿಯಲ್ಲಿ ಸ್ನಾನಗೃಹದ ನಿರುಪಯುಕ್ತ ನೀರು ನಿಂತಿರುವುದನ್ನು ಸ್ವಚ್ಛಗೊಳಿಸಲಾಗುತ್ತಿತ್ತು ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಈ ಪ್ರಕರಣ ಕುರಿತು ಆಯೋಗದ ಕಾರ್ಯದರ್ಶಿಗೆ ಕಳಿಸಿ ಅಭಿಪ್ರಾಯ ಪಡೆಯಲಾಗುವುದು. ಬಳಿಕ ಮುಂದಿನ ಕ್ರಮದ ಕುರಿತು ನಿರ್ಧಾರ ಮಾಡಲಾಗುವುದು.
ಜಗದೀಶ ಹಿರೇಮನಿ,
ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ

ಟಾಪ್ ನ್ಯೂಸ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.