ಪಾಲಕರು ಮಕ್ಕಳಿಗೆ ಲಸಿಕೆ ಹಾಕಿಸಲಿ
ಜಿಲ್ಲೆಯ 34,212 ಮಕ್ಕಳಿಗೆ ರೋಟಾವೈರಸ್ ಲಸಿಕೆ ನೀಡುವ ಗುರಿ: ಡಾ| ಲಕ್ಷ್ಮೀಕಾಂತ
Team Udayavani, Sep 1, 2019, 11:28 AM IST
ಯಾದಗಿರಿ: ಜಿಲ್ಲಾ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಂಡ ರೋಟಾವೈರಸ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿದರು.
ಯಾದಗಿರಿ: ರೋಟಾವೈರಸ್ ಸೋಂಕಿನಿಂದ ರಕ್ಷಣೆ ಪಡೆಯುವ ಏಕೈಕ ನಿರ್ದಿಷ್ಟ ಸಾಧನವೆಂದರೆ ರೋಟಾವೈರಸ್ ಲಸಿಕೆ ಹಾಕಿಸುವುದಾಗಿದೆ. ಮಕ್ಕಳಿಗೆ 6, 10 ಮತ್ತು 14 ವಾರಗಳ ವಯಸ್ಸಿನಲ್ಲಿ ರೋಟಾವೈರಸ್ ಲಸಿಕೆ ತಪ್ಪದೇ ಹಾಕಿಸಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಸಲಹೆ ನೀಡಿದರು.
ನಗರದ ಜಿಲ್ಲಾ ಆಸ್ಪತ್ರೆ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ರೋಟಾವೈರಸ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರೋಟಾವೈರಸ್ ಹೆಚ್ಚು ಸಾಂಕ್ರಾಮಿಕವಾಗಿದ್ದು, ಅತಿಸಾರದಿಂದ ಬಳಲುತ್ತಿರುವ ರೋಗಿಗಳು ದೊಡ್ಡ ಪ್ರಮಾಣದಲ್ಲಿ ವೈರಸ್‌ನ್ನು ಮಲದ ಮೂಲಕ ಹೊರ ಹಾಕುತ್ತಾರೆ. ಒಂದು ಮಗುವಿಗೆ ಕಲುಷಿತವಾದ ನೀರು, ಆಹಾರ ಮತ್ತು ಕೊಳೆಯಾದ ಕೈಗಳ ಸಂಪರ್ಕಕ್ಕೆ ಬರುವುದರಿಂದ ವೈರಸ್ ಹರಡುತ್ತದೆ. ಈ ವೈರಾಣು ತುಂಬಾ ಸಮಯದವರೆಗೆ ಮಕ್ಕಳ ಕೈಯಲ್ಲಿ ಮತ್ತು ಇತರ ಗಟ್ಟಿಯಾದ ಮೇಲ್ಪದರಗಳಲ್ಲಿ ಜೀವಂತವಾಗಿರಬಹುದು. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಅಡಿಯಲ್ಲಿ ಎಲ್ಲಾ ಲಸಿಕೆಗಳ ಜೊತೆಗೆ ಈ ಲಸಿಕೆ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಕ್ಕಳಿಗೆ ಲಸಿಕೆ ನೀಡಿ ಮಾತನಾಡಿ, ರೋಟಾವೈರಸ್ ಒಂದು ಅತೀ ಹೆಚ್ಚು ಹರಡಬಲ್ಲ ವೈರಾಣು. ಇದು ಮಕ್ಕಳಲ್ಲಿ ಭೇದಿಯಾಗಲು ಬಹು ಮುಖ್ಯ ಕಾರಣವಾಗಿದೆ. ರೋಟಾವೈರಸ್ ಸೋಂಕಿನ ಆರಂಭ ಕಡಿಮೆ ಪ್ರಮಾಣದ ಭೇದಿಯಿಂದ ಆಗುತ್ತದೆ. ಮುಂದೆ ಅದು ಗಂಭೀರ ಸ್ವರೂಪಕ್ಕೆ ತಿರುಗಬಹುದು. ಸೂಕ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಶರೀರದಲ್ಲಿ ನೀರು ಮತ್ತು ಲವಣಾಂಶ ಕೊರತೆಯಾಗಬಹುದು. ಕೆಲವು ಸಂದರ್ಭಗಳಲ್ಲಿ ಮಕ್ಕಳು ಸಾವಿಗೀಡಾಗಬಹುದು. ಆದ್ದರಿಂದ ಸಾರ್ವಜನಿಕರು ತಮ್ಮ ಮಕ್ಕಳಿಗೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಎಲ್ಲಾ ಲಸಿಕೆಗಳ ಜೊತೆಯಲ್ಲಿ ರೋಟಾವೈರಸ್ ಲಸಿಕೆ ಪಡೆಯುವಂತೆ ತಿಳಿಸಿದರು.
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತಾಯಿ ಎದೆ ಹಾಲು ಅತಿ ಅವಶ್ಯಕ. ಶಿಶುವಿಗೆ ಹುಟ್ಟಿನಿಂದ 6 ತಿಂಗಳವರೆಗೆ ತಾಯಿ ಎದೆ ಹಾಲು ಕುಡಿಸುವುದರಿಂದ ಶಿಶು ದೈಹಿಕವಾಗಿ ಮತ್ತು ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯ. 6 ತಿಂಗಳ ನಂತರ ಪೂರಕ ಪೌಷ್ಟಿಕ ಆಹಾರದ ಜೊತೆಗೆ ಎರಡು ವರ್ಷದವರೆಗೆ ತಾಯಿಯ ಎದೆ ಹಾಲು ಮುಂದುವರೆಸಬೇಕು. ಎಲ್ಲರೂ ತಪ್ಪದೇ ಶೌಚಾಲಯ ಬಳಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ನಾರಾಯಣಪ್ಪ ಮಾತನಾಡಿ, ಪ್ರತಿದಿನ ಸುಮಾರು 300 ಮಕ್ಕಳು ಅತಿಸಾರ ಭೇದಿಯಿಂದ ಉಂಟಾಗುವ ನಿರ್ಜಲೀಕರಣದಿಂದ ಸಾವನ್ನಪ್ಪುತ್ತಿದ್ದಾರೆ. ರೋಟಾವೈರಸ್‌ನಿಂದ ಉಂಟಾಗುವ ಅತಿಸಾರ ಭೇದಿಯನ್ನು ಲಸಿಕೆಯಿಂದ ತಡೆಗಟ್ಟಬಹುದು ಎಂದು ಹೇಳಿದರು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ| ಲಕ್ಷ್ಮೀಕಾಂತ ಪ್ರಾಸ್ತಾವಿಕ ಮಾತನಾಡಿ, ಯಾದಗಿರಿ ಜಿಲ್ಲೆಯ ಎಲ್ಲಾ ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಒಟ್ಟು 34,212 ಮಕ್ಕಳಿಗೆ ರೋಟಾವೈರಸ್ ಲಸಿಕೆಯನ್ನು ನೀಡುವ ಗುರಿ ಹೊಂದಲಾಗಿದೆ. ಅದಕ್ಕಾಗಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು 10 ಮಾರಕ ರೋಗಗಳಾದ ಬಾಲ್ಯಕ್ಷಯ, ಪೋಲಿಯೋ, ಗಂಟಲುಮಾರಿ, ನಾಯಿ ಕೆಮ್ಮು, ಧನುರ್ವಾಯು, ಕಾಮಾಲೆ, ನಿಮೋನಿಯ, ದಡಾರ, ರುಬೆಲ್ಲಾ, ಅತಿಸಾರ ಭೇದಿ ವಿರುದ್ಧ ತಪ್ಪದೇ ಲಸಿಕೆ ಹಾಕಿಸುವಂತೆ ತಿಳಿಸಿದರು.
ಡಾ| ವೀರೇಶ, ಡಾ| ಹಣಮಂತರೆಡ್ಡಿ, ಸುದರ್ಶನ, ಗಂಗಾಧರ, ಆಶಾ ಕಾರ್ಯಕರ್ತೆಯರು, ತಾಯಂದಿರು ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ ನಿರೂಪಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.