ಶಂಕರರಿಂದ ಹಿಂದೂ ಧರ್ಮ ಪುನರುಜ್ಜೀವನ

ಮಹಾತ್ಮರ ಸಂದೇಶ ಪಾಲಿಸಿ•ಭಾರತೀಯ ಸಂಸ್ಕೃತಿಗೆ ಶಂಕರಾಚಾರ್ಯರ ಕೊಡುಗೆ ಅಪಾರ: ರಜಪೂತ

Team Udayavani, May 10, 2019, 12:56 PM IST

10-May-17

ಯಾದಗಿರಿ: ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಮಾತನಾಡಿದರು.

ಯಾದಗಿರಿ: ಹಿಂದೂ ಧರ್ಮದ ಬಗ್ಗೆ ಆಳವಾಗಿ ಅಧ್ಯಯನ ಮಾಡಿ, ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದವರಲ್ಲಿ ಆದಿ ಶಂಕರಾಚಾರ್ಯರು ಮೊದಲಿಗರು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಗುರುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಂಕರಾಚಾರ್ಯರು ತಮ್ಮ 32 ವರ್ಷಗಳ ಜೀವಿತಾವಧಿಯಲ್ಲಿ ಹಿಂದೂ ಧರ್ಮದ ಬಗ್ಗೆ ಹೆಚ್ಚಿನ ಒಲವು ತೋರಿದ ಅವರು ವೇದ, ಉಪನಿಷತ್ತು ಹಾಗೂ ಭಗವದ್ಗೀತೆಯನ್ನು ಆಳವಾಗಿ ಅರಿತುಕೊಂಡಿದ್ದರು. ದೇಶದ ನಾಲ್ಕು ದಿಕ್ಕುಗಳಲ್ಲಿ ಸಂಚರಿಸಿ ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸುತ್ತಾ ಹಿಂದೂ ಧರ್ಮದ ಬಗ್ಗೆ ಪ್ರಚಾರ ಮಾಡಿ, ನಾಲ್ಕು ಮಠಗಳನ್ನು ಸ್ಥಾಪಿಸಿದರು. ಭಾರತೀಯ ಸಂಸ್ಕೃತಿಗೆ ಶಂಕರಾಚಾರ್ಯರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಮಾತನಾಡಿ, ಹಿಂದೂ ಧರ್ಮದ ಅವನತಿಯ ಕಾಲದಲ್ಲಿ ಜನ್ಮ ತಾಳಿದ ಶಂಕರಾಚಾರ್ಯರು ಧರ್ಮವನ್ನು ಪುನರುಜ್ಜೀವನಗೊಳಿಸಿದರು. ಕರ್ಮವು ಜ್ಞಾನ ಪ್ರಾಪ್ತಿಯ ಮಾರ್ಗವಾಗಿದೆ. ಹೀಗಾಗಿ ಇವರ ಜೀವನವು ಯುವ ಸಮುದಾಯಕ್ಕೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.

ರಮೇಶ ಕುಲಕರ್ಣಿ ಉಪನ್ಯಾಸ ನೀಡಿ, ಆದಿ ಶಂಕರಾಚಾರ್ಯರು ಕ್ರಿ.ಶ 788ರಲ್ಲಿ ಕೇರಳದ ಕಾಲಟಿ ಗ್ರಾಮದ ಶಿವಗುರು ಹಾಗೂ ಆರ್ಯಾಂಭ ದಂಪತಿಯ ಪುತ್ರನಾಗಿ ಜನಿಸಿದರು. ವೈದಿಕ ಧರ್ಮದಲ್ಲಿ ಹಲವು ಪಂಥಗಳಿದ್ದು, ಅವುಗಳಲ್ಲಿ ಆರು ಪಂಥಗಳ ದೇವರನ್ನು ಒಟ್ಟಿಗೆ ಪೂಜಿಸುವಂತೆ ಮಾಡಿದರು ಎಂದು ತಿಳಿಸಿದರು.

ಶಂಕರಾಚಾರ್ಯರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ನಾಲ್ಕು ಬಾರಿ ಕಾಲ್ನಡಿಗೆಯಲ್ಲೆ ಸಂಚರಿಸಿದರು. ದೇಶದ ನಾಲ್ಕು ದಿಕ್ಕುಗಳಲ್ಲಿ ಕರ್ನಾಟಕದ ಶೃಂಗೇರಿಯಲ್ಲಿ ಶಾರದಾ ಪೀಠ, ಗುಜರಾತನಲ್ಲಿ ದ್ವಾರಕಾ ಪೀಠ, ಓರಿಸ್ಸಾದಲ್ಲಿ ಗೋವರ್ಧನ ಪೀಠ, ಉತ್ತರ ಖಂಡದಲ್ಲಿ ಜೋತಿರ್ಮಠ ಪೀಠವನ್ನು ಸ್ಥಾಪಿಸಿದರು. ವೇದ, ಉಪನಿಷತ್ತುಗಳ ಮೇಲೆ ಭಾಷ್ಯ ಬರೆದರು. ಇವರು ಪ್ರತಿಪಾದಿಸಿದ ಅದ್ವೈತ ತತ್ವವು ಎರಡಲ್ಲ ಒಂದು; ಅಂದರೆ ಆತ್ಮ ಮತ್ತು ಪರಮಾತ್ಮ ಒಂದೇ. ದೇವರನ್ನು ಕಾಣಲು ಜ್ಞಾನ ಮಾರ್ಗ ಸೂಕ್ತವಾಗಿದೆ ಎಂದು ಸಾರಿದರು. ಶಂಕರಾಚಾರ್ಯರ ಸಿದ್ಧಾಂತಕ್ಕೆ ಮಾಯಾವಾದ ಸಿದ್ಧಾಂತ ಎಂದು ಕೂಡ ಕರೆಯುತ್ತಾರೆ. ಅಂದರೆ ಜಗತ್ತು ಮಿತ್ಯ ಶಾಶ್ವತವಲ್ಲ. ಇದು ನೀರಿನ ಮೇಲಿನ ಗುಳ್ಳೆ ಇದ್ದಂತೆ. ಶಾಶ್ವತವಾದದ್ದು ದೇವರು, ಪರಮಾತ್ಮ ಎಂದು ಹೇಳಿದ್ದಾರೆ ಎಂದು ವಿವರಿಸಿದರು.

ಯಾದಗಿರಿ ನಗರಸಭೆಯ ಪೌರಾಯುಕ್ತ ರಮೇಶ ಸುಣಗಾರ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಡಾ| ವಿ. ಮುನಿರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಯಂತ್ಯುತ್ಸವ ಸಮಿತಿಯ ಜಿಲ್ಲಾ ಸಂಚಾಲಕರಾದ ರತ್ನಾಕರ ಭಟ್ ಸುರಪುರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕರಾದ ಚಂದ್ರಶೇಖರ ಗೋಗಿ ಹಾಗೂ ತಂಡದವರು ನಾಡಗೀತೆ ಹಾಡಿದರು. ಶುಭಂ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಗುರು ಪ್ರಸಾದ ವೈದ್ಯ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

12-heart-attack

Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

8-utkhader

U. T. Khader: ಹೆಬ್ಟಾಳ್ಕರ್‌-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್‌

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

11

Kasaragodu: ಹೊಳೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

8-utkhader

U. T. Khader: ಹೆಬ್ಟಾಳ್ಕರ್‌-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

12-heart-attack

Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

11

Kasaragodu: ಹೊಳೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.