ತೆಲಂಗಾಣ ಸಾರಿಗೆ.. ಸುರಕ್ಷಿತ ಜವಾಬ್ಧಾರಿ ಯಾರಿಗೆ?
Team Udayavani, Oct 12, 2019, 3:09 PM IST
ಅನೀಲ ಬಸೂದೆ
ಯಾದಗಿರಿ: ರಾಜ್ಯದ ಗಡಿ ಜಿಲ್ಲೆ ಯಾದಗಿರಿಯಲ್ಲಿ ತೆಲಂಗಾಣ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಅಧಿಕೃತ ಚಾಲಕ ಮತ್ತು ನಿರ್ವಾಹಕರಿಲ್ಲದ ಬಸ್ ಸಂಚಾರ ನಡೆಯುತ್ತಿದ್ದು, ಅದರಲ್ಲಿ ಪ್ರಯಾಣಿಕರಿಂದ ಹಣ ಪಡೆಯಲಾಗುತ್ತಿದೆ ವಿನಃ ಟಿಕೆಟ್ ಮಾತ್ರ ನೀಡಲಾಗುತ್ತಿಲ್ಲ.
ನೆರೆಯ ತೆಲಂಗಾಣದ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರು ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಒಂದು ವಾರದಿಂದ ಸೇವೆಗೆ ಗೈರಾಗಿ ಪ್ರತಿಭಟನೆಯಲ್ಲಿ ತೊಡಗಿದ್ದು, ತೆಲಂಗಾಣ ಸರ್ಕಾರ ಪ್ರಯಾಣಿಕರಿಗೆ ತೊಂದರೆಯಾಗಬಾರದೆಂದು ಕಳೆದೆರಡು ದಿನಗಳಿಂದ ಖಾಸಗಿ ವ್ಯಕ್ತಿಗಳನ್ನು ನೇಮಿಸಿಕೊಂಡು ಯಥಾವತ್ತಾಗಿ ಸಾರಿಗೆ ಸೇವೆ ಆರಂಭಿಸಿದೆ. ಅಲ್ಲಿಯ ವಾಹನಗಳು ನಮ್ಮ ರಾಜ್ಯದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಸಂಚರಿಸುತ್ತಿವೆ. ಬಸ್‌ನಲ್ಲಿ ಹಣ ಪಡೆಯಲಾಗುತ್ತದೆ ಹೊರತು ಟಿಕೆಟ್ ನೀಡಲಾಗುತ್ತಿಲ್ಲ.
ಏನಾದರೂ ಹೆಚ್ಚು ಕಡಿಮೆಯಾದ್ರೆ ಗತಿಯೇನು ಎಂದು ಆತಂಕದಿಂದಲೇ ಪ್ರಯಾಣಿಸುವಂತಾಗಿದೆ. ರಾಜ್ಯದ ಸಾರಿಗೆ ಇಲಾಖೆ ಅಧಿಕಾರಿಗಳು ಈ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ನಮ್ಮ ರಾಜ್ಯದ ಸಾರಿಗೆ ವಾಹನಗಳು ಪರವಾನಗಿ ಪಡೆದು ಆ ರಾಜ್ಯಕ್ಕೆ ಸಂಚರಿಸುವುದು ಮತ್ತು ತೆಲಂಗಾಣದ ಬಸ್‌ಗಳು ನಮ್ಮ ಭಾಗದಲ್ಲಿ ಸಂಚರಿಸುವುದು ಸಾಮಾನ್ಯ. ಅಧಿಕೃತ
ಚಾಲಕ, ನಿರ್ವಾಹಕರು ಇಲ್ಲದೇ ಇರುವ ಬಸ್‌ಗಳು ನಮ್ಮ ರಾಜ್ಯಕ್ಕೆ ಪ್ರವೇಶಿಸಿ ಇಲ್ಲಿನ ಪ್ರಯಾಣಿಕರನ್ನು ಹತ್ತಿಸಿಕೊಂಡು ಸಂಚರಿಸುವುದು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಉದ್ಭವವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.