ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ಧತೆ
ಕೆರೆ ವೀಕ್ಷಣೆ-ಶುದ್ಧ ನೀರಿನ ಘಟಕ ಪರಿಶೀಲನೆ•ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯ
Team Udayavani, Jun 10, 2019, 12:32 PM IST
ಯಾದಗಿರಿ: ಅನವಾರ ಗ್ರಾಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ವಿಪಕ್ಷ ನಾಯಕ ಯಡಿಯೂರಪ್ಪ ಮಾತನಾಡಿದರು.
ಯಾದಗಿರಿ: ರಾಜ್ಯದ ಹಲವೆಡೆ ಬರದ ಪರಿಸ್ಥಿತಿ, ಕುಡಿಯುವ ನೀರು ಇನ್ನಿತರ ಸಮಸ್ಯೆಗಳ ಕುರಿತು ಅವಲೋಕಿಸಿ ಸಮರ್ಪಕ ಸೌಕರ್ಯ ಒದಗಿಸಲು ವಿಫಲವಾದ ಸರ್ಕಾರದ ವಿರುದ್ಧ ಬೃಹತ್ ಹೋರಾಟಕ್ಕೆ ಸಿದ್ಧತೆ ನಡೆಸುವುದಾಗಿ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಯಾದಗಿರಿ ವಿಧಾನಸಭಾ ಕ್ಷೇತ್ರದ ಶಹಾಪುರ ತಾಲೂಕು ಅನವಾರ ಗ್ರಾಮಕ್ಕೆ ಭೇಟಿ ನೀಡಿ ವಾಸ್ತವಿಕ ಪರಿಸ್ಥಿತಿ ವೀಕ್ಷಿಸಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ರಾಜ್ಯದ ಗ್ರಾಮೀಣ ಭಾಗದಲ್ಲಿ ಹಲವಾರು ಸಮಸ್ಯೆ ಜನರನ್ನು ಕಾಡುತ್ತಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಳೆದ ಒಂದು ವರ್ಷದಿಂದ ಬೆಂಗಳೂರಿನ ತಾಜ್‌ವೆಸ್ಟ್ ಹೋಟೆಲ್ನಲ್ಲಿ ತಂಗಿದ್ದಾರೆ. ಅವರಿಗೇನು ಗೊತ್ತು ಜನರ ಸಮಸ್ಯೆ. ಈಗ ಸಮಸ್ಯೆಯಿಂದ ಹೊರಬರಲು ಗ್ರಾಮ ವಾಸ್ತವ್ಯ ಮಾಡಲು ನಿರ್ಧರಿಸಿದ್ದಾರೆ ಎಂದು ವ್ಯಂಗವಾಡಿದರು.
ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಕ್ರಿಯಾಶೀಲವಾಗಿ ಕೆಲಸ ಮಾಡದ ಪರಿಣಾಮ ಆಡಳಿತಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ. ಜನರ ಸಮಸ್ಯೆ ಪರಿಹಾರ ಮಾಡುವರು ಯಾರು? ಅದಕ್ಕಾಗಿ ತಾವು ಪ್ರವಾಸ ಕೈಗೊಂಡಿದ್ದು, ಬರುವ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದರು. ಗ್ರಾಮದಲ್ಲಿ ಬರಗಾಲ ಉದ್ಬವಿಸಿದೆ. ಅಲ್ಲದೆ ನಮ್ಮ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರ ಜಮಿನುಗಳಿಗೆ ನಾರಾಯಣಪುರ ಎಡದಂಡೆ ಕಾಲುವೆ ನೀರು ತಲುಪುತ್ತಿಲ್ಲ ಪರಿಣಾಮ ರೈತರು ಸಂಕಷ್ಟದಲ್ಲಿದ್ದಾರೆ ಎಂದು ರೈತರು ವಿವರಿಸಿದರು.
ಗ್ರಾಮದಲ್ಲಿ ಸರ್ಕಾರದಿಂದ ಈಗಾಗಲೇ ಶುದ್ಧ ನೀರಿನ ಘಟಕ ಸ್ಥಾಪನೆಯಾಗಿದೆ. ಆದರೆ ಅದು ಕಾರ್ಯರಂಭ ಮಾಡಿಲ್ಲ. ಇದರಿಂದ ಕುಡಿಯುವ ನೀರಿನ ಸಮಸ್ಯೆ ಜನರನ್ನು ಕಾಡುತ್ತಿದೆ. ಜತೆಗೆ ಜನತೆ ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ. ಗ್ರಾಮದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ವಿವರಿಸಿದರು.
ನಂತರ ಖಾನಾಪುರಕ್ಕೆ ತೆರಳಿ ಕೆರೆ ವೀಕ್ಷಿಸಿ ಗುಲಸರಂಗೆ ತೆರಳಿ ಕುಡಿಯುವ ನೀರಿನ ಸಮಸ್ಯೆ ಗಮನಿಸಿ ಸ್ಥಳದಲ್ಲಿಯೇ ಇದ್ದ ಜಿಪಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ನನೆಗುದಿಗೆ ಬಿದ್ದಿರುವ ಕುಡಿಯುವ ನೀರು ಪೂರೈಕೆ ಯೋಜನೆಗಳ ಕಾಮಗಾರಿ ಯೋಜನೆಗಳು ಪೂರ್ಣಗೊಳಿಸುವಂತೆ ಸೂಚಿಸಿದರು.
ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಗೋವಿಂದ ಕಾರಜೋಳ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಶಾಸಕರಾದ ವೆಂಕಟರೆಡ್ಡಿ ಮುದ್ನಾಳ, ಮಾಜಿ ಸಚಿವರಾದ ಡಾ| ಎ.ಬಿ. ಮಾಲಕರೆಡ್ಡಿ, ಬಾಬುರಾವ್ ಚಿಂಚಸೂರ, ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ, ನಾಗರತ್ನ ಕುಪ್ಪಿ, ಸಿದ್ಧಣ್ಣಗೌಡ ವಡಗೇರಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.