ಕೃಷ್ಣೆಗೆ 1.6 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
Team Udayavani, Aug 9, 2022, 4:59 PM IST
ನಾರಾಯಣಪುರ: ನಿರಂತರ ಒಳಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಬಸವಸಾಗರ ಜಲಾಶಯದಿಂದ 1.6 ಲಕ್ಷ ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಗುತ್ತಿದ್ದು, ಕೃಷ್ಣಾ ತೀರದ ಗ್ರಾಮಗಳ ಜನತೆಗೆ ಮತ್ತೆ ಪ್ರವಾಹ ಭೀತಿ ಶುರುವಾಗಿದೆ. ಕೆಳ ಹಂತದ ಸೇತುವೆಗಳು ಜಲಾವೃತವಾಗುವ ಸಾಧ್ಯತೆಗಳಿದ್ದು, ನದಿ ತೀರದ ಜನ ಮುಂಜಾಗ್ರತೆ ವಹಿಸುವಂತೆ ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.
ಒಂದು ವಾರದಿಂದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆ ಹಾಗೂ ಆಲಮಟ್ಟಿ ಸಾಗರದಿಂದ ಬಸವಸಾಗರಕ್ಕೆ ಬರುವ ಒಳಹರಿವು ರವಿವಾರ ಬೆಳಗ್ಗೆ 10 ಸಾವಿರ ಕ್ಯೂಸೆಕ್‌ನಷ್ಟಿತ್ತು. ಸೋಮವಾರ ಬೆ.11ಕ್ಕೆ ಒಳಹರಿವು 25 ಸಾವಿರ ಕ್ಯೂಸೆಕ್ ತಲುಪಿತು. ರಾತ್ರಿ ವೇಳೆಗೆ ಒಳಹರಿವು 1 ಲಕ್ಷ ಕ್ಯೂಸೆಕ್‌ಗೆ ಏರಿಕೆಯಾದ ಹಿನ್ನೆಲೆಯಲ್ಲಿ ಜಲಾಶಯದ 14 ಕ್ರಸ್ಟ್‌ಗೇಟ್ ಹಾಗೂ ಮುರುಡೇಶ್ವರ ಜಲವಿದ್ಯುತ್ ಸ್ಥಾವರದ ಮೂಲಕ ಒಟ್ಟು 1.6 ಲಕ್ಷ ಕ್ಯೂಸೆಕ್‌ನಷ್ಟು ನೀರು ಹರಿಸಲಾಗುತ್ತಿದೆ. ಕೆಲ ದಿನಗಳಿಂದ ನದಿಯಲ್ಲಿ ನೀರಿನ ಹರಿವು ಕ್ಷೀಣಿಸಿತ್ತು. ಸದ್ಯ ಅಪಾರ ನೀರು ಕೃಷ್ಣಾ ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಹರಿವು ಪ್ರವಾಹ ಸ್ವರೂಪ ಪಡೆದಿದೆ. ಪ್ರಸ್ತುತ ಆಲಮಟ್ಟಿ ಶಾಸ್ತ್ರಿ ಜಲಾಶಯದಿಂದ ಬಸವಸಾಗರಕ್ಕೆ ಬರುವ ಒಳಹರಿವು ಗಮನಿಸಿ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ. ಒಂದೊಮ್ಮೆ ಜಲಾಶಯಕ್ಕೆ ಬರುವ ಒಳಹರಿವು ಇನ್ನೂ ಹೆಚ್ಚಾದರೆ ನದಿಗೆ ನೀರು ಹರಿಸುವ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯದ ಇಂದಿನ ಮಟ್ಟ: ಜಲಾಶಯದ ಗರಿಷ್ಠ ಮಟ್ಟ 492.25 ಮೀ.ನಲ್ಲಿ ಇಂದು 491.76 ಮೀ. ನೀರಿದೆ. ಗರಿಷ್ಠ ಸಂಗ್ರಹ 33.31 ಟಿಎಂಸಿ ಅಡಿಗಳಲ್ಲಿ 31.05 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಒಳಹರಿವು 1 ಲಕ್ಷ, ಹೊರ ಹರಿವು 1.6 ಲಕ್ಷ ಸಾವಿರ ಕ್ಯೂಸೆಕ್ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.