100 ಐಸೊಲೇಷನ್ ಬೆಡ್ ವ್ಯವಸ್ಥೆ
Team Udayavani, Apr 3, 2020, 6:08 PM IST
ಸಾಂದರ್ಭಿಕ ಚಿತ್ರ
ಯಾದಗಿರಿ: ನೋವೆಲ್ ಕೋವಿಡ್ 19 ವೈರಸ್ ಪರೀಕ್ಷೆ ಜಿಲ್ಲೆಯ 7 ಹೊಸ ಮಾದರಿಗಳನ್ನು ಸಂಗ್ರಹಿಸಿ ಕಳುಹಿಸಲಾಗಿದೆ. ವೈರಾಣು ಪರೀಕ್ಷೆಗಾಗಿ ಇಲ್ಲಿಯವರೆಗೆ ಒಟ್ಟು 16 ವ್ಯಕ್ತಿಗಳ ಮಾದರಿಗಳನ್ನು ಕಳುಹಿಸಿದ್ದು, ಈಗಾಗಲೇ 6 ಜನರ ವರದಿ ನೆಗೆಟಿವ್ ಬಂದಿದ್ದು, ಬಾಕಿ 10 ಮಾದರಿಗಳ ವರದಿ ಬರಬೇಕಿದೆ.
ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್‌ಗೆ ಗುರುವಾರ ಮತ್ತೆ ಇಬ್ಬರನ್ನು ಸೇರಿಸಲಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 5 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಅರಕೇರಾ (ಕೆ) ಹಾಸ್ಟೆಲ್‌ನ ಇನ್‌ಸ್ಟಿಟ್ಯೂಶನಲ್ ಕ್ವಾರಂಟೈನ್ ನಲ್ಲಿ 24 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಖಚಿತ ಕೋವಿಡ್ 19 ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ. ವೈರಸ್ ತಡೆಗೆ ಜಿಲ್ಲಾಡಳಿತವು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕಪಡಬಾರದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಮನವಿ ಮಾಡಿದ್ದಾರೆ.
ನಿಜಾಮುದ್ದೀನ್ ಸಭೆಗೆ ಹೋದವರ ಮಾಹಿತಿ ನೀಡಿ: ನಿಜಾಮುದ್ದೀನ್ ತಬ್ಲಿಘಿ ಮಾರ್ಕಾಜ್ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಗೆ ವಾಪಸ್ಸಾಗಿರುವ ಜನರು ಕಂಡುಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆ 08473-253950 ಗೆ ಕರೆ ಮಾಡಿ ಮಾಹಿತಿ ನೀಡಲು ಜಿಲ್ಲಾಡಳಿತ ತಿಳಿಸಿದೆ.
ಹೋಮ್ ಐಸೊಲೇಷನ್‌ನಲ್ಲಿ 60 ಜನ: ಯಾದಗಿರಿ ತಾಲೂಕಿನಲ್ಲಿ 30 ಜನ, ಶಹಾಪುರ ತಾಲೂಕಿನಲ್ಲಿ 19 ಹಾಗೂ ಸುರಪುರ ತಾಲೂಕಿನಲ್ಲಿ 22 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 71 ಜನ ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿದ್ದಾರೆ. ಅವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಿರುವುದಿಲ್ಲ. ಎಲ್ಲರಿಗೂ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಈ 71 ಜನರ ಪೈಕಿ ಒಟ್ಟು 11 ಜನ 28 ದಿನಗಳ ಅವಲೋಕನ ಅವ ಧಿಯನ್ನು ಪೂರ್ಣಗೊಳಿಸಿದ್ದು, ಬಾಕಿ 60 ಜನರನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.