ಪ್ರವಾಹದಿಂದ 17,830 ಹೆ.ಬೆಳೆ ಹಾನಿ

Team Udayavani, Oct 31, 2020, 5:34 PM IST

ಪ್ರವಾಹದಿಂದ 17,830 ಹೆ.ಬೆಳೆ ಹಾನಿ

ಯಾದಗಿರಿ: ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹದಿಂದ ಹಾನಿಯಾದ ರೈತರು, ಅರ್ಹ ಮನೆ ಮಾಲೀಕರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನ್ಯಾಯಯುತ ಜಂಟಿ ಸಮೀಕ್ಷೆ ವರದಿಯನ್ನು ತ್ವರಿತವಾಗಿ ದಾಖಲಿಸಲು ಜಿಲ್ಲಾಧಿಕಾರಿ ಡಾ|ರಾಗಪ್ರಿಯಾ ಸೂಚಿಸಿದರು.

ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅತಿವೃಷ್ಟಿ ಮತ್ತು ಪ್ರವಾಹಕ್ಕೆ ಸಂಬಂಧಿ ಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಂಟಿ ಸಮೀಕ್ಷೆ ಮಾಡಿದ ವರದಿಗಳನ್ನು ಶೀಘ್ರವಾಗಿ ಇನ್ನೊಮ್ಮೆ ಯಾವುದೇ ತಪ್ಪು ಇಲ್ಲದಂತೆ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಒಟ್ಟು 1801 ಮನೆಹಾನಿ ವಿವರವನ್ನು ತಂತ್ರಾಂಶದಲ್ಲಿ ನಮೂದಿಸಲಾಗಿದ್ದು, ಯಾದಗಿರಿ ತಾಲೂಕಿನ 56, ಶಹಾಪುರ 278, ಸುರಪುರ 526,ವಡಗೇರಾ 201 ಹಾಗೂ ಹುಣಸಗಿಯ 672 ಮನೆಹಾನಿಯನ್ನು ತಂತ್ರಾಂಶದಲ್ಲಿ ನಮೂದಿಸಲಾಗಿದೆ ಎಂದು ತಹಶೀಲ್ದಾರರು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಭೀಮಾ ನದಿಯ ಪ್ರವಾಹದಿಂದ ಕೃಷಿ ಇಲಾಖೆಯ ಜಂಟಿ ಸಮೀಕ್ಷೆ ವರದಿ ಪ್ರಕಾರ ಒಟ್ಟು ಬೆಳೆಹಾನಿ 17830.80 ಹೆಕ್ಟೇರ್‌ಗಳಷ್ಟು ಬೆಳೆಹಾನಿಯಾಗಿದ್ದು, ಶಹಾಪುರ ತಾಲೂಕಿನಲ್ಲಿ 6232.60 ಹೆಕ್ಟೇರ್‌ ಹಾನಿಯಾಗಿದ್ದು, ವಡಗೇರಾ 7864.00 ಹೆ, ಯಾದಗಿರಿ 3734.20 ಹೆಕ್ಟೇರ್‌ನಷ್ಟು ಹಾನಿಯಾಗಿದ್ದು, ಸಮೀಕ್ಷೆ ವರದಿಗಳನ್ನು ಮತ್ತೂಮ್ಮೆ ಪರಿಶೀಲಿಸಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್‌. ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಅಕ್ಟೋಬರ್‌ ಸುರಿದ ಮಳೆಯಿಂದಾಗಿ ಕೃಷಿ ಇಲಾಖೆಯ ಜಂಟಿ ಸಮೀಕ್ಷೆ ವರದಿ ಪ್ರಕಾರ ಒಟ್ಟು ಬೆಳೆಹಾನಿ 13287.05 ಹೆಕ್ಟೇರ್‌ಗಳಷ್ಟು ಬೆಳೆಹಾನಿಯಾಗಿದ್ದು, ಇದರಲ್ಲಿ ಶಹಾಪುರತಾಲೂಕಿನಲ್ಲಿ 1517 ಹೆ, ವಡಗೇರಾ 1741ಹೆ, ಸುರಪುರ 716.28 ಹೆ, ಹುಣಸಗಿ 653.93ಹೆ, ಯಾದಗಿರಿ 3705.38 ಹೆ. ಸೇರಿದಂತೆ ಗುರುಮಠಕಲ್‌ ವ್ಯಾಪ್ತಿಯಲ್ಲಿ 4953.46 ಹೆಕ್ಟೇರ್‌ ನಷ್ಟು ಬೆಳೆಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ, ಆಹಾರ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಜಿಪಂ ಪ್ರಭಾರಿ ಯೋಜನಾ ನಿರ್ದೇಶಕರಾದ ಗುರುನಾಥ ಗೌಡಪ್ಪನವರ,ಎಲ್ಲಾ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ತಹಶೀಲ್ದಾರರು, ವಿಪತ್ತು ನಿರ್ವಹಣಾ ಇಲಾಖೆ ಸಿಬ್ಬಂದಿ ಸೇರಿದಂತೆ ಸಂಬಂಧಿ ಸಿದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

4

Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

Shivraj singh chou

Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-yadagiri-3

Yadagiri: ಮೈಲಾಪುರ ಜಾತ್ರೆಯಲ್ಲಿ ಕುರಿ ಮರಿ ಎಸೆತ.!

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

4

Blue City Of Blue Color:ಇದು ಭಾರತದಲ್ಲಿರುವ ಜಗತ್ತಿನ ಏಕೈಕ ನೀಲಿ ನಗರ! ಏನಿದರ ವಿಶೇಷತೆ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.