19032 ಹೊಸ ಮತದಾರರ ನೋಂದಣಿ: ಡಾ| ರಾಗಪ್ರಿಯ
ಕರಡು ಮತದಾರರ ಪಟ್ಟಿ ಕೂಲಂಕಷವಾಗಿ ಪರಿಶೀಲಿಸಿ ಮೃತಪಟ್ಟವರ ಹೆಸರು ತೆಗೆದುಹಾಕಲಾಗಿದೆ.
Team Udayavani, Feb 3, 2021, 5:36 PM IST
ಯಾದಗಿರಿ: ಕಳೆದ ವರ್ಷದ ಅಂತಿಮ ಮತದಾರರ ಪಟ್ಟಿಯಲ್ಲಿ 9,93,745 ಮತದಾರರು ನೋಂದಾಯಿಸಿಕೊಂಡಿದ್ದರೆ ಈ ವರ್ಷದ ಮತದಾರರ ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 10,12,777 ಮತದಾರರಿದ್ದು ಈ ಬಾರಿ 19032 ಮಂದಿ ಮತದಾರರು ತಮ್ಮ ಹೆಸರನ್ನು ಹೊಸದಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು
ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಮತದಾರರ ಅಂತಿಮ ಪಟ್ಟಿಯನ್ನು ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ವಿತರಿಸಿ ಮಾತನಾಡಿದರು. ಕರಡು ಮತದಾರರ ಪಟ್ಟಿ ಕೂಲಂಕಷವಾಗಿ ಪರಿಶೀಲಿಸಿ ಮೃತಪಟ್ಟವರ ಹೆಸರು ತೆಗೆದುಹಾಕಲಾಗಿದೆ. ಪಟ್ಟಿಯಲ್ಲಿ ಲೋಪದೋಷಗಳಿಗೆ ಆಸ್ಪದ ಕೊಡದಂತೆ ತಯಾರಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳ ಸಹಕಾರದಿಂದ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ ಎಂದರು.
ಅಂತಿಮ ಮತದಾರರ ಪಟ್ಟಿಯನ್ನು ((http://ceokarnataka,kar,nic,in) ಹಾಗೂ ಜಿಲ್ಲೆಯ (yadgir.nic.in)ಅಂತರ್ಜಾಲದಲ್ಲಿಯು ಅಪ್‌ಲೋಡ್ ಮಾಡಲಾಗಿದ್ದು, ಸಾರ್ವಜನಿಕರು ತಮ್ಮ ಹೆಸರು ಪರಿಶೀಲಿಸಬಹುದು ಎಂದರು.
ಅಂತಿಮ ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು, ಒಂದು ವೇಳೆ ಅರ್ಹತಾ ದಿನಾಂಕಕ್ಕೆ ಸಂಬಂಧಿಸಿದಂತೆ ಯುವಕರು, ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಸ್ಥಳಾಂತರ ಹೊಂದಿದ್ದಲ್ಲಿ ಅಥವಾ ಮೃತಪಟ್ಟಿದ್ದಲ್ಲಿ, ಹೆಸರು ಪುನರಾವರ್ತನೆಯಾಗಿದ್ದಲ್ಲಿ ಅವರುಗಳ ಹೆಸರು ತೆಗೆದು ಹಾಕಲು ನಮೂನೆ-7ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದ್ದಲ್ಲಿ ನಮೂನೆ-8ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎ ರಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇದು ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ತಿಳಿಸಿದರು. ಈ ವೇ ಳೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.