ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ: ಡಿಸಿ
Team Udayavani, Sep 16, 2020, 6:21 PM IST
ಯಾದಗಿರಿ: ಕೋವಿಡ್-19 ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ಸೆ.21ರಿಂದ 28ರ ವರೆಗೆ ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಪೂರ್ವಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆಗೂ ಮುಂಚೆ ಮತ್ತು ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೊಠಡಿಗಳಿಗೆ ಸ್ಯಾನಿಟೈಜೇಷನ್ ಮಾಡಿಸಬೇಕು, ಪರೀಕ್ಷಾರ್ಥಿಗಳಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದರೆ ಅವರಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಬೇಕು. ಕೋವಿಡ್ ನಿಯಮಾನುಸಾರ ಪರೀಕ್ಷೆ ನಡೆಸುವಂತೆ ತಿಳಿಸಿದರು.
ಜಿಲ್ಲೆಯ 27 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 7,792 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಕೇಂದ್ರದ ಸಂಪೂರ್ಣ ಜವಾಬ್ದಾರಿ ಮುಖ್ಯ ಅಧಿಧೀಕ್ಷಕರಾಗಿನೇಮಕವಾದವರದ್ದಾಗಿದೆ. ಎಸ್‌ಒಪಿ ಮಾರ್ಗಸೂಚಿ ನಿಯಮಗಳಂತೆ ಪರೀಕ್ಷೆ ನಡೆಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ನಿಷೇಧಿತ ಪ್ರದೇಶವಾಗಿರುತ್ತದೆ. ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಪಾಲಕರು ಗುಂಪು ಸೇರದಂತೆ ಪೊಲೀಸ್ ಇಲಾಖೆ ಕ್ರಮ ವಹಿಸಬೇಕು ಎಂದರು. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ ನಿಷೇಧಿ ಸಲಾಗಿದೆ. ವಿಶೇಷ ಜಾಗೃತದಳದ ಸದಸ್ಯರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಈ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸರಡ್ಡಿ, ಸಾರಿಗೆ, ಜಿಲ್ಲಾ ಖಜಾನೆ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಸೇರಿದಂತೆ ಎಲ್ಲ ತಾಲೂಕಿನ ಶಾಲೆಗಳ ಮುಖ್ಯ ಶಿಕ್ಷಕರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.