ಯಾದಗಿರಿ ಜಿಲ್ಲೆಯಲ್ಲಿ ಮೇ.19 ರಿಂದ 21 ರ ವರೆಗೆ ಸಂಪೂರ್ಣ ಲಾಕ್ ಡೌನ್
Team Udayavani, May 16, 2021, 8:41 PM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ೨ನೇ ಅಲೆಯಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ 3 ದಿನ ಸಂಪೂರ್ಣ ಲಾಕ್‌ಡೌನ್ ವಿಧಿಸಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆದೇಶ ಹೊರಡಿಸಿದ್ದಾರೆ.
ಮೇ19ರ ಬೆಳಿಗ್ಗೆ 6 ಗಂಟೆಯಿಂದ 21ರ ಬೆಳಿಗ್ಗೆ 6 ಗಂಟೆಯವರೆಗೆ ಅಗತ್ಯ ವಸ್ತುಗಳಾದ ಹಾಲು, ಆಸ್ಪತ್ರೆ, ಔಷಧಿ ಅಂಗಡಿ ಹಾಗೂ ಅಂಬ್ಯುಲೆನ್ಸ್, ಪೆಟ್ರೋಲ್ ಪಂಪ್ ಸೇರಿ ಇತರೆ ತುರ್ತು ಸೇವೆಗಳನ್ನು ಹೊರತು ಪಡಿಸಿ ಎಲ್ಲಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.
ಈ ವೇಳೆಯಲ್ಲಿ ತರಕಾರಿ ಮತ್ತು ಕಿರಾಣಿ ಅಂಗಡಿಗಳು ಸಹ ಬಂದ್ ಆಗಿರಲಿದೆ. ಹೋಟೆಲ್‌ಗಳಲ್ಲಿ ನೀಡುತ್ತಿದ್ದ ಪಾರ್ಸಲ್‌ಗೂ ಅವಕಾಶವಿರಲ್ಲ. ದಿನಪತ್ರಿಕೆ, ಎಟಿಎಂ ಎಂದಿನಂತೆ ಇರಲಿದೆ. ಎಲ್ಲಾ ರೀತಿಯ ಸರಕು ಸಾಗಣೆ ಮತ್ತು ಖಾಲಿ ವಾಹನಗಳಿಗೆ ಅನುಮತಿ, ಆಸ್ಪತ್ರೆಗೆ ಹೋಗುವವರು ಚೆಕ್ ಪೋಸ್ಟ್ಗಳಲ್ಲಿ ವೈದ್ಯಕೀಯ ದಾಖಲೆ ತೋರಿಸುವುದು, ಅಂತ್ಯ ಸಂಸ್ಕಾರಕ್ಕೆ ಕೇವಲ 5 ಜನರಿಗೆ ಅವಕಾಶ, ಮದುವೆ ಸಮಾರಂಭಕ್ಕೆ ತಹಸೀಲ್ದಾರರಿಂದ ಅನುಮತಿ ಪಡೆದು 10 ಜನರು ಮಾತ್ರ ಮನೆಯ ಒಳಗಡೆ ನಡೆಸಬಹುದು ಹಾಗೂ ಆಸ್ಪತ್ರೆಗಳ ಒಳ ಹಾಗೂ ಹೊರ ರೋಗಿಗಳ ಉಪಹಾರ/ಊಟದ ವ್ಯವಸ್ಥೆ ಕಲ್ಪಿಸುವುದು ಸಂಬಂಧಪಟ್ಟ ಆಸ್ಪತ್ರೆಗಳ ಜವಾಬ್ದಾರಿಯಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.