ಹತ್ತಿ ಬಿಡಿಸಲು ಹೊರಟಿದ್ದ 7 ಮಕ್ಕಳು ಮರಳಿ ಶಾಲೆಗೆ
Team Udayavani, Dec 21, 2019, 1:36 PM IST
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕು ದೇವಾಪುರ ಮತ್ತು ಇತರೆ ಗ್ರಾಮಗಳಲ್ಲಿ ಶುಕ್ರವಾರ ವಿವಿಧ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಹತ್ತಿ ಬಿಡಿಸಲು ಹೊರಟಿದ್ದ 6ರಿಂದ 18 ವರ್ಷದೊಳಗಿನ 7 ಮಕ್ಕಳ ವರದಿ ಪಡೆದು ಶಾಲೆಗೆ ದಾಖಲಿಸಿದ್ದಾರೆ.
ಬಾಲ ಕಾರ್ಮಿಕ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿದರು. ದಾಳಿ ವೇಳೆ ಪತ್ತೆಯಾದ 7 ಮಕ್ಕಳಲ್ಲಿ 9ನೇ ತರಗತಿಯ 2 ಬಾಲಕಿಯರನ್ನು ದೇವಾಪುರ ಪ್ರೌಢಶಾಲೆಗೆ, ಓರ್ವ ಬಾಲಕ ಮತ್ತು ಇಬ್ಬರು ಬಾಲಕಿಯರನ್ನು ಆಲ್ದಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಹಾಗೂ ಇಬ್ಬರು ಬಾಲಕಿಯರನ್ನು ಸುರಪುರ ತಾಲೂಕಿನ ಪ್ರಿಯದರ್ಶಿನಿ ಅನುದಾನಿತ ಎಚ್‌ಎಸ್ ಶಾಲೆಗೆ ದಾಖಲಿಸಿದ್ದಾರೆ.
ದಾಳಿ ವೇಳೆ ಟಂಟಂ ಮತ್ತು ಜೀಪ್‌ಗ್ಳಲ್ಲಿ ಜನರನ್ನು ಕರೆದುಕೊಂಡು ಹೋಗುತ್ತಿರುವುದು ಕಂಡು ಬಂತು. ವಾಹನಗಳನ್ನು ತಡೆಹಿಡಿದು ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳ ತಂಡ ವಾಹನ ಚಾಲಕರ ಮತ್ತು ಮಕ್ಕಳ ಮಾಹಿತಿ ಪಡೆಯಿತು. ಪೊಲೀಸರು ಒಟ್ಟು 4 ವಾಹನಗಳನ್ನು ಜಪ್ತಿ ಮಾಡಿ ಪ್ರತಿಯೊಂದಕ್ಕೂ ದಂಡ ವಿಧಿಸಿದ್ದಾರೆ.
ಜತೆಗೆ 1988ರ ಮೋಟಾರು ವಾಹನ ಕಾಯ್ದೆಯಡಿ ಸಂಬಂಧಿಸಿದ ವಾಹನ ಚಾಲಕರ ಚಾಲನೆ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಂಡಿದ್ದಾರೆ. ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾನಿರ್ದೇಶಕ ರಘುವೀರಸಿಂಗ್ ಠಾಕೂರ್, ಉಪ ತಹಶೀಲ್ದಾರ್ ರೇವಪ್ಪ ತೆಗ್ಗಿನಮನಿ, ಕಂದಾಯ ನಿರೀಕ್ಷಕ ವಿಠಲ ಬನ್ಸಾಲ್, ಗುರುಬಸಯ್ಯ, ಗ್ರಾಮ ಲೆಕ್ಕಿಗರಾದ ಪ್ರತಾಪ, ಬಸವರಾಜ ಶೆಟ್ಟಿ, ಅಂಗನವಾಡಿ ಮೇಲ್ವಿಚಾರಕಿ ಸರೋಜಿನಿ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.