ಆರಂಭವಾಗದ ಶುದ್ಧ ಕುಡಿಯುವ ನೀರಿನ ಘಟಕ
Team Udayavani, Aug 9, 2017, 5:31 PM IST
ಯಾದಗಿರಿ: ತಾಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭವಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಫ್ಲೋರೈಡ್‌ಯುಕ್ತ ನೀರೇ ಗತಿಯಾಗಿದೆ. ಹೆಡಗಿಮದ್ರಾ ಗ್ರಾಮದಲ್ಲಿ ಸುಮಾರು ಐದುನೂರು ಮನೆಗಳಿದ್ದು, 2,500 ಜನಸಂಖ್ಯೆ ಇದೆ. ಠಾಣಾಗುಂದಿ ಗ್ರಾಪಂ ವ್ಯಾಪ್ತಿಗೆ ಗ್ರಾಮ ಒಳಪಟ್ಟಿದ್ದು, ಆರು ಗ್ರಾಪಂ ಸದಸ್ಯತ್ವ ಸ್ಥಾನ ಹೊಂದಿದೆ ಆದರೂ ಶುದ್ಧ ಕುಡಿಯುವ ನೀರು ಒದಗಿಸಲು ಸಾಧ್ಯವಾಗಿಲ್ಲ. ಗ್ರಾಮದಲ್ಲಿ ಎಲ್ಲಿ ಬಾವಿ, ಕೊಳವೆಬಾವಿ ಕೊರೆದರೂ ಫ್ಲೋರೈಡ್ ಯುಕ್ತ ಮತ್ತು ಉಪ್ಪಿನ ಅಂಶ ಹೊಂದಿರುವ ನೀರು ಲಭ್ಯವಾಗುತ್ತಿದೆ. ಕಳೆದ 15 ವರ್ಷಗಳ ಹಿಂದೆಯೇ ಗಣಿ ಮತ್ತು ಭೂ ವಿಜ್ಞಾನಿ ಇಲಾಖೆ ಅ ಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನೀರು ಪರಿಶೀಲಿಸಿ ಉಪ್ಪಿನ ಅಂಶ ಮತ್ತು ಫ್ಲೋರೈಡ್ ಯುಕ್ತ ಹೇರಳವಾಗಿದ್ದು, ಈ ನೀರು ಅಡುಗೆ ಮಾಡಲು ಮತ್ತು ಕುಡಿಯಲು
ಯೋಗ್ಯವಾಗಿಲ್ಲ ಎಂದು ಜಿಪಂಗೆ ವರದಿ ಸಲ್ಲಿಸಿತ್ತು. ವರದಿ ಆಧಾರದ ಮೇಲೆ ಜಿಪಂ ಗ್ರಾಮದಲ್ಲಿ ಶುದ್ಧ ನೀರಿನ ಘಟಕ ಸ್ಥಾಪನೆ
ಮಾಡಿತ್ತು. ಆದರೆ, ಸಮರ್ಪಕ ನಿರ್ವಹಣೆ ಇಲ್ಲದೆ ಮಶೀನ್ ತುಕ್ಕು ಹಿಡಿದು ಹಾಳಾದ ಪರಿಣಾಮ ಪುನಃ ಗ್ರಾಮಸ್ಥರಿಗೆ ವಿಷಯುಕ್ತ ನೀರೇ ಗತಿಯಾಗಿದೆ. ಗ್ರಾಮಸ್ಥರ ಒತ್ತಾಯದ ಮೇರೆಗೆ ಈಗ ಮತ್ತೆ ಹೊಸ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಲು ಗ್ರಾಮೀಣ ನೀರು
ಸರಬರಾಜು ಇಲಾಖೆ 10 ಲಕ್ಷ ರೂ. ವೆಚ್ಚದಲ್ಲಿ ಮುಂದಾಗಿದ್ದು, ಈಗಾಗಲೇ ಶುದ್ಧ ಕುಡಿಯುವ ನೀರಿನ ಕ್ಯಾಬಿನ್ ರೆಡಿಯಾಗಿದೆ. ಆದರೆ ಇನ್ನೂ ಯಂತ್ರ ಅಳವಡಿಸಿಲ್ಲ. ಆದ್ದರಿಂದ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಗಗನ ಕುಸಮವಾಗಿದೆ. ಸಂಬಂಧಿಸಿದ ಅಧಿ ಕಾರಿಗಳು ಎಚ್ಚೆತ್ತುಕೊಂಡು ಆದಷ್ಟು ಬೇಗ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕಿದೆ.
ರಾಜೇಶ ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.