ಉತ್ತಮ ಸಂಸ್ಕಾರ ನೀಡುವ ಶಿಕ್ಷಕ ಅರಿವಿನ ಸಂಕೇತ
Team Udayavani, Sep 9, 2017, 5:44 PM IST
ಶಹಾಪುರ: ವಿದ್ಯಾರ್ಥಿಗಳ ಆಲೋಚನಾಕ್ರಮ, ಸಾರ್ವಜನಿಕ ನಡವಳಿಕೆ, ಸಂಸ್ಕೃತಿ, ಸಂಸ್ಕಾರಗಳನ್ನು ಕಲಿಸುವ, ಜ್ಞಾನವನ್ನು ನೀಡುವುದರ ಮೂಲಕ ಉತ್ತಮ ಬದುಕನ್ನು ರೂಪಿಸುವ ಶಿಕ್ಷಕ ಅರಿವಿನ ಸಂಕೇತವಾಗಿದ್ದಾರೆ ಎಂದು ಸಾಯಿ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರೇಖು ಚವ್ಹಾಣ ಹೇಳಿದರು.
ನಗರದ ಬಾಪುಗೌಡ ದರ್ಶನಾಪೂರ ಸ್ಮಾರಕ ಮಹಿಳಾ ಪದವಿ ಕಾಲೇಜಿನಲ್ಲಿ ಶಿಕ್ಷಕರ ದಿನ ನಿಮಿತ್ತ ಹಮ್ಮಿಕೊಂಡ ಗುರು ವಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ, ಶಿಕ್ಷಕ ವಿದ್ಯಾರ್ಥಿಗಳ ನಡುವಿನ ಅವಿನಾಭಾವ ಸಂಬಂಧ ದೇಶದ ಉನ್ನತಿಗೆ, ವಿದ್ಯಾರ್ಥಿಗಳ ಭವಿಷ್ಯದ ನಿರ್ಮಾಣಕ್ಕೆ ನಾಂದಿ ಆಗುತ್ತದೆ. ಆದ್ದರಿಂದ ಶಿಕ್ಷಕ, ಶಿಕ್ಷಣ, ವಿದ್ಯಾರ್ಥಿ ಈ ಮೂರು ಕೋನಗಳ ಸಮತೋಲನ ಸುಧಾರಣೆ ಅಗತ್ಯವಾಗಿದೆ ಎಂದರು.
ಗುರು ವಂದನಾ ನುಡಿಗಳನ್ನಾಡಿದ ವಿದ್ಯಾರ್ಥಿನಿ ಪ್ರತಿಭಾ ಮದ್ರಿಕಿ, ಒಂದು ದೇಶದ ಹಣೆ ಬರಹವನ್ನು ಬರೆಯುವುದರಲ್ಲಿ ಶಿಕ್ಷಕ ಮಹತ್ವದ ಪಾತ್ರ ವಹಿಸುತ್ತಾರೆ. ಸಮಾಜದ ಎಲ್ಲಾ ವ್ಯವಸ್ಥೆಗಳು ಶಿಕ್ಷಣದ ಬುನಾದಿಯನ್ನೇ ಆಧರಿಸಿವೆ. ಅಂತಹ ಮಹತ್ವದ ಶಿಕ್ಷಣ ನೀಡುವುವರು ಶಿಕ್ಷಕರೇ ಆಗಿರುವುದರಿಂದ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಚರಬಸವೇಶ್ವರ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ನಾನಾಗೌಡ ಬಿರಾದಾರ ಅವರಿಗೆ ಸನ್ಮಾನಿಸಲಾಯಿತು. ಪ್ರಾಚಾರ್ಯ ಶಿವಲಿಂಗಣ್ಣ ಸಾಹು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಉಪನ್ಯಾಸಕ ಸೈಯದ್ ಚಾಂದಪಾಶ, ಸಿ.ಬಿ. ಪ್ರೌಢಶಾಲೆಯ ಮುಖ್ಯಗುರು ಮತ್ತು ಕಾಲೇಜಿನ ಎಲ್ಲಾ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.