ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಗೆ ಬೆಳಂಬೆಳಗ್ಗೆ ಎಸಿಬಿ ಶಾಕ್..!
Team Udayavani, Mar 9, 2021, 8:54 AM IST
ಯಾದಗಿರಿ: ನಗರದ ಸಹರಾ ಕಾಲೋನಿಯಲ್ಲಿರುವ ಪತ್ತಾರ್ ನಿವಾಸದ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯ ಮೀರಿ ಆಸ್ತಿ ಹೊಂದಿದ್ದ ದೂರು ಹಿನ್ನೆಲೆಯಲ್ಲಿ ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಮನೆ ಮೇಲೆ ಎಸ್ ಪಿ ಮಹೇಶ್ ಮೇಗಣ್ಣನವರ್ ಹಾಗೂ ಡಿವೈಎಸ್ಪಿ ಉಮಾಶಂಕರ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ಬೆಳಿಗ್ಗೆ 6:30 ರ ಸುಮಾರಿಗೆ ದಾಳಿ ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಬ್ರಿಟನ್ ರಾಜಮನೆತನದ ಅಸಲಿ ಮುಖ ಬಿಚ್ಚಿಟ್ಟ ಪ್ರಿನ್ಸ್ ಹ್ಯಾರಿ ಮತ್ತು ಮೆಘನ್ ಮಾರ್ಕೆಲ್
ಕಳೆದ 20 ವರ್ಷದಿಂದ ಅಧಿಕಾರಿ ರಾಜು ಪತ್ತಾರ್ ಯಾದಗಿರಿ ಜೆಸ್ಕಾಂ ಕಚೇರಿಯಲ್ಲಿ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.
ನಗದು ಹಣ, ಚಿನ್ನಾಭರಣ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಮನೆಯಲ್ಲಿ ಇರುವ ಅಧಿಕಾರಿ ಪತ್ತಾರ ಕುಟುಂಬದವರೊಂದಿಗೆ ಮನೆಯಲ್ಲಿಯೇ ಇದ್ದಾರೆ.
ಪಿಐ ಗುರುಪಾದ ಬಿರಾದಾರ, ಶರಣಬಸವ, ಬಾಬಾ ಸಾಹೇಬ ಪಾಟೀಲ್ ಹಾಗೂ ಸಿಬ್ಬಂದಿ ವಿಜಯ್ ಕುಮಾರ್, ಗುತ್ತಪ್ಪಗೌಡ, ಅಮರ್ ನಾಥ್, ಮಲ್ಲಪ್ಪ, ಪ್ರಕಾಶ್ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಯಲ್ಲಾಪುರ : ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ನಾಲ್ವರ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.