ಆಕಸ್ಮಿಕ ಬೆಂಕಿ: ಹಳೆ ಹುಣಸೆ ಮರ ಹಾನಿ


Team Udayavani, Apr 30, 2019, 4:58 PM IST

yad-2

ಶಹಾಪುರ: ನಗರದ ರಾಮಗಿರಿ ಮಠದ ಆವರಣದಲ್ಲಿರುವ ಪುರಾತನ ಹುಣಸೆ ಮರಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಸೋಮವಾರ ನಡೆದಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ರವಿವಾರ ರಾತ್ರಿಯೇ ಮರಕ್ಕೆ ಬೆಂಕಿ ತಗುಲಿದ್ದು, ಅವಾಗಲೇ ಅಲ್ಲಿನ ನಿವಾಸಿಗಳು ಜೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ವಿದ್ಯುತ್‌ ತಂತಿಗಳ ಮೇಲೆ ಮರ ಬಿದ್ದಿದ್ದರಿಂದ ಕಂಬ ಬೆಂಡಾಗಿದೆ. ಅಲ್ಲದೆ ತಂತಿಗಳು ಕೆಳಗೆ ಜೋತು ಬಿದ್ದಿವೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಜೆಸ್ಕಾಂ ಸಿಬ್ಬಂದಿ

ರವಿವಾರ ರಾತ್ರಿಯಿಂದ ಸೋಮವಾರ ಸಂಜೆವರೆಗೂ ಕರ್ತವ್ಯದಲ್ಲಿ ನಿರತರಾಗಿದ್ದ ಜೆಸ್ಕಾಂ ಸಿಬ್ಬಂದಿ ಸಮರ್ಪಕ ಪರಿಹಾರ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 200 ವರ್ಷದ ಹಳೇ ಹುಣಸೆ ಮರಗಳು ಇಲ್ಲಿನ ರಾಮಗಿರಿ ಮಠದ ಆವರಣದಲ್ಲಿವೆ. ಪ್ರತಿ ವರ್ಷ ಸಾಕಷ್ಟು ಹುಣಸೆ ಹಣ್ಣು ಒದಗಿಸುತ್ತಿದ್ದವು ಎನ್ನಲಾಗಿದೆ. ಆವರಣದಲ್ಲಿ ಹತ್ತಾರು ಹುಣಸೆ ಮರಗಳಿದ್ದು, ಅದರಲ್ಲಿರುವ ದೊಡ್ಡ ಮರವೊಂದು ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಉಳಿದ ಮರಗಳಿಗೂ ಬಿಸಿ ತಟ್ಟಿದೆ.

ಅಷ್ಟರಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿರುವ ಕಾರಣ ಉಳಿದ ಮರಗಳ ಜೀವ ಬದುಕಿಕೊಂಡಿದೆ. ಬೆಂಕಿಗೆ ಆಹುತಿಯಾದ ದೊಡ್ಡ ಹುಣಸೆ ಮರ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್‌ ಸರಬರಾಜಿಗೆ ತೊಂದರೆಯಾಗಿತ್ತು ಎನ್ನಲಾಗಿದೆ. ಶ್ರೀಮಠದ ಪಕ್ಕದ ಜಮೀನಿನಲ್ಲಿ ಕಸಕಡ್ಡಿ ಜಮಾಯಿಸಿ ಮಠದ ಹತ್ತಿರವೇ ಒಡ್ಡಿನಲ್ಲಿ ಬೆಂಕಿ ಹಚ್ಚಲಾಗಿದೆ. ಅದೇ ಬೆಂಕಿ ಗಾಳಿ ರಬಸಕ್ಕೆ ಹುಣಸೆ ಮರಕ್ಕೆ ಹೊತ್ತಿಕೊಂಡಿದೆ ಎನ್ನಲಾಗಿದೆ. ಜೆಸ್ಕಾಂ ಶಾಖಾ ಅಧಿಕಾರಿ ಎಕ್ಬಾಲ್, ಲೈನ್‌ಮನ್‌ಗಳಾದ ನಾರಾಯಣ, ರಾಮದಾಸ, ರಾಮನಗೌಡ, ಶಬ್ಬೀರ್‌ ಮತ್ತು ಮೆಕಾನಿಕ್‌ ಶಿವಲಿಂಗ, ಇಮಾಂ ಘಟನಾ ಸ್ಥಳದಲ್ಲಿ ಬಿದ್ದಿರುವ ಮರದ ಟೊಂಗೆ ಕತ್ತರಿಸಿ ವಿದ್ಯುತ್‌ ವೈರ್‌ ಬೇರ್ಪಡಿಸಿ ಬಾಗಿದ ವಿದ್ಯುತ್‌ ಕಂಬಗಳನ್ನು ಸರಿಪಡಿಸಿ ಸಮರ್ಪಕವಾಗಿ ವಿದ್ಯುತ್‌ ಸರಬರಾಜು ವ್ಯವಸ್ಥೆ ಕಲ್ಪಿಸಿದರು.

ಟಾಪ್ ನ್ಯೂಸ್

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಟ್ರಾಫಿಕ್ ಮೇಲೆ ಪರಿಣಾಮ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಟ್ರಾಫಿಕ್ ಮೇಲೆ ಪರಿಣಾಮ

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.