ಹೆಚ್ಚಿನ ದರ ವಸೂಲಿ ಮಾಡಿದರೆ ಕ್ರಮ
Team Udayavani, Apr 18, 2021, 8:25 PM IST
ಯಾದಗಿರಿ : ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿ ಅನಿರ್ದಿಷ್ಟಾವಧಿವ ರೆಗೆ ಮುಷ್ಕರ ಹಮ್ಮಿಕೊಂಡ ಹಿನ್ನೆಲೆ ಪ್ರಯಾಣಿಕರಿಗೆ ಉಂಟಾಗುವ ತೊಂದರೆ ತಪ್ಪಿಸಲು ಸಾರ್ವಜನಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರಿಂದ ಖಾಸಗಿ ವಾಹನಗಳು ಹೆಚ್ಚಿನ ದರ ವಸೂಲಿ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ದಾಮೋದರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮ್ಯಾಕ್ಸಿ ಕ್ಯಾಬ್, ಕಾಂಟ್ರ್ಯಾಕ್ಟ್ ಕ್ಯಾರೇಜ್ ಬಸ್, ಶಾಲಾ ಬಸ್ ಮತ್ತು ಪಿಎಸ್ವಿ ಬಸ್ಗಳು ಪ್ರಯಾಣಿಕರಿಂದ ನಿಗದಿತ ಪ್ರಯಾಣ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದಾರೆಂದು ಸಾರ್ವಜನಿಕರು ದೂರುತ್ತಿದ್ದಾರೆ.
ಯಾವುದಾದರೂ ಪ್ರಯಾಣಿಕ ವಾಹನವು ನಿಗದಿತ ಪ್ರಯಾಣ ದರಕ್ಕಿಂತ ಹೆಚ್ಚಿನ ಪ್ರಯಾಣ ದರ ವಸೂಲಿ ಮಾಡಿದ್ದನ್ನು ವಾಹನ ಸಂಖ್ಯೆಯ ಸಮೇತ ಪ್ರಾದೇಶಿಕ ಸಾರಿಗೆ ಅಧಿ ಕಾರಿ ಕಚೇರಿಗೆ ದೂರು ನೀಡಿದ್ದಲ್ಲಿ ವಾಹನ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಯಾವುದೇ ಕಾರಣಕ್ಕೂ ದುಪ್ಪಟ್ಟು ದರ ವಸೂಲಿ ಮಾಡದಂತೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.