ಮನೆ ಕಾಮಗಾರಿ ವೀಕ್ಷಿಸಿದ ದರ್ಶನಾಪುರ
Team Udayavani, Sep 6, 2020, 4:54 PM IST
ಶಹಾಪುರ: ನಗರದ ಹೊರವಲಯದಲ್ಲಿ ಕೊಳಚೆ ನಿರ್ಮೂಲನೆ ಮಂಡಳಿ ಆಶ್ರಯದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ 200 ಮನೆಗಳ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಈಗಾಗಲೇ 150 ಮನೆ ಸಿದ್ಧಗೊಂಡಿವೆ. ತ್ವರಿತವಾಗಿ ಕಾಮಗಾರಿ ಮುಗಿಸುವಂತೆಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ಹೇಳಿದರು.
ನಗರದ ಹೊರವಲಯದಲ್ಲಿ ನಿರ್ಮಿಸುತ್ತಿರುವ ಮನೆಗಳ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ಜಿ ಪ್ಲಸ್-2 ಅಡಿಯಲ್ಲಿ ಮನೆಸಿದ್ಧಗೊಂಡಿವೆ. ಪ್ರತಿ ಮನೆ ನಿರ್ಮಾಣಕ್ಕೆ 4.90 ಲಕ್ಷ ರೂ. ವೆಚ್ಚ ತಗುಲಿದೆ. 3.20 ಗುಂಟೆ ಜಮೀನು ವಶಪಡಿಸಿಕೊಂಡು ಉತ್ತಮ ಮನೆ ನಿರ್ಮಿಸಲಾಗುತ್ತಿದೆ. ನಿರೀಕ್ಷೆಯಂತೆ ಕಾಮಗಾರಿ ಮುಗಿದಲ್ಲಿ ಜನವರಿಯಲ್ಲಿ ಫಲಾನುಭವಿಗಳಿಗೆಮನೆ ಹಂಚಿಕೆ ಮಾಡಲಾಗುವುದು. ಈಗಾಗಲೇ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಅನುಮೋದನೆಗೆ ಸಲ್ಲಿಸಲಾಗಿದೆ ಎಂದರು.
138 ಮನೆ: ಇನ್ನೂ 138 ಮನೆ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಕೊಳಚೆ ನಿರ್ಮೂಲನಾ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲದೆ ಇನ್ನೂ ಒಂದು ಸಾವಿರ ಮನೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ವಸತಿ ಸಚಿವ ವಿ.ಸೊಮಣ್ಣ ಅವರಿಗೆ ಮನವಿ ಸಲ್ಲಿಸಿರುವೆ. ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಅನುಮೋದನೆ ದೊರೆತರೆ ಬಡ ಜನತೆಗೆ ಸೂರಿನ ಭಾಗ್ಯ ಲಭಿಸಲಿದೆ ಎಂದರು. ಎಂಜಿನೀಯರ್ ಹೊನ್ನೇಶ ಯಾಳಗಿ, ಅಮರನಾಥ, ಸಯ್ಯದ್ ಮನನ್ ಇದ್ದರು.
ಬಿಜೆಪಿ ಸರ್ಕಾರದಿಂದ ತಾರತಮ್ಯ ನೀತಿ: ಬಿಜೆಪಿ ಅಧಿಕಾರ ವಹಿಸಿಕೊಂಡು ವರ್ಷವಾದರೂ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗೆ ನಯಾ ಪೈಸೆ ಅನುದಾನ ನೀಡಿಲ್ಲ. ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ನೀರಾವರಿ ಹೀಗೆ ಹಲವಾರು ಪ್ರಮುಖ ಇಲಾಖೆಗೆ ಅನುದಾನ ಬಂದಿಲ್ಲ ಎಂದು ಶಾಸಕ ದರ್ಶನಾಪುರ ಆರೋಪಿಸಿದರು. ಆದರೆ ಬಿಜೆಪಿ ಶಾಸಕರು ಇರುವ ಸುರಪುರ ಮತ್ತು ದೇವದುರ್ಗ ಕ್ಷೇತ್ರಗಳಿಗೆ 100 ಕೋಟಿ ರೂ. ಅನುದಾನ ನೀಡಿದ್ದು, ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಅನುದಾನ ಕಲ್ಪಿಸದೆ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದರು.
ರಾಜ್ಯದ ಎಲ್ಲ ತಾಲೂಕು ಕ್ಷೇತ್ರಗಳು ಅಭಿವೃದ್ಧಿ ಹೊಂದಿದರೆ ಮಾತ್ರ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಿದೆ ಎಂದು ತಿಳಿಸಿದರು. ಕ್ಷೇತ್ರದಪೀರಾಪುರ-ಬೂದಿಹಾಳ ಏತ ನೀರಾವರಿ 600 ಕೋಟಿ ವೆಚ್ಚದ ಯೋಜನೆ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರೈತರ ಹಿತದೃಷ್ಟಿಯಿಂದ ಮಂಜೂರಾತಿ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.