ರಾಜ್ಯ ಸರ್ಕಾರ ಅನುದಾನ ಸದ್ಬಳಕೆಯಾಗಲು ಸಲಹೆ
Team Udayavani, Feb 1, 2022, 3:11 PM IST
ಕೆಂಭಾವಿ: ಮೂಲ ಸೌಲಭ್ಯಕ್ಕಾಗಿ ಮೀಸಲಿರುವ ಅನುದಾನ ಸದ್ಬಳಕೆಯಾದಾಗ ಮಾತ್ರ ಜನತೆಗೆ ನೆಮ್ಮದಿ ಸಿಗುತ್ತದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ನಾಗನೂರ ಗ್ರಾಮದಲ್ಲಿ ಜಲಜೀವನ ಮಷಿನ್ ಯೋಜನೆಯಡಿ ನಡೆಯುತ್ತಿರುವ ಬೃಹತ್ ಕುಡಿಯುವ ನೀರಿನ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ನಾಗನೂರ ಗ್ರಾಮದಲ್ಲಿ ಜೆಜೆಎಂ ಯೋಜನೆಯಡಿ ಬೃಹತ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರೊದಗಿಸಲು ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಎರಡು ಬೃಹತ್ ಕುಡಿಯುವ ನೀರಿನ ಟ್ಯಾಂಕ್, ಎರಡು ತೆರೆದ ಬಾವಿಗಳು ನಿರ್ಮಾಣವಾಗುತ್ತಿದ್ದು ಇದರಿಂದ ಸುಮಾರು 723 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದೆ. ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಕುಡಿಯುವ ನೀರಿನ ಕೊರತೆ ನೀಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಜನತೆ ಅಧಿಕಾರಿಗಳಿಗೆ ಸಹಕಾರ ನೀಡಿ ಗ್ರಾಮದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಗೌಡ ಹುಲಕಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಚಿಂಚೋಳಿ, ಮುಖಂಡರಾದ ಶಿವಮಹಾಂತ ಚಂದಾಪೂರ, ಬಸನಗೌಡ ಹೊಸಮನಿ ಯಾಳಗಿ, ಅಶೋಕ ಗೂಗಲ್, ಶಿವರಾಜ ಬೂದೂರ, ವಿನಯರೆಡ್ಡಿ ಗೂಗಲ್, ಹಳ್ಳೆಪ್ಪ ಹವಾಲ್ದಾರ್, ಚನ್ನಾರೆಡ್ಡಿ ದೇಸಾಯಿ, ರುದ್ರಗೌಡ ವಣಕ್ಯಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.