ಜಾನುವಾರುಗಳಿಗೆ ಲಸಿಕೆ ಹಾಕಿಸಲು ಸಲಹೆ
Team Udayavani, Jan 29, 2019, 11:18 AM IST
ಯಾದಗಿರಿ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದಲ್ಲಿರುವ ರೈತರು ತಮ್ಮ ಜಾನುವಾರುಗಳಿಗೆ ಸಂರಕ್ಷಣೆ ದೃಷ್ಟಿಯಿಂದ ತಪ್ಪದೇ ಕಾಲುಬಾಯಿ ರೋಗದ ವಿರುದ್ಧ ಲಸಿಕೆ ಹಾಕಿಸಿ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ ಹೇಳಿದರು.
ಸೋಮವಾರ ಪಶು ಆಸ್ಪತ್ರೆ ಆವರಣದಲ್ಲಿ ಇಲಾಖೆ ಹಮ್ಮಿಕೊಂಡಿದ್ದ 15ನೇ ಸುತ್ತಿನ ಕಾಲುಬಾಯಿ ಜ್ವರದ ವಿರುದ್ಧ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಸಕ್ತ ದಿನಗಳಲ್ಲಿ ಬರಗಾಲ ಉದ್ಗವಿಸಿದೆ. ಇಂತಹ ಸಂದರ್ಭದಲ್ಲಿ ರೈತರ ಜೀವನಾಡಿಯಾಗಿರುವ ಜಾನುವಾರುಗಳ ಆರೋಗ್ಯ ಕಾಪಾಡುವುದು ಎಲ್ಲರ ಕರ್ತವ್ಯ. ಈ ದಿಸೆಯಲ್ಲಿ ಇಲಾಖೆ ಮಹತ್ವದ ಅಭಿಯಾನ ಹಮ್ಮಿಕೊಂಡಿದೆ. ರೈತರು ಅದರ ಲಾಭ ಪಡೆಯಬೇಕೆಂದು ಸಲಹೆ ನೀಡಿದರು.
ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ| ಶರಣಭೂಪಾಲರಡ್ಡಿ ನಾಯ್ಕಲ್ ಮಾತನಾಡಿ, ಜಿಲ್ಲೆಯಲ್ಲಿ ಕಾಲುಬಾಯಿ ರೋಗದ ವಿರುದ್ಧ ಲಸಿಕೆ ಹಾಕಲು ಒಟ್ಟು 30 ಪಶುವೈದ್ಯರ ಹಾಗೂ ಲಸಿಕೆ ಹಾಕುವವರ ತಂಡ ರಚಿಸಲಾಗಿದೆ. ಅವರು ರೈತರ ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕುತ್ತಾರೆ ಎಂದು ತಿಳಿಸಿದರು.
ಡಾ| ವಿವೇಕ್, ಡಾ| ಸುಶ್ರೂತ್, ಡಾ| ಗೀತಾ, ಡಾ| ಜಯಶ್ರೀ, ಡಾ| ಶಿವಮಂಗಲ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.