ಸ್ವಾಗತ ಕಮಾನಿಗೆ ಎನ್‌ಆರ್‌ವಿ ನಾಯಕ ಹೆಸರಿಡಲು ಒಪ್ಪಿಗೆ
Team Udayavani, Aug 9, 2022, 5:18 PM IST
ಸುರಪುರ: ನಗರಸಭೆ ನಿರ್ಮಿಸುತ್ತಿರುವ ಮೂರು ಸ್ವಾಗತ ಕಮಾನುಗಳಿಗೆ ಇಲ್ಲಿಯ ಅರಸ ವೀರ ಸೇನಾನಿ ರಾಜಾ ನಾಲ್ವಡಿ ವೆಂಕಟಪ್ಪನಾಯಕ ಅವರ ಹೆಸರಿಡಲು ನಗರಸಭೆ ಸದಸ್ಯರು ಸರ್ವಾನುಮತದಿಂದ ಅನುಮೋದನೆ ನೀಡಿದರು.
ನಗರಸಭೆ ಸಭಾಂಗಣದಲ್ಲಿ ಸೋಮವಾರ ಸುಜಾತಾ ಜೇವರ್ಗಿ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು ಪೌರಾಯಕ್ತ ಜೀವನಕುಮಾರ ಕಟ್ಟಿಮನಿ ಮಾತನಾಡಿ, 2017-18ನೇ ಸಾಲಿನ ಎಸ್‌ಎಫ್‌ಸಿ ಯೋಜನೆಯಡಿ ನಗರದ ಮೂರು ಹೆದ್ದಾರಿಗಳಲ್ಲಿ ಸ್ವಾಗತ ಕಮಾನ ನಾಮಫಲಕಕ್ಕೆ ಮೂರ್‍ನಾಲ್ಕು ಹೆಸರುಗಳು ಪ್ರಸ್ತಾಪವಾಗಿವೆ. ಸದಸ್ಯರು ಈ ಕುರಿತು ಅಂತಿಮ ಹೆಸರು ತೀರ್ಮಾನಿಸುವಂತೆ ಹೇಳಿದರು.
ಹಿರಿಯ ಸದಸ್ಯ ವೇಣುಮಾಧವನಾಯಕ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸುರಪುರ ಸಂಸ್ಥಾನದ ಅರಸು ನಾಲ್ವಡಿ ರಾಜಾ ವೆಂಕಟಪ್ಪನಾಯಕ ಅವರ ಹೋರಾಟ ಅವಿಸ್ಮರಣೀಯವಾಗಿದೆ. ಅವರ ಕೊಡುಗೆಯನ್ನು ಜನಮಾನಸಕ್ಕೆ ತಿಳಿಸಬೇಕಾಗಿದೆ. ಆ ನಿಟ್ಟಿನಲ್ಲಿ ಸ್ವಾಗತ ಕಮಾನಿಗೆ ನಾಲ್ವಡಿ ರಾಜಾ ವೆಂಕಟಪ್ಪನಾಯಕರ ಹೆಸರಿಡಬೇಕು ಎಂದು ಕೋರಿದಾಗ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದರು.
ಗಾಂಧಿ ಪ್ರತಿಮೆ ಅನಾವರಣ: ಇದೇ 13ಕ್ಕೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ನಗರದ ಮಹಾತ್ಮ ಗಾಂಧಿಧೀಜಿ ವೃತ್ತದಲ್ಲಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಸಕರು ದಿನಾಂಕ ನಿಗದಿಪಡಿಸಿದ್ದು, ಎಲ್ಲ ಸದಸ್ಯರು ಅಂದು ಬೆಳಗ್ಗೆ 10ಕ್ಕೆ ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು ಎಂದು ಪೌರಯುಕ್ತ ಜೀವನಕುಮಾರ ಕಟ್ಟಿಮನಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.