ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, Dec 31, 2019, 12:32 PM IST
ಶಹಾಪುರ: ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಸಿಐಟಿಯು ನೇತೃತ್ವದಲ್ಲಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಡಿ.10ರಂದು ಅಂಗನವಾಡಿ ಕಾರ್ಯಕರ್ತೆಯರು ಕೈಗೊಂಡಿದ್ದ ಪಾದಯಾತ್ರೆ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದ ಮನವಿ ಮೇರೆಗೆ ಶೀಘ್ರದಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದ್ದರು. ಅಲ್ಲದೇ ಇತ್ತೀಚೆಗೆ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ರಾಜ್ಯ ಸಮಿತಿ ಶಾಲಾ ಪೂರ್ವ ಶಿಕ್ಷಣ ಅಂಗನವಾಡಿಗಳನ್ನು ಉಳಿಸಿ ಮತ್ತು ಇತರೆ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ತುಮಕೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡಿತ್ತು.
ಆ ಸಂದರ್ಭದಲ್ಲಿ ಹಲವು ನಿರ್ಣಯ ಕೈಗೊಂಡ ಸಂಘ, ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿತ್ತು. ಭಾರತದ ಸಂವಿಧಾನವು ತನ್ನ ನಾಗರಿಕರ ಹಿತ ಕಾಯುವಂತಿದ್ದು, ಪ್ರತಿಭಟನಾವನ್ನು ಹತ್ತಿಕ್ಕಬಾರದು ಎಂದು ಕಾರ್ಯಕರ್ತರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಸವಲಿಂಗಮ್ಮ ನಾಟೇಕಾರ, ಯಮುನಪ್ಪ ಕಸನ್, ಸಿ.ಎಸ್. ಕಲಾವತಿ, ರೇಣುಕಾ ಗೋಗಿ, ಬಸಮ್ಮ ಐಕೂರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.