ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಎಂಗೆ ಮನವಿ
ತಕ್ಷಣ ಕಠಿಣ ಕಾನೂನಿನ ಕ್ರಮ ಕೈಗೊಂಡ ಹಿಂಬರಹ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
Team Udayavani, Feb 8, 2021, 6:25 PM IST
ಯಾದಗಿರಿ: ಕಳೆದ 18 ತಿಂಗಳ ಹಿಂದೆ ಮುದ್ನಾಳ ಗ್ರಾಮದಲ್ಲಿ ಸರ್ವೇ ನಂ. 249/1 ರಲ್ಲಿ ವಿವಿಧ ಇಲಾಖೆಗಳಿಂದ ಸುಮಾರು 9 ಅಭಿವೃದ್ಧಿ ಕಾಮಗಾರಿ ನಿರ್ವಹಿಸಿದ್ದು, ರೈತನ ಅನುಮತಿಯಿಲ್ಲದೇ ಖಾಸಗಿ ಸ್ಥಳದಲ್ಲಿ ಕಾಮಗಾರಿ ಮಾಡಲಾಗಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜವಾಗಿಲ್ಲ.
ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲು ಟೋಕ್ರೆ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಕೆ.ಮುದ್ನಾಳ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಅಧಿಕಾರಿಗಳು ಯಾವುದೇ ಸ್ಥಳಕ್ಕೆ ಭೇಟಿ ನೀಡದೇ ಜಮೀನು ಹೊಂದಿದ ರೈತನಿಗೆ ನೋಟಿಸ್ ಕೊಡದೆ, ಭೂಸ್ವಾ ಧೀನ ಮಾಡಿಕೊಳ್ಳದೆ ಕಾನೂನಿನ ನಿಯಮ ಗಾಳಿಗೆ ತೂರಿ ಕಚೇರಿಯಲ್ಲಿ ಕುಳಿತು ನಕ್ಷೆ, ಅಂದಾಜು ವೆಚ್ಚ ದಾಖಲೆಗಳು ಮಾಡಿ ಕಾಮಗಾರಿ ಮಾಡಿದ್ದು, ಕಾನೂನು ಬಾಹಿರವಾಗಿ ರೈತನ ಖಾಸಗಿ ಜಮೀನಿನಲ್ಲಿ ಸರ್ಕಾರದ ಹಣದಲ್ಲಿ ಕಾಮಗಾರಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ ಅವರಿಗೂ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೂ ಮನವಿ
ಸಲ್ಲಿಸಿರುವ ಕುರಿತು ಉಲ್ಲೇಖಿಸಿದ್ದಾರೆ.
ದೂರು ಕೊಟ್ಟ ಮೇಲೆ ಇದುವರೆಗೆ ಒಬ್ಬರೇ ಒಬ್ಬರು ಮೇಲಾಧಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ದಿವ್ಯ ನಿರ್ಲಕ್ಷ ವಹಿಸಿ ನನಗೆ ಯಾವುದೇ ಹಿಂಬರಹವನ್ನೂ ನೀಡದೇ ಕರ್ತವ್ಯದಲ್ಲಿ ನಿರ್ಲಕ್ಷ ತೋರಿದ್ದು, ತಕ್ಷಣ ಕಠಿಣ ಕಾನೂನಿನ ಕ್ರಮ ಕೈಗೊಂಡ ಹಿಂಬರಹ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಸಹಾಯಕ ಆಯುಕ್ತರಿಗೆ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Without Helmet: ಹೀಗೂ ಉಂಟೇ.! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.