ಸರ್ಕಾರಿ ಖಾತೆಯಿಂದ ಹಣ ಎಗರಿಸಿದ್ದ ಮೂವರ ಬಂಧನ

ಹಣ ಎಗರಿಸುವಲ್ಲಿ ಬ್ಯಾಂಕ್ ಅಧಿಕಾರಿ ಸಹಕಾರ !

Team Udayavani, Oct 12, 2020, 8:01 PM IST

ಸರ್ಕಾರಿ ಖಾತೆಯಿಂದ ಹಣ ಎಗರಿಸಿದ್ದ ಮೂವರ ಬಂಧನ

ಸಾಂದರ್ಭಿಕ ಚಿತ್ರ

ಯಾದಗಿರಿ: ಜಿಲ್ಲೆಯ ಸುರಪುರ ತಹಸೀಲ್ದಾರರ ನೈಸರ್ಗಿಕ ವಿಕೋಪ ವಿರ್ವಹಣೆಯ ಖಾತೆಯಿಂದ 75,59,900 ರೂಪಾಯಿ ವರ್ಗಾವಣೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಚಾಲಾಕಿ ಗ್ಯಾಂಗ್ ಸರ್ಕಾರಿ ಖಜಾನೆಯ ಮೇಲೆಯೇ ಕಣ್ಣಿರಿಸಿ ನಕಲಿ ಸೀಲ್ ಬಳಸಿ ಹಣವನ್ನು ಎಗರಿಸಿದ್ದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಸುರಪುರ ನಗರದ ಆಕ್ಸಿಸ್ ಬ್ಯಾಂಕ್‌ನಲ್ಲಿ ತಹಸೀಲ್ದಾರ ಕಚೇರಿಯ ಖಾತೆ ಸಂಖ್ಯೆ 91901008033954
ಯಲ್ಲಿದ್ದ 3.55 ಕೋಟಿ ಹಣದಲ್ಲಿ ಜೂನ್ 1 ರಂದು ಬರೋಬ್ಬರಿ 75,59,900 ರೂಪಾಯಿ ಬೇರೆ ಖಾತೆ ವರ್ಗವಾಗಿತ್ತು. ತಹಸೀಲ್ದಾರರು ಕೋವಿಡ್‌ಗೆ ತುತ್ತಾಗಿ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರಿಂದ ಈ ಬಗ್ಗೆ ಯಾರ ಗಮನಕ್ಕೂ ಬಂದಿರಲಿಲ್ಲ. ತಹಸೀಲ್ದಾರರ ಸಹಿಯಿಲ್ಲದೇ ಹಣ ತೆಗೆಯಲು ಸಾಧ್ಯವೇ ಇಲ್ಲ. ಆದರೆ ಇಲ್ಲಿ ತಾಳಿಕೋಟೆಯ ಮಹಾಲಕ್ಷ್ಮೀ ಎಂಟರ್ ಪ್ರೈಸೆಸ್‌ನ ಲಕ್ಷ್ಮೀ ಕಟ್ಟಿಮನಿ ಅವರ ಪತಿ ರಾಜು ಕಟ್ಟಿಮನಿ ಹಾಗೂ ಆಕ್ಸಿಸ್ ಬ್ಯಾಂಕ್‌ನ ಸೇಲ್ಸ್ ಅಧಿಕಾರಿ ವಿಜಯಕುಮಾರ ಚೌದ್ರಿ ಎನ್ನುವವರು ಖಾತೆಗೆ ಕನ್ನ ಹಾಕಿದ್ದರು.

ತಹಸೀಲ್ದಾರರು ಸೋಂಕಿನಿಂದ ಗುಣಮುಖಗೊಂಡು ಮರಳಿದ ವೇಳೆ ಹೆಚ್ಚುವರಿ ಹಣ ಬೇಕಿದ್ದಲ್ಲಿ ಕೋರಿಕೆ ಪತ್ರ ಸಲ್ಲಿಸಲು ಜಿಲ್ಲಾಧಿಕಾರಿಗಳ ಕಚೇರಿಯಿಂದ ಕೇಳಿದ್ದರಿಂದ ಸೆ.22ರಂದು ತಹಸೀಲ್ದಾರರು ತಮ್ಮ ಕಚೇರಿಯ ಶಿರಸ್ತೇದಾರ ಮತ್ತು ವಿಷಯ ನಿರ್ವಹಕರನ್ನು ವಿವರಣೆ ಕೇಳಿದ್ದರು. ಈ ವೇಳೆ ಸಿಬ್ಬಂದಿ ಬ್ಯಾಂಕ್‌ಗೆ ತೆರಳಿ ಖಾತೆಯ ಸ್ಟೇಟಮೆಂಟ್ ಪಡೆಯಲು ಹೋದ ಸಂದರ್ಭದಲ್ಲಿ 2020ರ ಜೂನ್ 1ರಂದು ಖಾತೆಯಿಂದ ಹಣ ಮಹಾಲಕ್ಷ್ಮೀ ಎಂಟರ್ ಪ್ರೈಸೆಸ್ ಹೆಸರಿಗೆ ಹಣ ವರ್ಗಾವಣೆಯಾಗಿರುವುದು ಗಮನಕ್ಕೆ ಬಂದಿತ್ತು. ತಕ್ಷಣವೇ ಎಚ್ಚೆತ್ತ ತಹಸೀಲ್ದಾರ ನಿಂಗಪ್ಪ ಬಿರಾದಾರ ಅಂದೇ ಪೊಲೀಸರಿಗೆ ದೂರು ನೀಡಿದ್ದರು.

ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಲಕ್ಷ್ಮೀ ಮತ್ತು ರಾಜು ಕಟ್ಟಿಮನಿಯಿಂದ 25 ಲಕ್ಷ ರೂಪಾಯಿ ಸೇರಿದಂತೆ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಂಕ್ ಅಧಿಕಾರಿ ವಿಜಯಕುಮಾರರಿಂದ 50 ಲಕ್ಷದ 15 ಸಾವಿರ ರೂಪಾಯಿ ಸೇರಿದಂತೆ ತಹಸೀಲ್ದಾರರ ನಕಲಿ ಸೀಲ್ ಮತ್ತು ಇತರೆ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.