Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
ರಾಜ್ಯದ ರೈತರ ತಾಳ್ಮೆ ಪರೀಕ್ಷೆ ಮಾಡಬೇಡಿ
Team Udayavani, Dec 5, 2024, 1:58 PM IST
ಯಾದಗಿರಿ: ರಾಜ್ಯ ಕಾಂಗ್ರೆಸ್ ದುಷ್ಟ ಸರಕಾರ ಹಾಗೂ ಮುಖ್ಯಮಂತ್ರಿಗಳಿಂದ ರಾಜ್ಯದ ಮಠ, ಮಂದಿರ ಹಾಗೂ ಸಾರ್ವಜನಿಕರ ಆಸ್ತಿಗಳನ್ನು ವಕ್ಫ್ ಮುಖೇನ ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದ್ದು, ಅದರ ವಿರುದ್ಧ ರಾಜ್ಯ ಬಿಜೆಪಿ ಹೋರಾಟ ನಿರಂತರವಾಗಿರುತ್ತದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು.
ಗುರುವಾರ ಶಹಾಪುರ ನಗರದ ಸಿಬಿ ಕಮಾನ್ ನಿಂದ ಬಸವೇಶ್ವರ ವೃತ್ತದವರೆಗೆ ವಕ್ಫದ ವಿರುದ್ಧ ಪ್ರತಿಭಟನೆ ನಡೆಸಿ, ನಮ್ಮ ಭೂಮಿ ನಮ್ಮ ಹಕ್ಕು ವಿಶೇಷ ಅಭಿಯಾನದ ಕುರಿತು ಮಾತನಾಡಿದರು.
ರಾಜ್ಯದಲ್ಲಿರುವ ಸರ್ಕಾರದಿಂದ ರೈತರು ಕಣ್ಣೀರಾಕುವ ಸ್ಥಿತಿ ಬಂದಿದೆ. ಅನ್ನದಾತರ ಪರವಾಗಿ ಬಿಜೆಪಿ ಪಕ್ಷ ಸದಾ ಬೆನ್ನಿಗೆ ಇರುತ್ತದೆ. ಆದಕಾರಣ ಇಂದು ನಮ್ಮ ಭೂಮಿ-ನಮ್ಮ ಹಕ್ಕು ಹೋರಾಟ ನಡೆಸುತ್ತಿದ್ದೇವೆ ಎಂದರು.
1973-74ರ ಗೆಜೆಟಿಯರ್ ನೆಪ ಮಾಡಿಕೊಂಡು ಕಾಂಗ್ರೆಸ್ ಸರಕಾರ ಕೆಲವರ ಕುಮ್ಮಕ್ಕಿನಿಂದ ರೈತರ ಜಮೀನಿನಲ್ಲಿ ವಕ್ಫ್ ಎಂದು ಸೇರಿಸಿ ರಾಜಕೀಯ ಮಾಡುತ್ತಿರುವುದು ನಾಚಿಕೆಯ ಸಂಗತಿಯಾಗಿದೆ ಎಂದು ಆಕ್ರೋಶಗೊಂಡರು.
ಅನ್ನವನ್ನಿಕ್ಕುವ ರೈತರಿಗೆ ನೋಟಿಸ್ ನೀಡುವ ಈ ಸರ್ಕಾರಕ್ಕೆ ರಾಜ್ಯದ ಜನರು ಎಂದಿಗೂ ಕ್ಷಮಿಸುವುದಿಲ್ಲ. ಸಿದ್ದರಾಮಯ್ಯನವರೇ ರಾಜ್ಯದ ರೈತರ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಗುಡುಗಿದರು.
ರಾಜ್ಯದ ರೈತರ ಕಣ್ಣಲ್ಲಿ ನೀರು ಬಂದರೆ ಖಂಡಿತವಾಗಿಯೂ ಸಿದ್ದರಾಮಯ್ಯನವರೆ ನಿಮಗೆ ಶಾಪ ತಟ್ಟುತ್ತದೆ. ನಿಮ್ಮ ಮುಖ್ಯಮಂತ್ರಿ ಸ್ಥಾನ ಉಳಿಯುವುದಿಲ್ಲ. ಏನು ಸಾಧನೆ ಮಾಡಿದ್ದೀರಾ ಎಂದು ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದೀರಾ ಎಂದು ವಿಜಯೇಂದ್ರ ಟೀಕಿಸಿದರು.
ಸಿದ್ದರಾಮಯ್ಯನವರು ರಾಜ್ಯದ ರೈತರ ವಿರೋಧಿಯಾಗಿದ್ದಾರೆ. ರೈತರ ಸಾಲ ಮನ್ನಾ, ಬೆಳೆ ಪರಿಹಾರ ಮಾಡಲು ಆಗುವುದಿಲ್ಲ. ರಾಜ್ಯದ ಜನ ಸಂಕಷ್ಟದಲ್ಲಿದ್ದಾಗ ಯಡಿಯೂರಪ್ಪ ನವರು ಕೆಲಸ ಮಾಡಿದ್ದಾರೆ ಎಂದರು.
ಯಡಿಯೂರಪ್ಪನ ಮಗನಾಗಿ, ನಿಮ್ಮ ಮನೆ ಸೇವಕನಾಗಿ ಹೇಳುತ್ತಾ ಇರುವೆ ರಾಜ್ಯದ ರೈತರ ಜಮೀನು ಹೋಗಲು ನಾನು ಬಿಡುವುದಿಲ್ಲ ಎಂದು ಆಕ್ರೋಶ ಭರಿತವಾಗಿ ಭರವಸೆ ಮಾತುಗಳಾಡಿದರು.
ರೈತರಿಗೆ ಅನ್ಯಾಯವಾಗದಂತೆ ನಮ್ಮ ಹೋರಾಟ ನಿರಂತವಾಗಿರುತ್ತದೆ. ರಾಜ್ಯದ ಏಳಿಗೆಗಾಗಿ, ರೈತರ ಹಿತರಕ್ಷಣೆಗಾಗಿ ಎಂಥಹ ನಿರ್ಧಾರಕ್ಕೂ ನಾನು ಸಿದ್ಧನಾಗಿದ್ದೇನೆ ಎಂದರು.
ಇದನ್ನೂ ಓದಿ: Koppala: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.