ನಾಡ ದೊರೆ ಸ್ವಾಗತಕ್ಕೆ ಚಂಡರಕಿ ಸಿಂಗಾರ
ಯಾದಗಿರಿ, ಗುರುಮಿಠಕಲ್, ಚಂಡರಕಿಯಲ್ಲಿ ಬ್ಯಾನರ್‌ಗಳ ಅಬ್ಬರ
Team Udayavani, Jun 21, 2019, 5:47 AM IST
ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಚಂಡರಕಿ ಗ್ರಾಮದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳು.
ಯಾದಗಿರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು (ಜೂ.21) ಗುರುಮಿಠಕಲ್ ತಾಲೂಕಿನ ಚಂಡರಕಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಯಾದಗಿರಿ ಹಾಗೂ ಗುರುಮಿಠಕಲ್ನಲ್ಲಿ ಅದ್ಧೂರಿ ಸ್ವಾಗತ ಕೋರುವ ಕಮಾನುಗಳು ರಾರಾಜಿಸುತ್ತಿವೆ. ಚಂಡರಕಿ ಗ್ರಾಮವಂತೂ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ರೈಲಿನ ಮೂಲಕ ಯಾದಗಿರಿಗೆ ಆಗಮಿ ಸುವ ಸಿಎಂ, ಬಳಿಕ ರಸ್ತೆ ಮೂಲಕ ಗುರು ಮಿಠಕಲ್ ತಾಲೂಕಿಗೆ ಆಗಮಿಸಲಿದ್ದಾರೆ. ಮುಖ್ಯರಸ್ತೆಯಲ್ಲಿ ಭವ್ಯ ಸ್ವಾಗತ ಕಮಾನು, ಬ್ಯಾನರ್‌ಗಳಿಂದ ನಗರ ಸಜ್ಜುಗೊಂಡಿದ್ದರೆ, ಇತ್ತ ಗುರುಮಿಠಕಲ್ನಲ್ಲಿಯೂ ಸ್ವಾಗತಿಸಲು ನಾಯಕರು, ಕಾರ್ಯಕರ್ತರು ಬ್ಯಾನರ್‌ಗಳನ್ನು ಹಾಕಿದ್ದಾರೆ.
ಚಂಡರಕಿ ಗ್ರಾಮದಲ್ಲಿ ಈಗಾಗಲೇ ವ್ಯವಸ್ಥಿತ ರಸ್ತೆ ಸೇರಿ ಸಮರ್ಪಕ ಸೌಕರ್ಯ ಗಳನ್ನು ಕಲ್ಪಿಸಲಾಗಿದ್ದು, ಪ್ರಮುಖವಾಗಿ ಮುಖ್ಯಮಂತ್ರಿಗಳು ಜನತಾ ದರ್ಶನಕ್ಕೆ ಒತ್ತು ನೀಡಲಿರುವ ಹಿನ್ನೆಲೆಯಲ್ಲಿ ಸಾರ್ವ ಜನಿಕರು ಅವಹಾಲು ಸಲ್ಲಿಸಲು ಬೇಕಿರುವ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ. ಒಂದು ವಾರದಿಂದ ಜಿಲ್ಲಾಮಟ್ಟದ ಅಧಿಕಾರಿಗಳು ಗ್ರಾಮದಲ್ಲಿಯೇ ಬೀಡು ಬಿಟ್ಟು ಸಿದ್ಧತೆ ನೋಡಿಕೊಂಡಿದ್ದಾರೆ. ಇನ್ನು ತಮ್ಮ ಕ್ಷೇತ್ರದಿಂದಲೇ ಕುಮಾರಸ್ವಾಮಿ ಕಾರ್ಯಕ್ರಮ ಆರಂಭಿಸಿರುವುದು ಸ್ಥಳೀಯ ಶಾಸಕ ನಾಗನಗೌಡ ಕಂದಕೂರ ಅವರು ಸ್ವತಃ ಮುಂದೆ ನಿಂತು ಕಾರ್ಯ ಕ್ರಮದ ಯಶಸ್ಸಿಗೆ ಟೊಂಕ ಕಟ್ಟಿ ನಿಂತಿದ್ದಾರೆ.
ಶಾಲೆಗೆ ಬಣ್ಣದ ಲೇಪನ: ಮುಖ್ಯಮಂತ್ರಿ ವಾಸ್ತವ್ಯ ಹೂಡುವ ಸರ್ಕಾರಿ ಶಾಲೆಗೆ ಬಣ್ಣ ಬಳಿದುವ್ಯವ ಸ್ಥಿತವಾಗಿ ಸಿದ್ಧಗೊಳಿಸಲಾಗಿದೆ. ಶಾಲಾ ಆವರಣದಲ್ಲಿ ಸ್ನಾನಗೃಹ, ಶೌಚಾಲಯ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಎಸಿ ಅಳವಡಿಸುವುದು, ಬೆಡ್ ಹಾಕುವುದು ಸೇರಿ ಯಾವುದೇ ದುಂದು ವೆಚ್ಚ ಮಾಡಬಾರದು ಎಂದು ಸಿಎಂ ಸೂಚಿಸಿರುವ ಹಿನ್ನೆಲೆ ನೆಲದ ಮೇಲೆ ಚಾಪೆ ಹಾಸಿ, ಫ್ಯಾನ್ ಗಾಳಿಯಲ್ಲೇ ಮಲಗಲಿದ್ದಾರೆ. ಆದರೆ, ಅಧಿಕಾರಿಗಳು ಸಿಎಂ ಅವರ ವಾಸ್ತವ್ಯಕ್ಕೆ ಯಾವುದೇ ಕುಂದು ಕೊರತೆ ಬಾರದಂತೆ ಎಚ್ಚರಿಕೆ ವಹಿಸಿದ್ದಾರೆ.
ಮುಖ್ಯಮಂತ್ರಿ ಕುಳಿತುಕೊಳ್ಳವ ವೇದಿಕೆಯ ಮುಂಭಾಗದಲ್ಲಿ ಬಲ ಬದಿಗೆ ಬ್ಯಾರಿಕೇಡ್‌ಗಳ ಮೂರು ಪ್ರತ್ಯೇಕ 200 ಆಸನಗಳ ವಿಭಾಗಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಮುಖ್ಯಮಂತ್ರಿಗೆ ಅಹ ವಾಲು ನೀಡಿದ ಬಳಿಕ ಕುಳಿತುಕೊಳ್ಳಲು 5 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಿಐಪಿಗಳಿಗೆ 100 ಆಸಗಳನ್ನು ಕಾಯ್ದಿರಿಸಲಾಗಿದೆ. ಸೂಕ್ತ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನಾವಣೆ ತಿಳಿಸಿದ್ದಾರೆ.
ಸಿಎಂ ದಿನಚರಿ
ಜೂ.20ರ ಸಂಜೆ ಬೆಂಗಳೂರಿನಿಂದ ಕರ್ನಾಟಕ ಎಕ್ಸ್‌ಪ್ರೆಸ್ ಮೂಲಕ ಪ್ರಯಾಣ ಬೆಳೆಸುವ ಸಿಎಂ ಕುಮಾರಸ್ವಾಮಿ, ಜೂ.21 ಬೆಳಗ್ಗೆ 4 ಗಂಟೆಗೆ ಯಾದಗಿರಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 7:30ಕ್ಕೆ ಯಾದಗಿರಿಯಿಂದ ರಸ್ತೆ ಮೂಲಕ ಪ್ರಯಾಣ ಬೆಳೆಸಿ 10 ಗಂಟೆಗೆ ಚಂಡರಕಿಗೆ ಆಗಮಿಸುವರು. 10ರಿಂದ ಸಂಜೆ 6ರವರೆಗೆ ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆ ಅಹವಾಲು ಸ್ವೀಕರಿಸುವರು. ಸಂಜೆ 6:30ರಿಂದ ರೈತರೊಂದಿಗೆ ಸಂವಾದ ನಡೆಸಲಿದ್ದು, ಬಳಿಕ ಸ್ಥಳೀಯ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸುವರು. ರಾತ್ರಿ 8:30ಕ್ಕೆ ಶಾಲಾ ಮಕ್ಕಳು ಹಾಗೂ ಶಿಕ್ಷಕರೊಂದಿಗೆ ಭೋಜನ ಸ್ವೀಕರಿಸುವರು. ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡುವರು.
-ಅನೀಲ ಬಸೂದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.