ಬಸವಸಾಗರ ಭರ್ತಿ: ಹೆಚ್ಚುವರಿ ನೀರು ನದಿಗೆ


Team Udayavani, Sep 15, 2017, 1:30 PM IST

yad-2.jpg

ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ನಿರಂತರ ಒಳಹರಿವು ಹರಿದು ಬರುತ್ತಿದ್ದು, ಗುರುವಾರ ಬೆಳಗ್ಗೆಯಿಂದ ಜಲಾಶಯದ ಮೂರು ಕ್ರಸ್ಟ್‌ಗೇಟ್‌ ತೆರೆಯುವ ಮೂಲಕ 16 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ.

ಇನ್ನುಳಿದಂತೆ ಹೆಚ್ಚುವರಿ ನೀರನ್ನು ಜಲ ವಿದ್ಯುತ್‌ ಉತ್ಪಾದನೆಗೆಂದು ಜಲಾಶಯಕ್ಕೆ ಹೊಂದಿಕೊಂಡಿರುವ ಮುರಡೇಶ್ವರ ಜಲ ವಿದ್ಯುತ್‌ ಸ್ಥಾವರ ಮೂಲಕ 6 ಸಾವಿರ ಕ್ಯೂಸೆಕ್‌ ನಷ್ಟು ಒಟ್ಟು 22 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿದೆ ಎಂದು ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.

ಕೃಷ್ಣಾ ಜಲಾನಯನ ಪ್ರದೇಶದ ತೀರಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಆಲಮಟ್ಟಿ ಲಾಲ್‌ ಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಆಲಮಟ್ಟಿ ಅಣೆಕಟ್ಟಿಗೆ ಹೆಚ್ಚುವರಿ ಬರುತ್ತಿರುವ ನೀರನ್ನು ಇಲ್ಲಿನ ಬಸವಸಾಗರಕ್ಕೆ ಹರಿಬಿಟ್ಟಿದ್ದರಿಂದ ಜಲಾಶಯದ ಗರಿಷ್ಠ ಮಟ್ಟವಾದ 492.25 ಮೀಟರ್‌ ತಲುಪಿದೆ. ಹೆಚ್ಚುವರಿಯಾಗಿ ಹರಿದು ಬರುತ್ತಿರುವ ಹಿನ್ನೀರನ್ನು ಅಣೆಕಟ್ಟಿನ ಮೂರು ಮುಖ್ಯ ಕ್ರಸ್ಟ್‌ಗೇಟ್‌ ಮೇಲೆತ್ತುವ ಮೂಲಕ 16 ಸಾವಿರ ಕ್ಯೂಸೆಕ್‌ ಹಾಗೂ ಜಲಾಶಯಕ್ಕೆ ಹೊಂದಿಕೊಂಡಿರುವ ಮುರಡೇಶ್ವರ ಜಲ ವಿದ್ಯುತ್‌ ಸ್ಥಾವರ ಮೂಲಕ 6 ಸಾವಿರ ಕ್ಯೂಸೆಕ್‌ನಷ್ಟು ಒಟ್ಟಾರೆ 22 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ ಎಂದು ಅಣೆಕಟ್ಟು ಉಪವಿಭಾಗದ ಅಧಿಕಾರಿ ಪತ್ರಿಕೆಗೆ ತಿಳಿಸಿದ್ದಾರೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 492.25 ಮೀಟರ್‌ ತಲುಪಿದೆ. 33.31 ಟಿಎಂಸಿಯಷ್ಟು ನೀರು ಸಂಗ್ರವಿದೆ. ಒಳಹರಿವು 12 ಸಾವಿರ ಕ್ಯೂಸೆಕ್‌ ಇದೆ. ಒಟ್ಟು ಹೊರ ಹರಿವು ಕ್ರಸ್ಟ್‌ಗೇಟ್‌ ಹಾಗೂ ಜಲವಿದ್ಯುತ್‌ ಸ್ಥಾವರ ಮೂಲಕ 22 ಸಾವಿರ ಕ್ಯೂಸೆಕ್‌ ಇದೆ. ಹಾಗೂ ಕೃಷ್ಣಾ ಅಚ್ಚಕಟ್ಟು ಜಮೀನುಗಳಿಗೆ ನೀರಾವರಿಗಾಗಿ ಎಡದಂಡೆ ಮುಖ್ಯ ಕಾಲುವೆಗೆ 6,800 ಕ್ಯೂಸೆಕ್‌, ಬಲದಂಡೆ ಮುಖ್ಯ ಕಾಲುವೆಗೆ 2,400 ಕ್ಯೂಸೆಕ್‌ನಷ್ಟು ನೀರನ್ನು ಕಾಲುವೆ ಜಾಲಗಳಿಗೆ ಹರಿಸಲಾಗುತ್ತಿದೆ ಎಂದು ಕೃಭಾಜನನಿ ಮೂಲಗಳಿಂದ ತಿಳಿದು ಬಂದಿದೆ. 

ಟಾಪ್ ನ್ಯೂಸ್

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.