ಕ್ರೀಡಾ ನಿಯಮಗಳಿಗೆ ಬದ್ಧರಾಗಿ
Team Udayavani, Aug 3, 2017, 8:40 AM IST
ಸೈದಾಪುರ: ಕ್ರೀಡಾಪಟುಗಳು ಸೋತಾಗ ಮಾನಸಿಕವಾಗಿ ಕುಗ್ಗದೆ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಜಿಪಂ ಸದಸ್ಯೆ ಶಶಿಕಲಾ ಬಿ. ಪಾಟೀಲ ಕ್ಯಾತನಾಳ ಸಲಹೆ ನೀಡಿದರು.
ಬದ್ದೇಪಲ್ಲಿ ಗ್ರಾಮದಲ್ಲಿ ನಡೆದ ಸೈದಾಪುರ ಹೊಬಳಿ ಮಟ್ಟದ ಪ್ರಾಥಮಿಕ ಹಾಗೂ ಪೌಢಶಾಲಾ ಕ್ರೀಡಾ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅವರು ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಬದಲಿಗೆ ಎಲ್ಲಾ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಹಾಗೂ ನಿರ್ಣಯಕರು ಕ್ರೀಡಾ ನಿಯಮಗಳಿಗೆ ಬದ್ಧರಾಗಿರಬೇಕು ಎಂದು ಹೇಳಿದರು. ಕಾರ್ಯಕ್ರಮದ ಧ್ವಜಾರೋಹಣವನ್ನು ತಾಪಂ ಉಪಾಧ್ಯಕ್ಷೆ ರಾಮಲಿಂಗಮ್ಮ ಬಿ. ಕವಡೆ ನೆರವೇರಿಸಿದರು.
ಕ್ರೀಡಾ ಜ್ಯೋತಿಯನ್ನು ಗ್ರಾಪಂ ಅಧ್ಯಕ್ಷೆ ರತ್ನಮ್ಮ ಸ್ವೀಕರಿಸಿದರು. ದೈಹಿಕ ಶಿಕ್ಷಕ ಸಣ್ಣೆಕಪ್ಪ ಅವರ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ಜರುಗಿರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರಿ ಉಪನಿರ್ದೇಶಕರಾದ ಡಿ.ಎಂ. ಹೊಸ್ಮನಿ, ಬಿಇಒ ರುದ್ರುಗೌಡ ಪಾಟೀಲ, ಬಸವರಾಜಯ್ಯ ಸ್ವಾಮಿ ಬದ್ದೇಪಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಭಿಮಣ್ಣಗೌಡ ಕ್ಯಾತನಾಳ, ಗ್ರಾಪಂ ಸದಸ್ಯರಾದ ಅಭಿಮನ್ಯು ಯಾದವ, ಶರಣಬಸವ ಸ್ವಾಮಿ, ಶಂಕರ ಯಾದವ, ಬಾಲಕೃಷ್ಣ ಖಾನಾಪುರ, ಮಹಿಮೂದ, ವಿಶ್ವನಾಥ ರಾಠೊಡ, ಸುಭಾಷ ಯಾದವ, ಡಿ.ತಾಯಪ್ಪ, ಮರಿಲಿಂಗಪ್ಪ, ಇಸಿಒ ಮಹಿಬೂಬ ಐಸಾಕಿ, ಸಿಆರ್‌ಪಿಗಳಾದ ಲಿಂಗನಗೌಡ, ಸೈಯ್ಯದ್ ಶೇರ್ ಅಲಿ, ರವಿಕುಮಾರ, ತಾಲೂಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹಣಮಂತ ಹೊಸಮನಿ,
ವಿಷಯ ಪರಿವೀಕ್ಷಕ ವೆಂಕೋಬ, ಬಸಣ್ಣಗೌಡ ಬಿರಾದರ, ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಂದಸಾಬ ವಹಿಸಿದ್ದರು.
ಇದೇ ವೇಳೆ ಬದ್ದೇಪಲ್ಲಿ ಗ್ರಾಮದ ವಿವಿಧ ಸಂಘಟನೆಗಳ ಮುಖ್ಯಸ್ಥರು, ಯುವಕರು, ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.