ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ
Team Udayavani, Apr 30, 2020, 4:35 PM IST
ಭಾಲ್ಕಿ: ಕೋಸಂ ಗ್ರಾಮದ ಹೊರ ವಲಯದ ಕೆರೆಯಲ್ಲಿ ನರೇಗಾದಡಿ ಹೂಳೆತ್ತುವ ಕಾಮಗಾರಿಗೆ ಶಾಸಕ ಈಶ್ವರ ಖಂಡ್ರೆ ಚಾಲನೆ ನೀಡಿದರು.
ಭಾಲ್ಕಿ: ತಾಲೂಕಿನ ಅಂಬೆಸಾಂಗವಿ ಹಾಗೂ ಕೋಸಂ ಗ್ರಾಮದ ಹೊರ ವಲಯದ ಕೆರೆಗೆ ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ನರೇಗಾದಡಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿದರು. ತಾಲೂಕಿನ ಅಂಬೆಸಾಂಗವಿ, ಕೋಸಂ ಕೆರೆಗಳಿಗೆ ಭೇಟಿ ನೀಡಿದ ಶಾಸಕರು ಹೂಳೆತ್ತುವ ಕಾಮಗಾರಿ ವೀಕ್ಷಿಸಿ ಕೂಲಿ ಕಾರ್ಮಿಕರ ಸಮಸ್ಯೆ ಆಲಿಸಿದರು.
ಸಂಕಷ್ಟ ಸಮಯದಲ್ಲಿ ಬಡವರು, ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕು ಎಂಬ ಉದ್ದೇಶದೊಂದಿಗೆ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ ಕೆಲಸ ನೀಡುವಂತೆ ಸೂಚನೆ ನೀಡಿದ್ದೇನೆ. ಒಂದು ಪರಿವಾರಕ್ಕೆ ಕನಿಷ್ಟ 50 ದಿವಸ ಕೆಲಸ ಮತ್ತು ದಿನವೊಂದಕ್ಕೆ ಒಬ್ಬರಿಗೆ 275 ರೂ. ಕೂಲಿ ಸಿಗಲಿದ್ದು, ವಾರದೊಳಗೆ ಕೂಲಿ ಹಣ ನೇರವಾಗಿ ಕಾರ್ಮಿಕರ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದರು.
ಕೂಲಿ ಕಾರ್ಮಿಕರು ಕೆಲಸದ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೋವಿಡ್-19 ಹರಡುವಿಕೆ ಭೀತಿ ಇರುವುದರಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿಬೇಕು. ಸಾಧ್ಯವಾದರೇ ಗ್ಲೌಸ್, ಸಾನಿಟೈಸರ್ ಬಳಸಬೇಕು. ಇಲ್ಲದಿದ್ದರೇ ಕಾಲಕಾಲಕ್ಕೆ ಸಾಬೂನಿಂದ ಕೈಗಳು ಸ್ವಚ್ಛತೆ ಮಾಡಿಕೊಳ್ಳಬೇಕು ಎಂದು ಹೇಳಿದರು. ತಹಶೀಲ್ದಾರ್ ಅಣ್ಣಾರಾವ ಪಾಟೀಲ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ನಾಯಕರ, ಶಶಿಧರ ಕೋಸಂಬೆ, ಸಂಗಮೇಶ ಮದಕಟ್ಟಿ, ರಾಜಕುಮಾರ ಬಿರಾದಾರ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.