ಅಪಘಾತಗಳಿಗೆ ಕಾರಣವಾಗುತ್ತಿದ್ದ ಟಾಪ್ ಪ್ರಯಾಣಕ್ಕೆ ಬ್ರೇಕ್
Team Udayavani, Jun 9, 2022, 3:31 PM IST
ಕೆಂಭಾವಿ: ಅಪಘಾತಗಳಿಗೆ ಕಾರಣವಾಗುತ್ತಿದ್ದ ಟಾಪ್ ಪ್ರಯಾಣಕ್ಕೆ ನೂತನ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ನೇತೃತ್ವದ ಪೊಲೀಸ್ ತಂಡ ಬುಧವಾರ ಕಾಯಂ ಅಂಕುಶ ಹಾಕಿದ್ದು, ಜೀಪ್ ಮತ್ತು ಟಂಟಂ ವಾಹನಗಳ ಮೇಲಿನ ಕ್ಯಾರಿಯರ್ ತೆಗಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಬಹಳ ದಿನಗಳಿಂದ ಪಟ್ಟಣ ಸೇರಿದಂತೆ ವಲಯದ ಹಲವು ಗ್ರಾಮಾಂತರ ಪ್ರದೇಶಗಳಲ್ಲಿ ಟಾಪ್ ಪ್ರಯಾಣದಿಂದ ಹಲವು ಅಪಘಾತಗಳು ಸಂಭವಿಸಿದ್ದವು. ಇತ್ತೀಚೆಗಷ್ಟೆ ಪೊಲೀಸ್ ಠಾಣೆಯಲ್ಲಿ ನಡೆದ ಮಾಧ್ಯಮ ಹಾಗೂ ಪೊಲೀಸ್ ನಡುವಿನ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಭರವಸೆ ನೀಡಿದ್ದ ಪಿಎಸ್‌ಐ ವಿಶ್ವನಾಥ ಅವರು, ಹಳೆ ಬಸ್ ನಿಲ್ದಾಣ ಪ್ರದೇಶದಲ್ಲಿ ಖುದ್ದು ನಿಂತು ಖಾಸಗಿ ವಾಹನಗಳ ಮೇಲಿನ ಟಾಪ್ ಕ್ಯಾರಿಯರ್ ತೆಗೆಸಿ ನಿಯಮದ ಪ್ರಕಾರ ಪ್ರಯಾಣಿಕರನ್ನು ತುಂಬುವಂತೆ ಎಲ್ಲ ಖಾಸಗಿ ವಾಹನಗಳ ಚಾಲಕರಿಗೆ ಸೂಚನೆ ನೀಡಿದರು. ನಿಯಮ ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ ಅನಿವಾರ್ಯ ಎಂದು ಹೇಳಿದರು.
ಅಪರಾಧ ವಿಭಾಗದ ಪಿಎಸ್‌ಐ ವೆಂಕಣ್ಣ ಶಹಾಪುರ, ಎಎಸ್‌ಐ ಬಲರಾಮ, ಎಚ್‌ಸಿ ಶಿವು ಪಾಟೀಲ, ನಿಂಗಪ್ಪ, ಪಿಸಿ ಮಾಳಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.