ವಿದ್ಯಾರ್ಥಿಗಳಿಂದ ಬಸ್ ತಡೆ
Team Udayavani, Nov 30, 2021, 4:30 PM IST
ಗುರುಮಠಕಲ್: ಶಾಲಾ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಗಡಿನಾಡು ವ್ಯಾಪ್ತಿಯ ಮೇದಕ್ ಗ್ರಾಮದಲ್ಲಿ ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮೇದಕ್, ಯಾನಾಗುಂದಿ, ಕಾನಾಗಡ್ಡ, ಬುರುಗಪಲ್ಲಿ ಮುಂತಾದ ಗ್ರಾಮಗಳಿಂದ ಗುರುಮಠಕಲ್ ಪಟ್ಟಣಕ್ಕೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಲು ಬರುತ್ತಾರೆ. ಕಲಬುರಗಿ ಡಿಪೋದಿಂದ ಗುರುಮಠಕಲ್‌ಗೆ ಸಂಚರಿಸುವ ಬಸ್ 10 ಗಂಟೆಯಾದ ಮೇಲೆ ನಮ್ಮ ಗ್ರಾಮಕ್ಕೆ ಬರುತ್ತದೆ. ಹೀಗಾದರೆ ನಾವು ಯಾವಾಗ ಗುರುಮಠಕಲ್ ಶಾಲಾ-ಕಾಲೇಜು ತಲುಪಬೇಕು?. ಇದರಿಂದ ನಮ್ಮ ತರಗತಿಗಳು ತಪ್ಪುತ್ತಿವೆ ಎಂದು ಅಸಮಾಧಾನಗೊಂಡರು.
ಬೆಳಗ್ಗೆ 9 ಮತ್ತು ಸಂಜೆ 4.30 ಗಂಟೆಗೆ ಸಮಯ ಹೊಂದಿಸಿ ಬಸ್ ಸಂಚರಿಸುವಂತೆ ವ್ಯವಸ್ಥೆ ಮಾಡಿ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳೆಲ್ಲ ಬಸ್ ತಡೆದು ಪ್ರತಿಭಟನಾ ಧರಣಿ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಈ ವೇಳೆ ವಿದ್ಯಾರ್ಥಿಗಳಾದ ರಮೇಶ್, ಅಶೋಕ್, ವಿಷ್ಣುವರ್ಧನ್, ಸಿದ್ದು, ಸಂಜು, ಇಂದೇಶ, ರಾಜಕುಮಾರ, ನರಸಿಂಹ, ಉಮೇಶ, ರವಿ, ನವೀನ್, ಅನುಷಾ, ಲಕ್ಷ್ಮೀ, ಶಶಿಕಲಾ, ನವಿತಾ, ಅಶ್ವಿನಿ, ಮಹೇಶ್ವರಿ, ಸುನಿತಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.