4ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಕರೆ


Team Udayavani, Dec 6, 2018, 2:52 PM IST

yad-2.jpg

ಯಾದಗಿರಿ: ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಡಿಸೆಂಬರ್‌ 24 ಮತ್ತು 25ರಂದು ಹಿಂದಿ ಪ್ರಚಾರ ಸಭಾ ಆವರಣದಲ್ಲಿ ನಡೆಯಲಿರುವ 4ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸಾಹಿತಿ ಅಯ್ಯಣ್ಣ ಹುಂಡೇಕಾರ ಬಿಡುಗಡೆಗೊಳಿಸಿದರು. ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜರುಗಿದ
ಪತ್ರಿಕಾಗೋಷ್ಠಿಯಲ್ಲಿ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಗಡಿ ಭಾಗದ ಜಿಲ್ಲೆಯಲ್ಲಿ ಕನ್ನಡ ಡಿಂಡಿಮ ಮೊಳಗಿಸಿ ನಾಡು ನುಡಿಯ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿ, ಶಹಾಪುರ ಸಾಹಿತಿ ಸಿದ್ದರಾಮ ಹೊನ್ಕಲ್‌ ಸರ್ವಾಧ್ಯಕ್ಷರಾಗಿರುವ ಈ ಸಮ್ಮೇಳನವನ್ನು ನಾಡಿನ ಹೆಸರಾಂತ ಸಾಹಿತಿ ಡಾ| ಸೋಮಶೇಖರ ಉದ್ಘಾಟಿಸಲಿದ್ದು, ಪ್ರಸ್ತುತ ವಿದ್ಯಾಮಾನಗಳು, ವರ್ತಮಾನದ ಸಮಸ್ಯೆಗಳು, ಮಹಿಳಾ ಪರ ಚಿಂತನೆಗಳು, ಮಾಧ್ಯಮಗಳ ಪ್ರಸ್ತುತತೆ ಜಿಲ್ಲೆಯ ಮತ್ತು ಹೈಕ ಭಾಗದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಜಿಲ್ಲೆಯ ಮತ್ತು
ನಾಡಿನ ಅನೇಕ ವಿದ್ವಾಂಸರನ್ನು ಆಹ್ವಾನಿಸಲಾಗಿದೆ ಎಂದರು.
 
ಕವಿಗಳಿಗೆ ಹೆಚ್ಚಿನ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಎರಡು ಕವಿಗೋಷ್ಠಿ ಏರ್ಪಡಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ದುಡಿದ ಮಹನೀಯರನ್ನು ಸತ್ಕರಿಸಲಾಗುವುದು. ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಸಮ್ಮೇಳನದ ಮೆರಗು ಹೆಚ್ಚಿಸಲಿವೆ ಎಂದರು.

ಜಿಲ್ಲೆಯ ಮಠಾಧಿಧೀಶರು, ಉಸ್ತುವಾರಿ ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗಿದ್ದು, ಆಮಂತ್ರಣ ಪತ್ರಿಕೆ ಅಂತಿಮ ಹಂತದಲ್ಲಿದೆ. ಬೃಹತ್‌ ವೇದಿಕೆ ಸಿದ್ಧಪಡಿಸಲಾಗುತ್ತಿದ್ದು, ಎರಡು ದಿನಗಳ ಕಾಲ ರುಚಿಕರ ಊಟೋಪಚಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಮ್ಮೇಳನ ಯಶಸ್ವಿಗೆ ಮಾಧ್ಯಮದವರು ಒಳಗೊಂಡಂತೆ ಎಲ್ಲರೂ ಸಹಕರಿಸಲು ಮನವಿ ಮಾಡಿದರು. 

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ| ಸುಭಾಶ್ಚಂದ್ರ ಕೌಲಗಿ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿರುವ ನುಡಿ ಜಾತ್ರೆಯನ್ನು ಸ್ಮರಣೀಯವಾಗಿಸಲು ಶ್ರಮಿಸಲಾಗುತ್ತಿದ್ದು, ಸಮ್ಮೇಳನದ ಲಾಂಛನ ಚಿಂತನಳ್ಳಿಯ ಗವಿಸಿದ್ಧಲಿಂಗೇಶ್ವರ, ಗುರುಮಠಕಲ್‌ ಜಲಪಾತ, ಯಾದಗಿರಿ ಐತಿಹಾಸಿಕ ಕೋಟೆ, ಶಹಾಪುರದ ಬುದ್ಧ ಮಲಗಿದ ದೃಶ್ಯ, ಗೋಗಿಯ ಚಂದಾ ಹುಸೇನಿ, ಸುರಪುರದ ವೇಣುಗೋಪಾಲ ಸ್ವಾಮಿ ಗುಡಿ, ಜಿಲ್ಲೆಯ ಪ್ರಮುಖ ಬೆಳೆ ಭತ್ತ ಹೀಗೆ ನಮ್ಮ ಜಿಲ್ಲೆಯ ಹಿರಿಮೆಯನ್ನು ಸಾರುವ ಪರಿಯಲ್ಲಿ ಅದನ್ನು ವಿನ್ಯಾಸಗೊಳಿಸಲಾಗಿದೆ ಎಂದು ತಿಳಿಸಿದರು. ಪ್ರಕಾಶ ಅಂಗಡಿ ಕನ್ನೆಳ್ಳಿ, ಡಾ| ಭೀಮರಾಯ ಲಿಂಗೇರಿ, ನಾಗೇಂದ್ರ ಜಾಜಿ, ನೂರಂದಪ್ಪ ಲೇವಡಿ, ಬಸವಂತ್ರಾಯಗೌಡ ಮಾಪಾ ಸಿಎಂ ಪಟ್ಟೇದಾರ, ಬಸವರಾಜ ಮೋಟ್ನಳ್ಳಿ, ದೇವರಾಜ ವರ್ಕನಳ್ಳಿ, ಆರ್‌. ಮಹಾದೇವಪ್ಪ ಅಬ್ಬೆತುಮಕೂರು, ಚನ್ನಪ್ಪ ಠಾಣಾಗುಂದಿ, ಡಾ| ಎಸ್‌. ಎಸ್‌. ನಾಯಕ, ಲಾಂಛನವನ್ನು ವಿನ್ಯಾಸಗೊಳಿಸಿದ ಈ ಭಾಗದ ಖ್ಯಾತ ಚಿತ್ರ ಕಲಾವಿದ ಸಂಗಣ್ಣ ದೋರನಳ್ಳಿ ಇದ್ದರು.

ಈ ಸಂದರ್ಭದಲ್ಲಿ ಸಮ್ಮೇಳನ ಕಾರ್ಯಕಾರಿ ಸಮಿತಿ ಸದಸ್ಯರಾದ ಅಯ್ಯಣ್ಣ ಹುಂಡೇಕಾರ, ಬಸವಂತರಾಯಗೌಡ, ನಾಗೇಂದ್ರ ಜಾಜಿ ಇದ್ದರು. 

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.