ಸರ್ಕಾರದ ಮಾರ್ಗಸೂಚಿಯಂತೆ ಗಣೇಶೋತ್ಸವ ಆಚರಿಸಿ
ಗಣೇಶ ಚತುರ್ಥಿ ಆಚರಣೆಗೆ ಹಲವು ನಿಯಮ ಸರ್ಕಾರದ ಆದೇಶ ಮೀರಿದರೆ ಕಾನೂನು ಕ್ರಮ-ಎಚ್ಚರಿಕೆ
Team Udayavani, Sep 7, 2021, 7:39 PM IST
ಯಾದಗಿರಿ: ಗಣೇಶೋತ್ಸವ ಆಚರಿಸುವ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪಾಲಿಸಿ ಜಿಲ್ಲೆಯಲ್ಲಿ ಸರಳ ಮತ್ತು ಭಕ್ತಿಯಿಂದ ಹಬ್ಬ ಆಚರಿಸುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ಮನೆಗಳಲ್ಲಿ ಅಥವಾ ಸರ್ಕಾರಿ/ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಹಬ್ಬ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವಾಗ 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಮೂರ್ತಿ ಪ್ರತಿಷ್ಠಾಪಿಸುವಂತೆ ಕೋರಿದ್ದಾರೆ.
ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿ/ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಮುನ್ಸಿಪಲ್ ಕಾರ್ಪೊರೇಷನ್/ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು. ಒಂದು ನಗರ ಪ್ರದೇಶಗಳಲ್ಲಿ ವಾರ್ಡ್‌ಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವ ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಉತ್ಸವ ಆಚರಣೆ ಗರಿಷ್ಠ 5 ದಿನಗಳಿಗಿಂತ ಹೆಚ್ಚಿನ ದಿನ ಆಚರಿಸುವಂತಿಲ್ಲ. ಇಂತಹ ಸ್ಥಳಗಳಲ್ಲಿ
20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತರಿ ಅನುವು ಮಾಡಿಕೊಡಬೇಕೆಂದು ತಿಳಿಸಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿಂದು 851 ಜನರಲ್ಲಿ ಕೋವಿಡ್ ಸೋಂಕು ದೃಢ : 790 ಸೋಂಕಿತರು ಗುಣಮುಖ
ಗಣೇಶ ಆಚರಣೆ ಆಯೋಜಕರು ಕೋವಿಡ್ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ. ಗಣೇಶ ಆಚರಣೆ ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವುದು. ಸಾರ್ವಜನಿಕರು
ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಮೂರ್ತಿ ಪ್ರತಿಷ್ಠಾಪಿಸಬೇಕು. ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿಜೆ ಮೂಲಕ ಹಾಗೂ ಇತರ ಯಾವುದೇ ಮನರಂಜನಾ ಕಾರ್ಯಕ್ರಮ ಆಯೋಜಿಸಲು ಅವಕಾಶವಿಲ್ಲ ಎಂದು
ಸ್ಪಷ್ಟಪಡಿಸಿದ್ದಾರೆ.
ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇಮೆರವಣಿಗೆ ಮಾಡತಕ್ಕದ್ದಲ್ಲ. ಇದನ್ನು ಜಿಲ್ಲಾದ್ಯಂತ ಸಂಪೂರ್ಣ ನಿರ್ಬಂಧಿಸಿದೆ. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಪೂಜಿಸುವುದು, ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿ ಕನಿಷ್ಟ ಜನಸಂಖ್ಯೆಯೊಂದಿಗೆ ಸಮೀಪವಾಗುವ ಮಾರ್ಗ ಬಳಸಿಕೊಂಡು ಜಿಲ್ಲಾಡಳಿತ/ನಗರಸಭೆ/ಹತ್ತಿರದ ಸ್ಥಳೀಯಸಂಸ್ಥೆಗಳ/ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು
Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.