ಬಿಜೆಪಿ ಕಾರ್ಯಾಲಯದಲ್ಲಿ ಸಮರ್ಪಣಾ ದಿವಸ್ ಆಚರಣೆ
ಸಮಾಜದ ಕಟ್ಟಕಡೆ ವ್ಯಕ್ತಿಗಾಗಿ ಸ್ಪಂದಿಸುವ ಅಂತ್ಯೋದಯ ಮಾರ್ಗಗಳು ಸಶಕ್ತ ರಾಷ್ಟ್ರ ನಿರ್ಮಾಣದ ಭದ್ರ ಬುನಾದಿಯಾಗಿದೆ
Team Udayavani, Feb 12, 2021, 6:33 PM IST
ಯಾದಗಿರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ 53ನೇ ಪುಣ್ಯತಿಥಿ ಅಂಗವಾಗಿ ಉಪಾಧ್ಯಾಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿ ಸಮರ್ಪಣಾ ದಿವಸ್ ಆಚರಿಸಲಾಯಿತು. ಬಿಜೆಪಿ ಜಿಲ್ಲಾಧಕ್ಷ ಡಾ| ಶರಣಭೂಪಾಲರಡ್ಡಿ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಪಂಡಿತ್ ದೀನ ದಯಾಳ್ ಉಪಾಧ್ಯಾಯರು ಅಪ್ರತಿಮ ದೇಶಭಕ್ತ, ಸಮಾಜ ಸುಧಾರಕ, ಅಗ್ರಮಾನ್ಯ ನಾಯಕರಾಗಿದ್ದರು. ಅವರ ಪುಣ್ಯತಿಥಿಯಂದು ಆ ಮಹಾನ್ ಚೇತನಕ್ಕೆ ಅನಂತ ಪ್ರಣಾಮಗಳು ಮತ್ತು ಅವರ ಸರಳ ಜೀವನ ಮತ್ತು ಆದರ್ಶದ ಚಿಂತನೆ ಜೀವನದಲ್ಲಿ
ಅಳವಡಿಸಿಕೊಳ್ಳಬೇಕು ಎಂದರು.
ಮಾಜಿ ಶಾಸಕ ಡಾ| ವೀರಬಸವಂತರಡ್ಡಿ ಮುದ್ನಾಳ ಮಾತನಾಡಿ, ಪಂಡಿತ್ ದೀನ ದಯಾಳ್ ಉಪಾಧ್ಯಾಯರ ಸ್ಮರಣೆ ಮಾಡುತ ಅವರು ತೋರಿದ ಸ್ವಾವಲಂಬನೆ ಮತ್ತು ಸಮಾಜದ ಕಟ್ಟಕಡೆ ವ್ಯಕ್ತಿಗಾಗಿ ಸ್ಪಂದಿಸುವ ಅಂತ್ಯೋದಯ ಮಾರ್ಗಗಳು ಸಶಕ್ತ ರಾಷ್ಟ್ರ ನಿರ್ಮಾಣದ ಭದ್ರ ಬುನಾದಿಯಾಗಿದೆ ಎಂದರು.
ಈ ವೇಳೆ ಜಿಲ್ಲಾ ಉಪಾಧ್ಯಕ್ಷ ನೀಲಕಂಠರಾಯ ಎಲ್ಲೇರಿ, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಲಲಿತಾ ಅನ್ನಪುರ, ಎಸ್.ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಪರಶುರಾಮ ಕುರಕುಂದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರಡ್ಡಿ ಅಬ್ಬೇತುಮಕೂರ, ಯುಡ ಅಧ್ಯಕ್ಷ ಬಸುರಾಜ ಚಂಡ್ರಕಿ, ನಗರಸಭೆ ಸದಸ್ಯ ಮತ್ತು ನಗರ ಮಂಡಲ ಅಧ್ಯಕ್ಷ ಸುರೇಶ ಅಂಬಿಗೇರ, ಹಣಮಂತ ಇಟಿಗಿ, ಸ್ವಾಮಿದೇವ ದಾಸನಕೇರಿ, ಸುನಿತಾ ಚವ್ಹಾಣ, ಯುಡ ಸದಸ್ಯ ಸುಭಾಷ ಮ್ಯಾಗೇರಿ, ಭೀಮಣ್ಣಗೌಡ ಕ್ಯಾತನಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.