ಸಮಾಜ ಸುಧಾರಿಸಿದ ನಿಜಶರಣ ಚೌಡಯ್ಯ
ಯಾರಿಗೂ ಹೆದರದೆ, ಅಳುಕದೇ ಸಮಾಜದ ಅಂಕುಡೊಂಕುಗಳನ್ನು ತಿದ್ದಿದವರು.
Team Udayavani, Jan 22, 2021, 6:15 PM IST
ಯಾದಗಿರಿ: ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೋಗಲಾಡಿಸಲು ಶ್ರಮಿಸಿದ ಮಹಾನ್ ವಚನಗಾರ ನಿಜಶರಣ ಅಂಬಿಗರ ಚೌಡಯ್ಯ ಎಂದು ಮಾಜಿ ಸಚಿವ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಾಬುರಾವ ಚಿಂಚನಸೂರ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯಾರಿಗೂ ಹೆದರದೆ, ಅಳುಕದೇ ಸಮಾಜದ ಅಂಕುಡೊಂಕುಗಳನ್ನು ತಿದ್ದಿದವರು. ಕಾಯಕ ನಿಷ್ಠೆ ಉಳ್ಳವರು, ಹಸಿದವರಿಗೆ ಅನ್ನ ಕೊಡಿ, ದುಃಖದಲ್ಲಿದ್ದವರಿಗೆ ಸಾಂತ್ವನ ಹೇಳಿ, ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿ ಎಂದು ತಮ್ಮ ವಚನದ ಮೂಲಕ ಜಗತ್ತಿಗೆ ಸಾರಿದವರು ಅಂಬಿಗರ ಚೌಡಯ್ಯನವರು ಎಂದು ಬಣ್ಣಿಸಿದರು.
ಜಾತಿ ಅಭಿಮಾನ ಇರಲಿ. ದುರಾಭಿಮಾನ ಬೇಡ. ಇಂತಹ ಮಹಾತ್ಮರ ಜಯಂತಿಯನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡದೇ ಎಲ್ಲಾ ವರ್ಗದವರನ್ನು ಒಗ್ಗೂಡಿ ಆಚರಿಸಬೇಕು ಎಂದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್ ಅವರು ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಪ್ಪಾರ್ಚನ ಮಾಡಿ ಗೌರವ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ, ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಬಸವರಾಜ ಎಸ್.ಚಂಡಕ್ರಿ, ಅಂಬಿಗರ ಚೌಡಯ್ಯ ಸಮಾಜದ ಜಿಲ್ಲಾಧ್ಯಕ್ಷ ಹಣಮಂತ ಮಡ್ಡಿ, ಮೌಲಾಲಿ ಅನಾಪುರ ಸೇರಿದಂತೆ ಸಮಾಜದ ಗಣ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.