ದೋಬಿಗಲ್ಲಿಗೆ ಮೂಲ ಸೌಕರ್ಯ ಒದಗಿಸಲು ಒತ್ತಾಯ


Team Udayavani, Sep 15, 2022, 7:32 PM IST

17-facility

ಸುರಪುರ: ಪಟ್ಟಣದ ದೋಬಿಗಲ್ಲಿಯಲ್ಲಿ ಚರಂಡಿ, ರಸ್ತೆ, ಬೀದಿದೀಪ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳು ಸಮರ್ಪಕವಾಗಿಲ್ಲ ಎಂದು ಆರೋಪಿಸಿ ವಾರ್ಡ್‌ನ ಸಾರ್ವಜನಿಕರು ಬುಧವಾರ ನಗರಸಭೆ ಕಾರ್ಯಾಲಯ ಎದುರು ಪ್ರತಿಭಟಿಸಿದರು.

ಮುಖಂಡ ಸಂಗನಗೌಡ ಮಾಲಿಪಾಟೀಲ ಮಾತನಾಡಿ, ವಾರ್ಡ್‌ನಲ್ಲಿ ಚರಂಡಿಗಳು ಹೂಳು ತುಂಬಿದ್ದು, ನೀರು ಮನೆಗಳಿಗೆ ನುಗ್ಗುತ್ತಿದೆ. ಒಂದೂ ಬೀದಿ ದೀಪಗಳಿಲ್ಲ. ವಾರ್ಡ್‌ ಕತ್ತಲಿನಿಂದ ಕೂಡಿದೆ. ಹಾವು ಚೇಳು ಹರಿದಾಡುತ್ತಿವೆ. ಈ ಕುರಿತು ಅನೇಕ ಬಾರಿ ತಿಳಿಸಿದ್ದರೂ ನಗರಸಭೆ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ ಎಂದು ಆರೋಪಿಸಿದರು.

ವಾರ್ಡ್‌ನಲ್ಲಿ ಎಲ್ಲೆಂದರಲ್ಲಿ ಕಸಕಡ್ಡಿ ಬಿದ್ದಿದ್ದು, ತಿಂಗಳಿಂದ ಘನತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ. ಇದರಿಂದ ಕಸದರಾಶಿ ಗಬ್ಬೆದ್ದು ನಾರುತ್ತಿದೆ. ವಾರ್ಡ್‌ ಸದಸ್ಯರೆ ಅಧ್ಯಕ್ಷರಿದ್ದಾರೆ. ಕರ್ಮಚಾರಿಗಳು ಅಧ್ಯಕ್ಷರ ಮನೆ ಮುಂದೆ ಮಾತ್ರ ಸ್ವತ್ಛಗೊಳಿಸುತ್ತಾರೆ. ಉಳಿದೆಡೆ ಕಸ ಕೂಡಾ ಬಳಿಯುತ್ತಿಲ್ಲ. ಕಳಪೆ ಗುಣಮಟ್ಟದ ಬಲ್ಬ್ಗಳನ್ನು ಹಾಕುತ್ತಿರುವುದರಿಂದ ಎರಡೆ ದಿನಗಳಲ್ಲಿ ಬಲ್ಬ್ಗಳು ಸುಟ್ಟುಹೋಗುತ್ತಿವೆ. ಈ ಬಗ್ಗೆ ಅಧ್ಯಕ್ಷರ ಗಮನಕ್ಕೆ ತಂದಿದ್ದರೂ ಪ್ರಯೋಜನ ಆಗುತ್ತಿಲ್ಲ ಎಂದು ದೂರಿದರು.

ಮಳೆಗಾಲವಿದ್ದರೂ ವಾರ್ಡ್‌ ಜನರು ಕುಡಿಯುವ ನೀರಿಗೆ ಪರದಾಡುತ್ತಿದ್ದಾರೆ. ಸಮರ್ಪಕವಾಗಿ ನೀರು ಬಿಡುತ್ತಿಲ್ಲ. ತಿಂಗಳು ಗಟ್ಟಲೆ ನೀರು ಬರುವುದಿಲ್ಲ. ವಾರ್ಡ್‌ ಬೆಟ್ಟದ ಮೇಲಿರುವುದರಿಂದ ಮಳೆ ನೀರಿನಿಂದ ರಸ್ತೆಗಳು ಕೊಚ್ಚಿಹೋಗಿವೆ. ನಗರಸಭೆಯವರು ಮುರಂ ಹಾಕ್ಕಿ ರಸ್ತೆ ಸರಿಪಡಿಸುತ್ತಿಲ್ಲ. ಈ ಎಲ್ಲ ಸಮಸ್ಯೆಗಳಿಂದ ಬೇಸತ್ತು ಹೋಗಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಾರದೊಳಗಾಗಿ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಕಾರ್ಯಾಲಯಕ್ಕೆ ಮುಳ್ಳುಬೇಲಿ ಹಚ್ಚಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ನಗರ ಕೋಶಾಧಿಕಾರಿಗೆ ಬರೆದ ಮನವಿಯನ್ನು ಪೌರಾಯುಕ್ತ ಜೀವನಕುಮಾರ ಕಟ್ಟಿಮನಿಗೆ ಸಲ್ಲಿಸಿದರು. ಪ್ರಮುಖರಾದ ಉದಯಕುಮಾರ, ಪ್ರಕಾಶ ಹೂಗಾರ, ಚಂದ್ರಶೇಖರ ಗೋಗಿ, ಸಾಬಣ್ಣ ಮಡಿವಾಳ, ಸಚಿನ್‌ ನಾಯಕ, ಪ್ರಕಾಶ ಹಳ್ಳಿಗಿಡ, ಮೌನೇಶ ಕಟ್ಟಿಮನಿ, ರವಿಕುಮಾರ ಮಡಿವಾಳ, ಪ್ರಜ್ವಲ ಕಟ್ಟಿಮನಿ, ಪವನಗೋಗಿ, ಆನಂದ ಮಡಿವಾಳ, ಮುತ್ತುಗೌಡ ಸಂತೋಷ ಮಡಿವಾಳ, ಭರತ ಮಡಿವಾಳ, ರಾಜಶೇಖರ ಮೇಟಿ, ರಿಯಾಜ್‌ಶೇಖ್‌, ಗುರು ಮಡಿವಾಳ, ಚಂದ್ರಶೇಖರ ಮಡಿವಾಳ ಇತರರಿದ್ದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.