ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
Team Udayavani, Dec 27, 2021, 3:30 PM IST
ನಾರಾಯಣಪುರ: ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಯಣ್ಣಿವಡಗೇರಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಬಸವರಾಜ ಮತ್ತು ಮಲ್ಲನಗೌಡ ಅವರನ್ನು ಶಾಲೆ ವತಿಯಿಂದ ಅಭಿನಂದಿಸಲಾಯಿತು.
ಮುಖ್ಯಗುರು ಸಂಗಯ್ಯ ಬಿಕ್ಷಾವತಿಮಠ ಮಾತನಾಡಿ, ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಯಾದಗಿರಿಯಲ್ಲಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಯಣ್ಣಿವಡಗೇರಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಕೀರ್ತಿ ತಂದಿದ್ದಾರೆ. ಸರ್ಧಾತ್ಮಕ ಯುಗದಲ್ಲಿ ಪಠ್ಯ ಚಟುವಟಿಕೆಯಲ್ಲಿ ಉತ್ತಮ ಅಂಕ ಗಳಿಸುವ ಜತೆಗೆ ಸಾಮಾನ್ಯ ಜ್ಞಾನದ ಅವಶ್ಯಕತೆ ಇದ್ದು, ಇಂತಹ ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು.
ಈ ವೇಳೆ ಎಸ್‌ಡಿಎಂಸಿ ಅಧ್ಯಕ್ಷ ಹಣಮಂತ ಪೂಜಾರಿ, ಶಿಕ್ಷಕರಾದ ಪ್ರಕಾಶ ದಿಡ್ಡಿಮನಿ, ಮಂಜುನಾಥ, ಶರಣಪ್ಪ, ಸಂಜೀವಕುಮಾರ, ಬಸವರಾಜ, ವೆಂಕಟೇಶ, ನೀಲಮ್ಮ, ಭೀಮಾಶಂಕರ ಇತರರಿದ್ದರು.
ಜೋಗುಂಡಭಾವಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಗಂಗಮ್ಮ ಜಗದೀಶ ಗುರಿಕಾರ, ರಕ್ಷಿತಾ ಗುರುಪಾದಪ್ಪ ಸಜ್ಜನ್ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯೋಪಾಧ್ಯಾಯ ಜಗದೇವ ಹುಲ್ಲೂರ ತಿಳಿಸಿದರು. ಈ ವೇಳೆ ಶಿಕ್ಷಕರಾದ ದೋಂಡಿಬಾ, ಗುಂಡಪ್ಪ ಕುರಿ, ಬಸಪ್ಪ ನಾಯ್ಕ, ಶ್ರೀಶೈಲ್, ವಿಜಯಾ, ಮಂಜುಳಾ, ಸವಿತಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.