ಕಾಂಗ್ರೆಸ್ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
Team Udayavani, Feb 27, 2022, 2:33 PM IST
ಯಾದಗಿರಿ: ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿ ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಪಕ್ಷಕ್ಕೆ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ. ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಗದ್ದಲವೆಬ್ಬಿಸಿ ಜನಪರ ಚರ್ಚೆ ಮಾಡದೇ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸಭೆ ಅಧಿವೇಶನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅಸಂಬದ್ಧವಾಗಿ ನಡೆದುಕೊಂಡಿದ್ದು, ಅವರ ವರ್ತನೆ ಒಬ್ಬ ಹಿರಿಯ ಶಾಸಕರಿಗೆ ತಕ್ಕುದಾಗಿರಲಿಲ್ಲ. ಸಚಿವ ಈಶ್ವರಪ್ಪನವರ ಮೇಲೆ ಜಗಳಕ್ಕೆ ಹೋಗಿದ್ದ ಶಿವಕುಮಾರ ಅವರ ವರ್ತನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ನಡವಳಿಗಳು ವಿಧಾನಸಭೆಗೆ ಶೋಭೆ ತರುವುದಿಲ್ಲ ಎಂದರು.
ಬಿಜೆಪಿ ಕಾರ್ಯಕರ್ತರು ಸುಭಾಷ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿದ್ದರಿಂದ ಕೆಲ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯವಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ| ಶರಣಭೂಪಾಲ ರೆಡ್ಡಿ, ಸಿಎಂಸಿ ಅಧ್ಯಕ್ಷರಾದ ವಿಶಾಲ್ ಪಾಟೀಲ್, ದೇವೇಂದ್ರನಾಥ ನಾದ, ಸುರೇಶ ಅಂಬಿಗೇರ ಸೇರಿದಂತೆ ಹಲವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.