ಕೋವಿಡ್ ತಡೆಗೆ ಸ್ಥಳೀಯ ಸಂಸ್ಥೆ ಸದಸ್ಯರ ಸಹಕಾರ ಅಗತ್ಯ
Team Udayavani, Jun 13, 2020, 7:40 AM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್-19 ಹರಡುವಿಕೆ ತಡೆ ನಿಟ್ಟಿನಲ್ಲಿ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.
ಯಾದಗಿರಿ ನಗರಸಭೆಯಲ್ಲಿ ಬುಧವಾರ ಕೋವಿಡ್19 ಮುಂಜಾಗ್ರತೆ ಕ್ರಮ ಹಾಗೂ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೈಗೊಂಡ ನಿಯಂತ್ರಣ ಮತ್ತು ಚಿಕಿತ್ಸೆ ಬಗ್ಗೆ ನಗರಸಭೆ ಸದಸ್ಯರಿಗೆ ಹಮ್ಮಿಕೊಂಡಿದ್ದ ತರಬೇತಿ ಮತ್ತು ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೌರ ಕಾರ್ಮಿಕರಿಗೆ ಸ್ವಯಂ ರಕ್ಷಣೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಸ್ ಮಾಡುವ ಕುರಿತು ತಿಳಿಸಬೇಕು. ತಮ್ಮ ವಾರ್ಡ್‌ಗಳಲ್ಲಿ ಗೃಹ ದಿಗ್ಬಂಧನದಲ್ಲಿರುವ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾವಹಿಸಬೇಕು. ಅವರು ಮನೆಯಿಂದ ಹೊರಬಂದ ಪಕ್ಷದಲ್ಲಿ ತಕ್ಷಣವೇ ಸಂಬಂ ಧಿಸಿದ ಸ್ಥಳೀಯ ಸಂಸ್ಥೆಗೆ ಮಾಹಿತಿ ನೀಡಬೇಕು. ಯಾವುದೇ ವ್ಯಕ್ತಿ ನೆಗಡಿ, ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿರುವುದು ಕಂಡುಬಂದಲ್ಲಿ ತಕ್ಷಣವೇ ಆರೋಗ್ಯ ಸಿಬ್ಬಂದಿಗೆ ತಿಳಿಸಲು ಕೋರಿದರು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದವರಿಗೆ 100 ರೂ. ದಂಡ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡುಬಂದಲ್ಲಿ 150 ರೂ. ದಂಡ, ಅಂಗಡಿ ಮುಂಗಟ್ಟುಗಳಲ್ಲಿ ಸಾರ್ವಜನಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲವಾದಲ್ಲಿ 1000 ರೂ. ದಂಡ ವಿಧಿಸಲಾಗುವುದು ಹಾಗೂ ವ್ಯಾಪರಸ್ಥರ ಪರವಾನಗಿ ರದ್ದುಪಡಿಸಲಾಗುವುದು. ವ್ಯಾಪಾರಸ್ಥರಿಂದ ಮೇಲಿನ ಎಲ್ಲ ನಿಯಮಗಳನ್ನು ಪಾಲಿಸುವ ಕುರಿತು ಅಫಿಡೆವಿಟ್ ಪಡೆಯಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.